ಮಂಡ್ಯ ವಿದ್ಯಾರ್ಥಿನಿ ಸಾವು ಪ್ರಕರಣ: ಇದು ಅತ್ಯಂತ ಹೇಯ ಕೃತ್ಯ ಎಂದು ಸಿದ್ದರಾಮಯ್ಯ ಟ್ವೀಟ್​​​

ಪ್ರಕರಣದ ಬಗ್ಗೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಟ್ವೀಟ್​ ಮೂಲಕ ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.

ಮಂಡ್ಯ ವಿದ್ಯಾರ್ಥಿನಿ ಸಾವು ಪ್ರಕರಣ: ಇದು ಅತ್ಯಂತ ಹೇಯ ಕೃತ್ಯ ಎಂದು ಸಿದ್ದರಾಮಯ್ಯ ಟ್ವೀಟ್​​​
ಸಿದ್ದರಾಮಯ್ಯ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 13, 2022 | 6:18 PM

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಪುಟ್ಟ ಬಾಲಕಿ ದಿವ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಿರುವುದು ಅತ್ಯಂತ ಹೇಯ ಕೃತ್ಯ.​​ ವಿದ್ಯಾರ್ಥಿನಿಗೆ ಆದ ಸ್ಥಿತಿ ಬೇರೆ ಯಾರಿಗೂ ಬರಬಾರದು. ಪ್ರಕರಣದ ಬಗ್ಗೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಟ್ವೀಟ್​ ಮೂಲಕ ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ. ಮೃತ ವಿದ್ಯಾರ್ಥಿನಿಯ ಕುಟುಂಬಸ್ಥರೊಂದಿಗೆ ಮಾತನಾಡಿ, ಸಾಂತ್ವನ ಹೇಳಿದ್ದೇನೆ ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ. ಟ್ಯೂಷನ್ ಶಿಕ್ಷಕನೇ ವಿದ್ಯಾರ್ಥಿನಿಯನ್ನು ಕೊಲೆಗೈದು ಇಷ್ಟೆಲ್ಲಾ ಹೈಡ್ರಾಮಾ ಸೃಷ್ಟಿಸಿರುವುದು ಪತ್ತೆಯಾಗಿದೆ. ಕಾಂತರಾಜ್ ಎಂಬ ಶಿಕ್ಷಕ ವಿದ್ಯಾರ್ಥಿ ದಿವ್ಯಾಳನ್ನ ಟ್ಯೂಷನ್​ಗೆ ಕರೆಸಿ ಕೊಲೆ ಮಾಡಿ ಸಂಪಿನಲ್ಲಿ ಎಸೆದಿದ್ದಾನೆ. ಆರೋಪಿ ಕಾಂತರಾಜ್ ಬಂಧಿಸಿ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವ ಬಗ್ಗೆ ಆರೋಪಿ ಬಾಯ್ಬಿಟ್ಟಿದ್ದಾನೆ. ಪ್ರಕರಣ ಸಂಬಂಧ ಮಳವಳ್ಳಿ ಟೌನ್​ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ: ಹೆಚ್​.ಡಿ ಕುಮಾರಸ್ವಾಮಿ

ಈ ವಿಚಾರವಾಗಿ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಕೂಟ ಟ್ವೀಟ್​ ಮಾಡಿದ್ದು, ಮಳವಳ್ಳಿಯಲ್ಲಿ ಟ್ಯೂಶನ್ ಗೆ ಬಂದ 10 ವರ್ಷದ ಶಾಲಾ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಹೇಯ ಘಟನೆ. ಇಂಥ ಪಾತಕ ಕೃತ್ಯವನ್ನು ನಾನು ಖಂಡಿಸುತ್ತೇನೆ. ಹೆತ್ತ ಮಗುವನ್ನು ಕಳೆದುಕೊಂಡು ಶೋಕದಲ್ಲಿರುವ ಆ ಬಾಲಕಿಯ ಪೋಷಕರ ದುಃಖದಲ್ಲಿ ನಾನೂ ಭಾಗಿ.

ನೂರುಕಾಲ ಬಾಳಿ ಬದುಕಬೇಕಿದ್ದ ಮಗುವಿನ ದುರ್ಮರಣ ನನಗೆ ಅತೀವ ನೋವುಂಟು ಮಾಡಿದೆ. ಆ ಬಾಲಕಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಆ ತಂದೆ ತಾಯಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ನ್ಯಾಯ ಕೇಳುತ್ತೇನೆ: ಪೋಷಕರ ಆಕ್ರೋಶ

ನನ್ನ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ನ್ಯಾಯ ಕೇಳುತ್ತೇನೆ ಎಂದು ಮಳವಳ್ಳಿಯಲ್ಲಿ ಟಿವಿ9ಗೆ ಬಾಲಕಿ ಪೋಷಕರ ಹೇಳಿಕೆ ನೀಡಿದರು. ಬೇಟಿ ಬಚಾವೋ ಬೇಟಿ ಪಡಾವೋ ಅಂತಾರಲ್ಲ ಹಾಗಂದ್ರೆ ಇದೇನಾ? ಎಂದು ಪ್ರಶ್ನಿಸಿದರು. ನನ್ನ ಮಗಳು ಏನು ತಪ್ಪು ಮಾಡಿದ್ದಳು, ಆಕೆಗೆ ಯಾಕೆ ಇಂತ ಶಿಕ್ಷೆ. ಮಕ್ಕಳು ಚೆನ್ನಾಗಿ ವಿದ್ಯಾಭ್ಯಾಸ ಮಾಡಲಿ ಎಂದು ಶಾಲೆಗೆ ಟ್ಯೂಷನ್​ಗೆ ಕಳುಹಿಸುತ್ತೇವೆ. ಆದರೆ ಅಕ್ಷರ ಹೇಳಿ ಕೊಡುವವರೇ ಹೀಗೆ ಮಾಡಿದರೆ ನಾವು ಎಲ್ಲಿಗೆ ಹೋಗಬೇಕು. ಆರೋಪಿ ಕಾಂತರಾಜನಿಗೆ ಕಠಿಣ ಶಿಕ್ಷೆ ಆಗಲೇ ಬೇಕು.

ಒಂದು ಗಲ್ಲಿಗೆ ಹಾಕಿ ಇಲ್ಲಾ ಎನ್ ಕೌಂಟರ್ ಮಾಡಿ, ಅದು ಆಗಿಲ್ವ ನಮ್ಮ ಕೈಗೆ ಒಪ್ಪಿಸಿ ಎಂದು ಮೃತ ದಿವ್ಯಾ ಪೋಷಕರಿಂದ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಸದ್ಯ ಐಪಿಸಿ 302 ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರೊ ಪೊಲೀಸರು, ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕ ಪೋಕ್ಸೊ ಕಾಯ್ದೆ ಹಾಕಲು ಚಿಂತನೆ ನಡೆಸಿದ್ದಾರೆ.

ಘಟನೆ ಹಿನ್ನೆಲೆ

ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​ನಲ್ಲಿ ಬಾಲಕಿ ಶವಪತ್ತೆಯಾಗಿತ್ತು. ದಿವ್ಯಾ ಮಧ್ಯಾಹ್ನ ಟ್ಯೂಷನ್​ಗೆ ತೆರಳಿದ್ದಳು. ಎಷ್ಟು ಸಮಯ ಕಳೆದರೂ ಬಾಲಕಿ ಮನೆಗೆ ಬಾರದ ಹಿನ್ನೆಲೆ ಕುಟುಂಬಸ್ಥರು ಹುಡುಕಾಡಿದ್ದಾರೆ. ಈ ವೇಳೆ ಟ್ಯೂಷನ್ ಹಿಂಭಾಗದಲ್ಲಿ ನಿರ್ಮಾಣ ಹಂತದ ಮನೆಯ ಸಂಪ್​​ನಲ್ಲಿ ಬಾಲಕಿ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ಮಳವಳ್ಳಿ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಶವಾಗಾರಕ್ಕೆ ರವಾನಿಸಿದ್ದರು. ಇದರ ನಡುವೆ ಬಾಲಕಿಯನ್ನ ಅತ್ಯಾಚಾರವೆಸಗಿ ಕೊಲೆಗೈದಿರುವ ಬಗ್ಗೆ ಪೋಷಕರು ಆರೋಪ ಮಾಡಿದ್ದರು. ಸದ್ಯ ಈಗ ಪೊಲೀಸರ ವಿಚಾರಣೆ ವೇಳೆ ಸತ್ಯ ಬಯಲಾಗಿದೆ.

ನಿನ್ನೆ ಬಾಲಕಿಯನ್ನ ಕೊಂದು ಸಂಪಿನಲ್ಲಿ ಎಸೆಯಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದು ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುವಂತೆ ಒತ್ತಾಯಿಸಿದ್ದರು. ಮಳವಳ್ಳಿ ಟೌನ್ ಪೊಲೀಸ್ ಠಾಣೆ ಮುಂದೆ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಟ್ಯೂಷನ್ ಶಿಕ್ಷಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಸದ್ಯ ಶಿಕ್ಷಕ ತಪ್ಪು ಒಪ್ಪಿಕೊಂಡಿದ್ದಾನೆ. ಹೀಗಾಗಿ ಆರೋಪಿ ವಿರುದ್ಧ ಕೊಲೆ ಕೇಸ್ ದಾಖಲಾಗಿದೆ. ಇನ್ನು ಬಾಲಕಿಯ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಕೇಸ್​ಗೆ ಮತ್ತಷ್ಟು ತಿರುವು ಸಿಗುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ