ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಫಲಕ ಅಳವಡಿಸಲು ಆದೇಶ

ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಫಲಕ ಅಳವಡಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್‌ ಆದೇಶ ನೀಡಿದ್ದಾರೆ.

ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕಡ್ಡಾಯವಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್ ಫಲಕ ಅಳವಡಿಸಲು ಆದೇಶ
ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್‌
Follow us
ಕಿರಣ್ ಹನುಮಂತ್​ ಮಾದಾರ್
|

Updated on: Jun 16, 2023 | 7:48 AM

ಬೆಂಗಳೂರು: ರಾಜ್ಯದ ಎಲ್ಲಾ ಪೊಲೀಸ್ ಠಾಣೆ(Police Station)ಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್(Phone Number) ಫಲಕ ಅಳವಡಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್‌ ಆದೇಶ ನೀಡಿದ್ದಾರೆ. ಹೌದು ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಎಸ್​ಪಿ(SP), ಎಎಸ್​ಪಿ(ASP), ಡಿವೈಎಸ್‌ಪಿ(Dysp) ಅವರ ಫೋನ್ ನಂಬರ್​ಗಳನ್ನು ಪ್ರತಿ ಪೊಲೀಸ್ ಠಾಣೆಯಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಯಲ್ಲಿ ಹಾಕಬೇಕು ಎಂದು ಆದೇಶಿಸಲಾಗಿದೆ.

ಎರಡು ದಿನದಲ್ಲಿ ಫಲಕ ಹಾಕಿ ವರದಿಯನ್ನ ಡಿಜಿ ಕಚೇರಿಗೆ ಕಳಿಸಲು ಸೂಚನೆ

ಇನ್ನು ಈ ಆದೇಶದಂತೆ ಪೊಲೀಸ್​ ಠಾಣೆಯ ಆಯ್ದ ಸ್ಥಳದಲ್ಲಿ ಫೋನ್ ನಂಬರ್‌ಗಳುಳ್ಳ ಫಲಕವನ್ನ ಅಳವಡಿಸಿ, ಎರಡು ದಿನದಲ್ಲಿ ವರದಿಯನ್ನ ಡಿಜಿ ಕಚೇರಿಗೆ ಕಳಿಸಲು ಸೂಚನೆ ನೀಡಲಾಗಿದೆ. ಇದರ ಜೊತೆಗೆ ಠಾಣೆಯಲ್ಲಿ ಯಾವುದೇ ದೂರು ಸ್ವೀಕರಿಸದಿದ್ದಲ್ಲಿ ಹಿರಿಯ ಅಧಿಕಾರಿಗಳನ್ನ ಸಂಪರ್ಕಿಸಿ ಎಂದು ಫಲಕದ ಮೇಲೆ ಬರೆಯಬೇಕು ಎನ್ನಲಾಗಿದೆ. ಇದರಿಂದ ಸಾರ್ವಜನಿಕರಿಗೆ ಪೊಲೀಸರ ಮೇಲೆ ಮತ್ತಷ್ಟು ಭರವಸೆ ಹೆಚ್ಚಿದೆ. ಒಂದು ವೇಳೆ ಜಿಲ್ಲೆಯ ಯಾವುದೇ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲು ಪೊಲೀಸರು ನಿರಾಕರಿಸಿದರೆ, ಕೂಡಲೇ ಉನ್ನತ ಪೊಲೀಸ್​ ಅಧಿಕಾರಿಗಳಿಗೆ ಕರೆ ಮಾಡುವ ಮೂಲಕ ಸಮಸ್ಯೆಯನ್ನ ಹೇಳಿಕೊಳ್ಳಬಹುದಾಗಿದೆ.

ಇದನ್ನೂ ಓದಿ:ಹೆಡ್ ಕಾನ್ಸ್​ಟೇಬಲ್ ಆತ್ಮಹತ್ಯೆ; ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಟ್ರಾಫಿಕ್ ಪೊಲೀಸ್

ಕರ್ನಾಟಕವನ್ನು ಮಾದಕವಸ್ತು ಮುಕ್ತ ರಾಜ್ಯವನ್ನಾಗಿ ಮಾಡುವ ಗುರಿ; ಅಲೋಕ್ ಮೋಹನ್

ಇನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದ ವೇಳೆ ಅಲೋಕ್ ಮೋಹನ್ ಮಾಧ್ಯಮಗಳ ಜೊತೆ ಮಾತನಾಡಿದ್ದರು ‘ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಮತ್ತು ಅಪರಾಧಗಳ ತಡೆಗಟ್ಟುವಿಕೆ ಮತ್ತು ಪತ್ತೆಗೆ ಆದ್ಯತೆ ನೀಡಲಾಗುತ್ತದೆ. ಕರ್ನಾಟಕವನ್ನು ಮಾದಕ ದ್ರವ್ಯ ಮುಕ್ತ ರಾಜ್ಯವನ್ನಾಗಿ ಮಾಡುವುದು ನನ್ನ ಗುರಿಯಾಗಿದೆ ಎಂದಿದ್ದರು. ಭವಿಷ್ಯದಲ್ಲಿ ಹೆಚ್ಚಿನ ಅಪರಾಧಗಳು ಸೈಬರ್ ಅಪರಾಧಗಳಾಗಿರುತ್ತವೆ ಎಂದು ಒತ್ತಿ ಹೇಳಿದ್ದ ಅವರು, ಹೊಸ ತಂತ್ರಜ್ಞಾನದ ಅಪರಾಧಗಳನ್ನು ತನಿಖೆ ಮಾಡಲು ಪ್ರತಿಯೊಬ್ಬರನ್ನು ಸಕ್ರಿಯಗೊಳಿಸಲು ಪೊಲೀಸ್ ಸಿಬ್ಬಂದಿಗೆ ತರಬೇತಿ ನೀಡಲಾಗುವುದು. ಜೊತೆಗೆ ಸಾರ್ವಜನಿಕರ ದೂರುಗಳಿಗೆ ಸ್ಪಂದಿಸದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್