ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್ ಬೆಂಗಳೂರಿನಲ್ಲಿ ನೇಣುಬಿಗಿದು ಆತ್ಮಹತ್ಯೆ

ಭ್ರೂಣ ಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದ ಮಂಡ್ಯದ ವೈದ್ಯ ಸತೀಶ್ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಬೆನ್ನಲ್ಲೇ ಮತ್ತೊಬ್ಬ ವೈದ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಯಾಗಿರುವ ನಟರಾಜ್ ಬೆಂಗಳೂರು ನಗರದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್ ಬೆಂಗಳೂರಿನಲ್ಲಿ ನೇಣುಬಿಗಿದು ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ಡಾ.ನಟರಾಜ್
Follow us
Prajwal Kumar NY
| Updated By: Rakesh Nayak Manchi

Updated on: Dec 02, 2023 | 12:54 PM

ಬೆಂಗಳೂರು, ಡಿ.2: ಭ್ರೂಣ ಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದ ಮಂಡ್ಯದ (Mandya) ವೈದ್ಯ ಸತೀಶ್ ಕೊಡಗಿನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಬೆನ್ನಲ್ಲೇ ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್ ಬೆಂಗಳೂರಿನಲ್ಲಿ (Bengaluru) ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ನಟರಾಜ್ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನಟರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಹೃದಯಾಘಾತವಾಗಿದ್ದ ಹಿನ್ನೆಲೆ ನಟರಾಜ್ ರಜೆಯಲ್ಲಿದ್ದರು. ಇಂದು ಮಂಡ್ಯಕ್ಕೆ ಹೋಗಿ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಆದರೆ ಮಂಡ್ಯ ಡಿಹೆಚ್​ಒ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಭ್ರೂಣ ಹತ್ಯೆ ಕಿಂಗ್ ಪಿನ್ ಆರೋಪಿ ವೈದ್ಯ ಕೊಡಗಿನಲ್ಲಿ ಸಾವು: ಸೂಸೈಡ್ ಮಾಡಿಕೊಂಡ್ರಾ ಡಾಕ್ಟರ್?

ಇದರಿಂದ ಬೇಸತ್ತು ಡಾ.ನಟರಾಜ್​​ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ