ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆಗೆ ವಿರೋಧ, ತಕ್ಷಣ ಈ ಆದೇಶವನ್ನು ಹಿಂಪಡೆಯಬೇಕೆಂದು ಬಸವ ಮಂಟಪದ ಜಗದ್ಗುರುಗಳ ಮನವಿ

| Updated By: ಆಯೇಷಾ ಬಾನು

Updated on: Dec 02, 2021 | 1:44 PM

7 ಜಿಲ್ಲೆಗಳಿಗೆ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ ವಿತರಣೆಗೆ ಮಾಡಲಾಗುತ್ತಿದ್ದು ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದೆ. ಆದ್ರೆ ಇದಕ್ಕೆ ಹಲವು ಸಮುದಾಯಗಳು ವಿರೋಧ ವ್ಯಕ್ತಪಡಿಸಿವೆ. ಶಾಲಾ ಮಕ್ಕಳಿಗೆ ಮೊಟ್ಟೆ ಕೊಡುವ ಆದೇಶ ವಾಪಸ್ ಪಡೆಯುವಂತೆ ಆಗ್ರಹ ಮಾಡಿವೆ.

ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆಗೆ ವಿರೋಧ, ತಕ್ಷಣ ಈ ಆದೇಶವನ್ನು ಹಿಂಪಡೆಯಬೇಕೆಂದು ಬಸವ ಮಂಟಪದ ಜಗದ್ಗುರುಗಳ ಮನವಿ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆಗೆ ಕೆಲ ಸಮುದಾಯಗಳು ವಿರೋಧ ವ್ಯಕ್ತಪಡಿಸಿವೆ. ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಆದೇಶ ಹಿಂಪಡೆಯಬೇಕು. ಕೋಳಿ ಮೊಟ್ಟೆ ಸಂಪೂರ್ಣವಾಗಿ ಮಾಂಸಾಹಾರವಾಗಿದೆ. ಮೊಟ್ಟೆ ಕೊಡುವುದರಿಂದ ಧಾರ್ಮಿಕ ನಂಬಿಕೆಗೆ ಧಕ್ಕೆ ಆಗುತ್ತದೆ. ಶಾಲೆಗಳಲ್ಲಿ ಮಕ್ಕಳಿಗೆ ಸರ್ವಸಮ್ಮತ ಆಹಾರವನ್ನು ನೀಡಬೇಕು. ಶಾಲೆಯಲ್ಲಿ ಮೊಟ್ಟೆ ಕೊಡುವುದರಿಂದ ಸಸ್ಯಹಾರಿ, ಮಾಂಸಹಾರಿ ಎಂಬ 2 ಗುಂಪು ರಚನೆಯಾಗತ್ತೆ. ಹೀಗಾಗಿ ಸರ್ಕಾರ ತಕ್ಷಣ ಈ ಆದೇಶವನ್ನು ಹಿಂಪಡೆಯಬೇಕು ಎಂದು ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಲಿಂಗಾಯತ ಧರ್ಮ, ಮಹಾ ಸಭಾ ಬಸವ ಮಂಟಪದ ಜಗದ್ಗುರುಗಳಿಂದ ಮನವಿ ಸಲ್ಲಿಸಲಾಗಿದೆ.

ಶಿಕ್ಷಣ ಇಲಾಖೆ ಅಪೌಷ್ಟಿಕತೆ, ರಕ್ತಹೀನತೆ ಹೊಂದಿರುವ ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲು ಮುಂದಾಗಿದ್ದು ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡಲು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ. 7 ಜಿಲ್ಲೆಗಳಿಗೆ ಶಾಲಾ ಮಕ್ಕಳಿಗೆ ಬೇಯಿಸಿದ ಮೊಟ್ಟೆ ವಿತರಣೆಗೆ ಮಾಡಲಾಗುತ್ತಿದ್ದು ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದೆ. ಆದ್ರೆ ಇದಕ್ಕೆ ಹಲವು ಸಮುದಾಯಗಳು ವಿರೋಧ ವ್ಯಕ್ತಪಡಿಸಿವೆ. ಶಾಲಾ ಮಕ್ಕಳಿಗೆ ಮೊಟ್ಟೆ ಕೊಡುವ ಆದೇಶ ವಾಪಸ್ ಪಡೆಯುವಂತೆ ಆಗ್ರಹ ಮಾಡಿವೆ. ಕೋಳಿ ಮೊಟ್ಟೆ ಸಂಪೂರ್ಣವಾಗಿ ಮಾಂಸಹಾರವಾಗಿದೆ. ಲಿಂಗಾಯತ, ಜೈನ್, ಬ್ರಾಹ್ಮಣ ಧರ್ಮಗಳು ಸುದ್ಧ ಸಸ್ಯಹಾರಿಗಳು. ಮಕ್ಕಳಿಗೆ ಕೋಳಿ ಮೊಟ್ಟೆ ಕೊಡುವುದರಿಂದ ಧಾರ್ಮಿಕ ನಂಬಿಕೆಗೆ ಧಕ್ಕೆ ಬರುತ್ತದೆ. ಶಾಲೆಗಳಲ್ಲಿ ಸರ್ವಸಮ್ಮತವಾದ ಆಹಾರವನ್ನ ನೀಡಬೇಕು. ಶಾಲೆಯಲ್ಲಿ ಮೊಟ್ಟೆ ಕೊಡುವುದರಿಂದ ಸಸ್ಯಹಾರಿ ಮಾಸಂಹಾರಿ ಎಂಬ ಎರಡು ವಿದ್ಯಾರ್ಥಿ ಗುಂಪು ರಚನೆಯಾಗುತ್ತೆ.

ಸಸ್ಯಹಾರಿ ವಿದ್ಯಾರ್ಥಿಗಳಿಗೆ ಸರ್ಕಾರದ ಶಾಲೆಗಳೇ ಮಾಂಸಹಾರ ತಿನ್ನಲು ಪ್ರೋತ್ಸಾಹ ಮಾಡಿದ ಹಾಗೆ ಆಗುತ್ತೆ. ಹೀಗಾಗಿ ಈ ಕೂಡಲೇ ಸರ್ಕಾರ ಮೊಟ್ಟೆ ವಿತರಣೆ ಆದೇಶ ವಾಪಸ್ ಪಡೆಯ ಬೇಕು ಎಂದ ಆಗ್ರಹಿಸಿವೆ. ರಾಷ್ಟ್ರೀಯ ಲಿಂಗಾಯತ ಧರ್ಮ, ಮಹಾ ಸಭಾ ಬಸವ ಮಂಟಪದ ಪೂಜ್ಯ ಶ್ರೀ ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ ಮನವಿ ಮಾಡಿದ್ದಾರೆ.

ಸರ್ಕಾರ ನಿರ್ಧಾರದಿಂದ ಹಿಂದೆ ಸರಿಯದಿದ್ರೆ ಬಸವಪೀಠದಿಂದ ಹೋರಾಟ
ಇನ್ನು ಈ ಬಗ್ಗೆ ಮಾತನಾಡಿದ ಅವರು,ಮೊಟ್ಟೆ ನೀಡುವುದಕ್ಕೆ ಹಲವು ಸಮುದಾಯಗಳು ವಿರೋಧ ವ್ಯಕ್ತಪಡಿಸಿವೆ. ಕೋಳಿ ಮೊಟ್ಟೆ ಸಂಪೂರ್ಣವಾಗಿ ಮಾಂಸಾಹಾರ ಆಗಿದೆ. ಸರ್ಕಾರ ಮೊಟ್ಟೆ ವಿತರಣೆ ಆದೇಶ ವಾಪಸ್ ಪಡೆಯಬೇಕು. ಮೊಟ್ಟೆ ಬದಲಾಗಿ ದ್ವಿದಳ ಆಹಾರಧಾನ್ಯಗಳನ್ನ ನೀಡಬೇಕು. ಸರ್ಕಾರ ನಿರ್ಧಾರದಿಂದ ಹಿಂದೆ ಸರಿಯದಿದ್ರೆ ಬಸವಪೀಠದಿಂದ ಹೋರಾಟದ ಬಗ್ಗೆ ನಿರ್ಧಾರ ಮಾಡ್ತೀವಿ. ‘ಈ ಆದೇಶ ವಾಪಸ್ ಪಡೆಯುವಂತೆ ಆಗ್ರಹ ಮಾಡ್ತಿದ್ದೇವೆ. ಕೋಳಿ ಮೊಟ್ಟೆ ನೀಡುವುದ್ರಿಂದ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗುತ್ತೆ. ಸಸ್ಯಹಾರಿ, ಮಾಂಸಹಾರಿ ಎಂಬ ವಿದ್ಯಾರ್ಥಿ ಗುಂಪು ರಚನೆಯಾಗುತ್ತೆ. ಮೊಟ್ಟೆ ನೀಡುವುದರಿಂದ ವಿದ್ಯಾರ್ಥಿಗಳಲ್ಲಿ ಭಾರಿ ತಾರತಮ್ಯ ಉಂಟಾಗುತ್ತೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮನಗರ: ಬಸ್​ನಲ್ಲಿ ನೇತಾಡುತ್ತ ಪ್ರಯಾಣ ಮಾಡಿದ ಮಕ್ಕಳು; ವಿಡಿಯೋ ಇಲ್ಲಿದೆ

Published On - 11:17 am, Thu, 2 December 21