ಮಂಗಳೂರು ಕುಕ್ಕರ್​ ಬಾಂಬ್ ಸ್ಫೋಟ ಆರೋಪಿ ಶಂಕಿತ ಉಗ್ರ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್

|

Updated on: Mar 06, 2023 | 1:50 PM

ಕುಕ್ಕರ್​ ಬಾಂಬ್ ಸ್ಫೋಟ ವೇಳೆ ಗಂಭೀರ ಗಾಯಗೊಂಡಿದ್ದ ಶಾರಿಕ್​ನನ್ನು ಮಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಡಿಸ್ಚಾರ್ಜ್ ಮಾಡಲಾಗಿದೆ.

ಮಂಗಳೂರು ಕುಕ್ಕರ್​ ಬಾಂಬ್ ಸ್ಫೋಟ ಆರೋಪಿ ಶಂಕಿತ ಉಗ್ರ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಶಂಕಿತ ಉಗ್ರ ಶಾರಿಕ್
Follow us on

ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್​ ಬಾಂಬ್ ಸ್ಫೋಟ(Mangalore Cooker Blast) ಪ್ರಕರಣಕ್ಕೆ ಸಂಬಂಧಿಸಿ ಘಟನೆಯಲ್ಲಿ ಸುಟ್ಟು ಗಾಯಗೊಂಡಿದ್ದ ಶಂಕಿತ ಉಗ್ರ ಶಾರಿಕ್(Shariq) ಚೇತರಿಸಿಕೊಂಡಿದ್ದು ವಿಕ್ಟೋರಿಯಾ ಆಸ್ಪತ್ರೆಯಿಂದ(Victoria Hospital) ಡಿಸ್ಚಾರ್ಜ್ ಮಾಡಲಾಗಿದೆ. ಎರಡೂವರೆ ತಿಂಗಳ ಬಳಿಕ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾನೆ.

ಕುಕ್ಕರ್​ ಬಾಂಬ್ ಸ್ಫೋಟ ವೇಳೆ ಗಂಭೀರ ಗಾಯಗೊಂಡಿದ್ದ ಶಾರಿಕ್​ನನ್ನು ಮಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ 2022ರ ಡಿಸೆಂಬರ್​ 17ರಂದು ​ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎನ್​ಐಎ ಹಾಗೂ ಸ್ಥಳೀಯ ಪೊಲೀಸರ ಭದ್ರತೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಈಗ ಶಾರಿಕ್ ಸಂಪೂರ್ಣವಾಗಿ ಗುಣಮುಖನಾಗಿದ್ದು ಇಂದು ಡಿಸ್ಚಾರ್ಜ್ ಮಾಡಲಾಗಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಬಂಧನ ಪ್ರಕ್ರಿಯೆ ಪೂರ್ಣಗೊಳಿಸಿ ಎನ್.ಐ.ಎ ವಿಶೇಷ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಿದ್ದಾರೆ. ಕಸ್ಟಡಿಗೆ ಪಡೆದು ಶಾರಿಕ್​ನ ವಿಚಾರಣೆ ಮಾಡಲಿದ್ದಾರೆ.

ಇದನ್ನೂ ಓದಿ: ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌; ಬಾಂಬ್ ತಯಾರಿಸುವ ವೇಳೆ ಮೊಬೈಲ್ ಟ್ರೈನಿಂಗ್ ಪಡೆದ ಆರೋಪಿ

ಸ್ಫೋಟದ ಹೊಣೆ ಹೊತ್ತ ಐಎಸ್​ಐಎಸ್

ಇನ್ನು ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಸ್​ಐಎಸ್ (ISIS)​ ಉಗ್ರ ಸಂಘಟನೆ ಕೊನೆಗೂ ಸ್ಫೋಟದ ಹೊಣೆ ಹೊತ್ತಿದೆ. ಐಸಿಸ್​ ಸಂಘಟನೆಯ ವಕ್ತಾರ ಐಎಸ್​​ಕೆಪಿ (ಇಸ್ಲಾಮಿಕ್ ಸ್ಟೇಟ್ಸ್ ಕೊರಸನ್ ಪ್ರಾವಿನ್ಸ್​​) ನಡೆಸುವ ವಾಯ್ಸ್ ಆಫ್ ಕೂರಸ ನಿಯತಕಾಲಿಕೆಯಲ್ಲಿ ಕರ್ನಾಟಕದ ಮಂಗಳೂರು ಮತ್ತು ತಮಿಳುನಾಡಿನ ಕೊಯಮತ್ತೂರು ಸ್ಪೋಟದ ಹೊಣೆ ಹೊತ್ತಿರುವ ಕುರಿತಾಗಿ ಪ್ರಕಟಿಸಲಾಗಿದೆ.

ಶಂಕಿತ ಉಗ್ರ ಶಾರೀಕ್​ನನ್ನು ಬೆಂಬಲಿಸಿ ಇಸ್ಲಾಮಿಕ್​​​ ರೆಸಿಸ್ಟೆನ್ಸ್​ ಕೌನ್ಸಿಲ್​​ (Islamic Resistence Concil – IRC) ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿತ್ತು. ಶಂಕಿತ ಉಗ್ರ ಶಾರೀಕ್​ ನಮ್ಮ ಸಹೋದರ. ಮಂಗಳೂರಿನ ಕದ್ರಿ ದೇವಾಲಯದ ಮೇಲೆ ದಾಳಿಗೆ ಯತ್ನಿಸಲಾಗಿತ್ತು. ಮಂಗಳೂರು ಕೇಸರಿ ಭಯೋತ್ಪಾದಕರ ಭದ್ರಕೋಟೆಯಾಗಿದೆ. ಈ ಕಾರ್ಯಾಚರಣೆಯ ನಮ್ಮ ಉದ್ದೇಶ ಈಡೇರದಿದ್ದರೂ ರಾಜ್ಯ, ಕೇಂದ್ರ ಗುಪ್ತಚರ ಸಂಸ್ಥೆಗಳ ಕಣ್ತಪ್ಪಿಸಿ ದಾಳಿಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ಉಗ್ರರು ಎಚ್ಚರಿಕೆ ನೀಡಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:40 pm, Mon, 6 March 23