ಮಂಡ್ಯ ಮೈ ಶುಗರ್ ಕಾರ್ಖಾನೆ: ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ನಡೆಸಲು ತೀರ್ಮಾನ – ಸಿಎಂ ಬಸವರಾಜ ಬೊಮ್ಮಾಯಿ
ಮಂಡ್ಯ ಮೈ ಶುಗರ್ ಕಾರ್ಖಾನೆ ಖಾಸಗೀಕರಣ ವಿಚಾರ ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ನಡೆಸಲು ತೀರ್ಮಾನ
ಬೆಂಗಳೂರು: ಮಂಡ್ಯ ಮೈ ಶುಗರ್ ಕಾರ್ಖಾನೆ ಖಾಸಗೀಕರಣ ವಿಚಾರವನ್ನು ರಾಜ್ಯ ಸರ್ಕಾರ ಕೈ ಬಿಟ್ಟಿದೆ. ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೊನೆಗೂ ಮಂಡ್ಯ ಜನಪ್ರತಿನಿಧಿಗಳು ಮತ್ತು ರೈತರ ಒತ್ತಡಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಖಾಸಗೀಕರಣ ನಿರ್ಧಾರದಿಂದ ತಾತ್ಕಾಲಿಕವಾಗಿ ಹಿಂದೆ ಸರಿಯಲಾಗಿದ್ದು, ಸರ್ಕಾರವೇ ಫ್ಯಾಕ್ಟರಿ ನಡೆಸಲು ಸಂಪುಟದಲ್ಲಿ ನಿರ್ಧರಿಸಲಾಗಿದೆ.
ಕಾರ್ಖಾನೆ ಪುನಃಶ್ಚೇತನಕ್ಕೆ ತಕ್ಷಣವೇ ತಜ್ಞರ ಸಮಿತಿ ನೇಮಕ ಮಾಡಲಾಗುವುದು. ಮೂರು ತಿಂಗಳಲ್ಲಿ ತಜ್ಞರ ಸಮಿತಿ ವರದಿ ನೀಡಲಿದೆ. ಕಾರ್ಖಾನೆಯ ಪುನಃಶ್ಚೇತನಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಲಾಗುವುದು. ಮುಂದಿನ ವರ್ಷದಿಂದ (ಮುಂದಿನ ಹಂಗಾಮು) ಕಬ್ಬು ನುರಿಸಲು ಬೇಕಾದ ಎಲ್ಲ ವ್ಯವಸ್ಥೆ ಮಾಡಲಾಗುವುದು. ಮುಂದಿನ ಮೂರು ತಿಂಗಳಲ್ಲಿ ಆಡಳಿತಾಧಿಕಾರಿ ನೇಮಕವಾಗಲಿದೆ, ಅಗತ್ಯ ಹಣ ಬಿಡುಗಡೆ ಹಾಗೂ ಬೇಕಾದ ಎಲ್ಲ ಯಂತ್ರೋಪಕರಣ ರಿಪೇರಿಗೆ ಹಣ ಬಿಡುಗಡೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
(Mandya sugar factory not to be privatised karnataka government will run the factory)
Published On - 1:49 pm, Mon, 18 October 21