ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್​​ಗೂ, ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ: ಸಿಎಂ, ಡಿಕೆಶಿ ಭಿನ್ನ ಹೇಳಿಕೆ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ, ಯಾರನ್ನೂ ರಕ್ಷಿಸಲ್ಲ. ಮಂಗಳೂರು ಸ್ಫೋಟ ಪ್ರಕರಣಕ್ಕೂ, ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪಕ್ರರಣಕ್ಕೂ ಸಾಮ್ಯತೆ ಇದೆ. ಈ ಬಗ್ಗೆ ನಮ್ಮ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು.

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್​​ಗೂ, ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ: ಸಿಎಂ, ಡಿಕೆಶಿ ಭಿನ್ನ ಹೇಳಿಕೆ
ಡಿಸಿಎಂ ಡಿಕೆ ಶಿವಕುಮಾರ್​
Follow us
Anil Kalkere
| Updated By: ವಿವೇಕ ಬಿರಾದಾರ

Updated on:Mar 02, 2024 | 12:12 PM

ಬೆಂಗಳೂರು, ಮಾರ್ಚ್​​ 02: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Bengaluru Rameshwaram Cafe Bomb Blast) ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ, ಯಾರನ್ನೂ ರಕ್ಷಿಸಲ್ಲ. ಮಂಗಳೂರು ಕುಕ್ಕರ್​ ಬಾಂಬ್​​ ಸ್ಫೋಟ (Mangaluru Cooker Bomb Blast) ಪ್ರಕರಣಕ್ಕೂ, ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್​​​ ಸ್ಫೋಟ ಪಕ್ರರಣಕ್ಕೂ ಸಾಮ್ಯತೆ ಇದೆ. ಈ ಬಗ್ಗೆ ನಮ್ಮ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು. “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ಕುಕ್ಕರ್​ ಬಾಂಬ್​ ಬ್ಲಾಸ್​​ಗೂ, ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್​ಗೂ ಸಾಮ್ಯತೆ ಇಲ್ಲ ಎಂದಿದ್ದರು. ಈ ಮೂಲಕ ಉಪಮುಖ್ಯಮಂತ್ರಿ ಮತ್ತು ಮುಖ್ಯಮಂತ್ರಿಗಳ ನಡುವೆ ಮಾಹಿತಿ ಕೊರೆತೆ ಇದೆ ಎದ್ದು ಕಾಣುತ್ತಿದೆ.”

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ಆರೋಪಿ ಬಸ್​ನಲ್ಲಿ ಬಂದು ಹೋಗಿರುವ ದೃಶ್ಯಗಳು ಪತ್ತೆಯಾಗಿವೆ. ಆರೋಪಿ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಎಲ್ಲ ಆಯಾಮಗಳಲ್ಲೂ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಪ್ರಕರಣದ ತನಿಖೆಗೆ ಪೊಲೀಸರು 7-8 ತಂಡ ರಚನೆ ಮಾಡಿದ್ದಾರೆ. ಪ್ರಕರಣದ ತನಿಖೆಗೆ ಪೊಲೀಸರಿಗೆ ಮುಕ್ತ ಅವಕಾಶಕೊಟ್ಟಿದ್ದೇವೆ ಎಂದರು.

ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್​​ಗೂ, ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ ಇಲ್ಲ: ಸಿದ್ದರಾಮಯ್ಯ

ಬೆಂಗಳೂರಿನ ಜನರು ಯಾವುದೆ ಆತಂಕಪಡುವ ಅಗತ್ಯವಿಲ್ಲ. ಬ್ರ್ಯಾಂಡ್ ಬೆಂಗಳೂರು ಹೆಸರು ಹಾಳು ಮಾಡುವ ಪ್ರಯತ್ನ ನಡೆದಿದೆ. ಬೆಂಗಳೂರನ್ನು ಹಾಳು ಮಾಡುವ ಎಲ್ಲ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರು ಏನೇ ರಾಜಕೀಯ ಮಾಡಿಕೊಳ್ಳಲಿ, ಅದರ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ನಮಗೆ ಸಹಕಾರ ಕೊಡೋದಾದರೆ ಕೊಡಲಿ, ರಾಜಕೀಯ ಮಾಡುತ್ತಾರೆಂದರೆ ಮಾಡಿಕೊಳ್ಳಲಿ ಎಂದು ಟಾಂಗ್​ ಕೊಟ್ಟರು.

ಇದು ಏಕವ್ಯಕ್ತಿ ಮಾಡಿರುವುದಾ ಅಥವಾ ಸಂಘಟನೆ ಮಾಡಿರುವುದಾ ನೋಡಬೇಕಿದೆ. ಮಂಗಳೂರು ಬ್ಲಾಸ್ಟ್​ಗೂ ಇದಕ್ಕೂ ಸಾಮ್ಯತೆ ಕಾಣಿಸುತ್ತಿದೆ. ನಮ್ಮ ಪೊಲೀಸ್ ಅಧಿಕಾರಿಗಳು ಹೇಳುವ ಪ್ರಕಾರ ಬ್ಲಾಸ್ಟ್​ಗೆ ಬಳಸಿರುವ ವಸ್ತುಗಳನ್ನು ನೋಡಿದಾಗ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಆದ ಸ್ಫೋಟದಲ್ಲಿ ಸಾಮ್ಯತೆ ಇದೆ. ಮಂಗಳೂರು, ಶಿವಮೊಗ್ಗ ಪೊಲೀಸ್​ ಅಧಿಕಾರಿಗಳು ಕೂಡ ಬೆಂಗಳೂರಿಗೆ ಬಂದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಬಿಬಿಎಂಪಿಯಿಂದ ಗಾಯಾಳುಗಳಿಗೆ ಪರಿಹಾರ

ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚ ಭರಿಸುವ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಏನೇ ಪರಿಹಾರ ಕೊಡುವುದಿದ್ದರೂ ಬಿಬಿಎಂಪಿಯಿಂದ ಕೊಡುತ್ತೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:54 am, Sat, 2 March 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ