ಚುರುಕುಗೊಂಡ ಮಂಗಳೂರು ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣ; ಸ್ಥಳ ಮಹಜರು ಪ್ರಕ್ರಿಯೆ ನಡೆಸಿರುವ NIA ಅಧಿಕಾರಿಗಳು

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಆರೋಪಿ ಶಂಕಿತ ಉಗ್ರ ಶಾರಿಕ್​ ಜೊತೆ ಸೈಯದ್ ಯಾಸಿನ್​ನನ್ನು ಸಹ ಜುಲೈ 25 ರಿಂದ ಆಗಸ್ಟ್ 3 ರವರೆಗೆ ಎನ್​ಐಎ(NIA) ಕಸ್ಟಡಿಗೆ ಪಡೆದಿದೆ.

ಚುರುಕುಗೊಂಡ ಮಂಗಳೂರು ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣ; ಸ್ಥಳ ಮಹಜರು ಪ್ರಕ್ರಿಯೆ ನಡೆಸಿರುವ NIA ಅಧಿಕಾರಿಗಳು
ಚುರುಕುಗೊಂಡ ಮಂಗಳೂರು ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣ​
Follow us
Shivaprasad
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 29, 2023 | 1:45 PM

ಬೆಂಗಳೂರು, ಜು.29: ಮಂಗಳೂರು(Mangalore) ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಆರೋಪಿ ಶಂಕಿತ ಉಗ್ರ ಶಾರಿಕ್​ನನ್ನು ಜುಲೈ 25 ರಿಂದ ಆಗಸ್ಟ್ 3 ರವರೆಗೆ ಎನ್​ಐಎ(NIA) ಕಸ್ಟಡಿಗೆ ಪಡೆದಿದೆ. ಆತನ ಜೊತೆಗೆ ಸೈಯದ್ ಯಾಸಿನ್ ಸಹ NIA ಕಸ್ಟಡಿಗೆ ನೀಡಲಾಗಿದ್ದು, ಒಟ್ಟು 10 ದಿನಗಳ ಕಾಲ ತನಿಖೆ ನಡೆಯಲಿದೆ. ಇನ್ನು ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಸಂಬಂಧ ತೀವ್ರ ವಿಚಾರಣೆ ನಡೆಸುತ್ತಿರುವ ಎನ್​ಐಎ ಅಧಿಕಾರಿಗಳು, ಶಾರಿಕ್ ಮತ್ತು ಯಾಸಿನ್ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಹಲವು ಮಹತ್ವದ ವಿಚಾರಗಳನ್ನು ಶಾರಿಕ್ ಬಾಯಿಬಿಟ್ಟಿದ್ದು, ಪ್ರಮುಖವಾಗಿ ಹ್ಯಾಂಡ್ಲರ್​ಗೆ ಸಂಬಂಧಿಸಿದ ವಿಚಾರಗಳು ಬೆಳಕಿಗೆ ಬಂದಿದೆ.

ಸ್ಥಳ ಮಹಜರು ಪ್ರಕ್ರಿಯೆ ನಡೆಸಿರುವ NIA ಅಧಿಕಾರಿಗಳು

ಸ್ಫೋಟ ಹಿನ್ನಲೆ NIA ತನಿಖೆ ನಡೆಸುತ್ತಿದೆ. ಈ ಹಿನ್ನಲೆ ಮೈಸೂರು, ಮಡಿಕೇರಿ ಮತ್ತು ಮಂಗಳೂರಿನಲ್ಲಿ ಸ್ಥಳ ಮಹಜರು ಪ್ರಕ್ರಿಯೆ ನಡೆದಿದ್ದು, ಅದನ್ನು ಪೂರ್ಣಗೊಳಿಸಿ ಅಧಿಕಾರಿಗಳು ಶಾರಿಕ್​ನನ್ನು ವಾಪಸ್ ಬೆಂಗಳೂರಿಗೆ ಕರೆತಂದಿದ್ದಾರೆ. ಜೊತೆಗೆ ಮೈಸೂರಿನಲ್ಲಿ ಶಾರಿಕ್ ವಾಸ್ತವ್ಯವಿದ್ದ ಸ್ಥಳ. ಹಣ ಪಡೆದ ಜಾಗ, ಮೈಸೂರಿನಿಂದ ಬಸ್ ಹತ್ತಿ ಮಡಿಕೇರಿಗೆ ಹೊರಟಿದ್ದು, ಮಡಿಕೇರಿಯಲ್ಲಿ ಬಸ್ ಬದಲಾಯಿಸಿ ಮಂಗಳೂರು ಕಡೆಗೆ ಹೋಗಿದ್ದು, ಮಂಗಳೂರಿನಲ್ಲಿ ಬಸ್ ಇಳಿದ ಜಾಗ. ತನ್ನ ಶರ್ಟ್ ಮತ್ತು ಪ್ಯಾಂಟ್ ಬದಲಾಯಿಸಿಕೊಂಡ ಸ್ಥಳ. ಆಟೋ ಹತ್ತಿಕೊಂಡ ಜಾಗ ಮತ್ತು ಕುಕ್ಕರ್ ಬಾಂಬ್ ಸ್ಫೋಟಗೊಂಡ ಸ್ಥಳ ಸೇರಿ ಇತರ ಎಲ್ಲಾ ಸ್ಥಳಗಳ ಮಹಜರು ಪ್ರಕ್ರಿಯೆಯನ್ನ NIA ಅಧಿಕಾರಿಗಳು ನಡೆಸಿದ್ದಾರೆ.

ಇದನ್ನೂ ಓದಿ:ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್​ಗೆ ಐಸೀಸ್​ ನಂಟಿನ ಶಂಕೆ

ಘಟನೆಯ ವಿವರ

ನವೆಂಬರ್ 19 2022 ರಂದು ಮಂಗಳೂರಿನಲ್ಲಿ ಬಾಂಬ್ ಸ್ಪೋಟಗೊಂಡಿತ್ತು. ಇದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಕರ್ನಾಟಕದಲ್ಲಿ ಐಸಿಸ್ ಮಾದರಿ ಕೃತ್ಯಕ್ಕೆ ಸಂಚು ರೂಪಗೊಂಡಿದ್ದು ಈ ಸ್ಪೋಟದಿಂದ ಬಯಲಾಗಿತ್ತು. ಮಂಗಳೂರಿನಲ್ಲಿ 2020 ರಲ್ಲಿ ಬರೆಯಲ್ಪಟ್ಟಿದ್ದ ಉಗ್ರ ಗೋಡೆ ಬರಹ ಪ್ರಕರಣದ ಆರೋಪಿಯಾಗಿದ್ದ ಮಹಮ್ಮದ್ ಶಾರೀಕ್ ತಂದ ಬಾಂಬ್ ಅವನ ಕಾಲ ಬುಡದಲ್ಲೇ ಸ್ಪೋಟಗೊಂಡು ಆತ ಅಲ್ಲೇ ಸಿಕ್ಕಿಹಾಕಿಕೊಂಡಿದ್ದ. ಹೌದು ಇತ ಮೈಸೂರಿನ ತನ್ನ ಬಾಡಿಗೆ ಮನೆಯಲ್ಲಿ ಕುಕ್ಕರ್ ಬಾಂಬ್ ತಯಾರು ಮಾಡಿದ್ದ. ಅಲ್ಲಿಂದ ಮಂಗಳೂರಿಗೆ ತಂದು ಸಿಡಿಸುವ ಪ್ಲಾನ್ ಇತ್ತು.

ನವೆಂಬರ್ 19 ರ ಬೆಳಗ್ಗೆ ಮೈಸೂರಿನಿಂದ ತಾನು ತಯಾರಿಸಿದ್ದ ಕುಕ್ಕರ್ ಬಾಂಬ್ ಸಮೇತ ಮಂಗಳೂರಿನ ಕಡೆ ಹೊರಟಿದ್ದ. ಮೈಸೂರಿನ ತನ್ನ ಬಾಡಿಗೆ ಮನೆಯಿಂದ ಆಟೋದಲ್ಲಿ ಬಾಂಬ್​ನ್ನು ಇಟ್ಟುಕೊಂಡು ಕೆ.ಎಸ್.ಆರ್.ಟಿ.ಸಿ ಬಸ್ ಸ್ಟಾಂಡ್​ಗೆ ಬಂದಿಳಿದಿದ್ದ. ಅಲ್ಲಿಂದ ನೇರವಾಗಿ ಮಂಗಳೂರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ ಬಸ್​ಗೆ ಹತ್ತಿದ್ದ. ಅಲ್ಲಿಂದ ಕುಶಾಲನಗರ, ಮಡಿಕೇರಿ, ಸುಳ್ಯ, ಪುತ್ತೂರು ಮಾರ್ಗವಾಗಿ ಬಂದು ಮಂಗಳೂರಿನ ಪಡೀಲಿನಲ್ಲಿ ಇಳಿದಿದ್ದ. ಬಳಿಕ ಕುಕ್ಕರ್ ಬಾಂಬ್​ಗೆ ಟೈಮರ್ ಫಿಕ್ಸ್ ಮಾಡಿಕೊಂಡು ಆಟೋ ಹತ್ತಿದ್ದ. ಪಂಪ್ ವೆಲ್ ಡ್ರಾಪ್ ಎಂದು ಹೇಳಿ ಆಟೋ ಹತ್ತಿದ್ದು, ಆಟೋ ಪಂಪ್ ವೆಲ್ ತಲುಪೊ ಮಧ್ಯದಲ್ಲೇ ಬಾಂಬ್​ನಲ್ಲಿದ್ದ ಝೆಲ್​ಗೆ ಬೆಂಕಿ ಹೊತ್ತಿಕೊಂಡು ಬ್ಲಾಸ್ಟ್ ಆಗಿತ್ತು. ಆದ್ರೆ ಅದೃಷ್ಟವಶಾತ್​ ಡಿಟೊನೇಟರ್ ಮೂಲಕ ಬ್ಲಾಸ್ಟ್ ಆಗದೆ ಇದ್ದಿದ್ದರಿಂದ ಆಗುವ ಭಾರೀ ಅನಾಹುತ ತಪ್ಪಿತ್ತು.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ