AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ನೇಮಕ

ಈವರೆಗೆ ಮುಖ್ಯಮಂತ್ರಿಗಳ ಎಸಿಎಸ್ ಆಗಿದ್ದ ಡಾ.ರಮಣರೆಡ್ಡಿ ಅವರ ವರ್ಗಾವಣೆ ಮಾಡಲಾಗಿದ್ದು, ಕೈಗಾರಿಕಾ ಇಲಾಖೆಯ ಎಸಿಎಸ್ ಜವಾಬ್ಧಾರಿ ನೀಡಲಾಗಿದೆ. ಐಟಿ-ಬಿಟಿ ಇಲಾಖೆ ಎಸಿಎಸ್ ಹುದ್ದೆಯನ್ನು ಹೆಚ್ಚುವರಿ ಹೊಣೆಯನ್ನಾಗಿ ವಹಿಸಲಾಗಿದೆ. 

ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ನೇಮಕ
ಮಂಜುನಾಥ್ ಪ್ರಸಾದ್ ಎನ್
TV9 Web
| Edited By: |

Updated on:Aug 05, 2021 | 8:28 PM

Share

ಬೆಂಗಳೂರು: ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ಎನ್ ಅವರನ್ನು ನೇಮಿಸಿ ಆದೇಶಿಸಲಾಗಿದೆ. ಜತೆಗೆ ಅವರಿಗೆ ವಾರ್ತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿ ಹೊಣೆಯನ್ನಾಗಿ ವಹಿಸಲಾಗಿದೆ. ಈವರೆಗೆ ಮುಖ್ಯಮಂತ್ರಿಗಳ ಎಸಿಎಸ್ ಆಗಿದ್ದ ಡಾ.ರಮಣರೆಡ್ಡಿ ಅವರ ವರ್ಗಾವಣೆ ಮಾಡಲಾಗಿದ್ದು, ಕೈಗಾರಿಕಾ ಇಲಾಖೆಯ ಎಸಿಎಸ್ ಜವಾಬ್ಧಾರಿ ನೀಡಲಾಗಿದೆ. ಐಟಿ-ಬಿಟಿ ಇಲಾಖೆ ಎಸಿಎಸ್ ಹುದ್ದೆಯನ್ನು ಹೆಚ್ಚುವರಿ ಹೊಣೆಯನ್ನಾಗಿ ವಹಿಸಲಾಗಿದೆ.

ಕೃಷಿ ಇಲಾಖೆ ಎಸಿಎಸ್ ಆಗಿ‌ ಡಾ.ರಾಜ್‌ಕುಮಾರ್ ಖತ್ರಿ ನೇಮಕಗೊಂಡಿದ್ದಾರೆ. ಸದ್ಯ ಎಸಿಎಸ್ ಆಗಿ ಈ ಜವಾಬ್ಧಾರಿ ನಿಭಾಯಿಸುತ್ತಿದ್ದ ಜಾವೇದ್ ಅಖ್ತರ್ ವರ್ಗಾವಣೆಗೊಂಡು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಎಸಿಎಸ್ ಆಗಿ ನೇಮಗೊಂಡಿದ್ದಾರೆ. ಆರೋಗ್ಯ ಇಲಾಖೆ ಎಸಿಎಸ್ ಹುದ್ದೆಯನ್ನು ಅವರಿಗೆ ಹೆಚ್ಚುವರಿ ಹೊಣೆಯನ್ನಾಗಿ ನೀಡಲಾಗಿದೆ. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದ್ದು ಅವರನ್ನು ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.

ಮುಖ್ಯಮಂತ್ರಿ ಸಲಹೆಗಾರರ ಕಚೇರಿ ಸಿಬ್ಬಂದಿ ಕರ್ತವ್ಯಮುಕ್ತಗೊಳಿಸಿ ಆದೇಶ: ಯಡಿಯೂರಪ್ಪ ರಾಜೀನಾಮೆ ಹಿನ್ನೆಲೆ ಸರ್ಕಾರದ ಕ್ರಮ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅವರ ಅವಧಿಯಲ್ಲಿ ಪ್ರಮುಖ ಸ್ಥಾನಗಳಿಗೆ ನೇಮಕವಾಗಿದ್ದ ವಿವಿಧ ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಕಚೇರಿಯ ನಾಲ್ವರು, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಕಚೇರಿಯ ಎಂಟು ಮಂದಿ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರ ಕಚೇರಿಯ ಐವರು, ಮಾಧ್ಯಮ ಸಂಯೋಜಕರ ಕಚೇರಿಯ ಐವರು, ಕಾನೂನು ಸಲಹೆಗಾರರ ಕಚೇರಿಯ ಮೂವರು, ಸಿಎಂ ಇ-ಆಡಳಿತ ಸಲಹೆಗಾರರ ಕಚೇರಿಯ ಮೂವರು, ಸಲಹೆಗಾರರ ಕಚೇರಿಯ ಐವರು ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.

ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರನ್ನು ಕರ್ತವ್ಯಮುಕ್ತಗೊಳಿಸಿ ಭಾನುವಾರವೂ ಸರ್ಕಾರ ಆದೇಶ ಹೊರಡಿಸಿತ್ತು.

ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರದ ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಕಚೇರಿಯಲ್ಲಿ (ಮುಖ್ಯಮಂತ್ರಿಗಳ ಸಚಿವಾಲಯ) ನಿಯೋಜನೆ, ಒಪ್ಪಂದ ಹಾಗೂ ಗುತ್ತಿಗೆ ಆಧಾರದ ಮೆಲೆ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಕಾರ್ಯಮುಕ್ತಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್​ ಆದೇಶ ಹೊರಡಿಸಿದ್ದಾರೆ.

ನಿವೃತ್ತ ಐಎಎಸ್ ಅಧಿಕಾರಿ ಎಂ.ಲಕ್ಷ್ಮೀನಾರಾಯಣ ಸೇರಿದಂತೆ ಒಟ್ಟು 19 ಅಧಿಕಾರಿಗಳನ್ನು ಕರ್ತವ್ಯಮುಕ್ತಗೊಳಿಸಲಾಗಿದೆ. ನಿಯೋಜನೆ / ಒಪ್ಪಂದದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ತಮ್ಮ ಮಾತೃ ಇಲಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಮುಖ್ಯಮಂತ್ರಿ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಾ.ಎ.ಲೋಕೇಶ್, ಎಚ್​.ಎಸ್.ಸತೀಶ್, ಟಿ.ಎಂ.ಸುರೇಶ್, ಅರುಣ್​ ಕುಮಾರ್ ಹಡಗಲಿ, ಅರುಣ್ ಪುರ್ಟಾಡೋ, ಕೆ.ಎಸ್.ಕಿರಣ್​ಕುಮಾರ್, ಕೆ.ರಾಜಪ್ಪ, ಆರ್.ಕೆ.ಮಹೇಶ್, ಎಸ್.ನಾಗರಾಜಯ್ಯ, ಎಸ್.ರಮೇಶ್, ಎಸ್.ಶಾಂತಾರಾಮ್, ಗಣೇಶ್ ಯಾಜಿ, ಎಸ್.ಎ.ಅಂಗಡಿ, ಎ.ಆರ್.ರವಿ, ಕೆ.ಗಂಗಯ್ಯ, ಜಿ.ಎಸ್.ಸುನಿಲ್. ಪ್ರೊ.ಕೆ.ಜಿ.ಲೋಕೇಶ್, ಡಾ.ಆರ್.ಎಂ.ರಂಗನಾಥ್ ಅವರನ್ನು ಕಾರ್ಯಮುಕ್ತಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: 

ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ: ಸಚಿವ ಸಂಪುಟ ರಚನೆ ಬಳಿಕ ಸಿಎಂ ಮೊದಲ ಮಾತು

Karnataka Cabinet: ಬಸವರಾಜ ಬೊಮ್ಮಾಯಿ ಟೀಂನ ನೂತನ ಸಚಿವರಲ್ಲಿ ಯಾರಿಗೆ ಯಾವ ಖಾತೆ? ಸಂಭಾವ್ಯ ಪಟ್ಟಿ ಇಲ್ಲಿದೆ (Manjunath Prasad appointed as Chief Secretary to CM Basavaraj Bommai)

Published On - 6:44 pm, Thu, 5 August 21

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ