ಮಹಿಳೆಯರ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ: ವಂದಿತಾ ಶರ್ಮಾ

ಸಮಾಜದಲ್ಲಿ ಮುಂದೆ ಬರುವ ಮಹಿಳೆಯರಿಗೆ  ಪರುಷರು ಬೆಂಬಲ ನೀಡುವುದರ ಜೊತೆಗೆ ಮುಂದಿನ ಜನಾಂಗಕ್ಕೂ ಅರಿವು ಮೂಡಿಸಬೇಕು. ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಂದಿದ್ದು, ಅವರಿಂದ ನಮ್ಮ ಸಮಾಜದಲ್ಲಿ ದೊಡ್ಡ ಬದಲಾವಣೆ ಸಾಧ್ಯ ಎಂದು ವಂದಿತಾ ಶರ್ಮಾ ಹೇಳಿದ್ದಾರೆ.

ಮಹಿಳೆಯರ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ: ವಂದಿತಾ ಶರ್ಮಾ
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
Follow us
TV9 Web
| Updated By: preethi shettigar

Updated on:Mar 31, 2022 | 9:45 PM

ಬೆಂಗಳೂರು: ಮಹಿಳೆಯರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲೀಕರಣಗಳೊಳಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ರಾಜ್ಯ ಸರ್ಕಾರವು (State Government) ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತರು ಮತ್ತು ಕೃಷಿ (agriculture) ಉತ್ಪನ್ನ ಆಯುಕ್ತರಾದ ಶ್ರೀಮತಿ ವಂದಿತಾ ಶರ್ಮಾ (Vandita Sharma) ತಿಳಿಸಿದ್ದಾರೆ. 

ಇಂದು (ಮಾರ್ಚ್​ 31) ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮಹಿಳೆಯರಿಗಾಗಿ ಪಂಚಾಯತ್ ರಾಜ್‍ನಲ್ಲಿ ಶೇ.50, ಪೊಲೀಸ್ ಇಲಾಖೆಯಲ್ಲಿ ಶೇ.25 ಹಾಗೂ ಸರ್ಕಾರಿ ಕೆಲಸದಲ್ಲಿ ಶೇ.33 ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸುವುದರ ಜೊತೆಗೆ ಸಾಲ-ಸೌಲಭ್ಯಗಳನ್ನು ಜಾರಿಗೊಳಿಸಲಾಗಿದೆ. ಇದರಿಂದ ಮಹಿಳೆಯರು ತಮಗೆ ನೀಡಿರುವ ಸರ್ಕಾರದ ಯೋಜನೆಗಳನ್ನು ಉಪಯೋಗಿಸಿಕೊಂಡು ಆರ್ಥಿಕವಾಗಿ ಸಬಲರಾಗುವುದರ ಜೊತೆಗೆ ದೇಶದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದ್ದಾರೆ.

ಬಳಿಕ ಮಾತನಾಡಿದ ಅವರು, ಮಹಿಳೆಯರಿಗೆ ಮನೆಯಲ್ಲಿಯು ಸಹಕಾರ ನೀಡಬೇಕು. ಹೆಣ್ಣಿಗೆ ಯಾವ ರೀತಿ ಗೌರವ ಕೊಡಬೇಕು ಎನ್ನುವ ಬಗ್ಗೆ ತಾಯಿ ತನ್ನ ಮಕ್ಕಳಿಗೆ ಚಿಕ್ಕಂದಿನಿಂದಲೆ ಕಲಿಸಿಕೊಡಬೇಕು. ಒಂದು ದಿನ ಮಹಿಳಾ ದಿನಾಚರಣೆಯಾದರೆ ಸಾಲದು. ಪ್ರತಿ ದಿನವು ಮಹಿಳಾ ದಿನಾಚರಣೆಯಾಗಬೇಕು.  ಮಹಿಳೆಯರನ್ನು ಪೂಜಿಸಿದರೆ ಸಾಲದು, ಅವರಿಗೆ ಗೌರವ-ಸಮಾನತೆ ಕೊಟ್ಟರೆ ಸಾಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಸಮಾಜದಲ್ಲಿ ಮುಂದೆ ಬರುವ ಮಹಿಳೆಯರಿಗೆ  ಪರುಷರು ಬೆಂಬಲ ನೀಡುವುದರ ಜೊತೆಗೆ ಮುಂದಿನ ಜನಾಂಗಕ್ಕೂ ಅರಿವು ಮೂಡಿಸಬೇಕು. ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಂದಿದ್ದು, ಅವರಿಂದ ನಮ್ಮ ಸಮಾಜದಲ್ಲಿ ದೊಡ್ಡ ಬದಲಾವಣೆ ಸಾಧ್ಯ ಎಂದು ವಂದಿತಾ ಶರ್ಮಾ ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರಿಗೆ ಅಭಿನಂದಿಸಿ, ಮಹಿಳಾ ಸರ್ಕಾರಿ ನೌಕರರ ಅಭ್ಯುದಯಕ್ಕಾಗಿ ಅವರು ನೀಡುತ್ತಿರುವ ಕೊಡುಗೆಗಳನ್ನು ಈ ವೇಳೆ ವಂದಿತಾ ಶರ್ಮಾ ಶ್ಲಾಘಿಸಿದರು.

ಬಳಿಕ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅವರು, ಸ್ಪೂರ್ತಿದಾಯಿನಿ-ಪ್ರಗತಿಗಾಮಿನಿ, ನಾ-ಹೆಣ್ಣೆಂಬುದೇ ಹೆಮ್ಮೆ ಎಂಬ ಶೀರ್ಷಿಕೆಯಡಿ ಇಡೀ ರಾಜ್ಯಾದ್ಯಂತ ಮೊಟ್ಟ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮಾಡುತ್ತಿದ್ದೇವೆ.  ಇನ್ನು ಮುಂದೆ ಪ್ರತಿ ವರ್ಷ ಮಾರ್ಚ್ 8ರಂದು ಬೆಂಗಳೂರು ನಗರದಲ್ಲಿ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ತಿಳಿಸಿದ್ದಾರೆ.

ಸರ್ಕಾರಿ ನೌಕರರ ಸಂಘವು ಮಹಿಳೆಯರಿಗೆ ನ್ಯಾಯ ಕೊಡಿಸುವುದರ ಜೊತೆಗೆ, ಅವರ ಜೊತೆಗೆ ನಾವಿರುತ್ತೇವೆ ಎಂಬ ಭರವಸೆಯನ್ನು ನೀಡುತ್ತೇನೆ. ಮಹಿಳೆಯರಿಗಾಗಿ 6 ತಿಂಗಳ ಶಿಶುಪಾಲನಾ ರಜೆ, ಸಲಹಾ ಕೇಂದ್ರ, ಸೇವಾ ಕೇಂದ್ರ, ಕಾನೂನು ಕೇಂದ್ರಗಳನ್ನು ಸ್ಥಾಪಿಸುವುದರ ಜೊತೆಗೆ ಮಹಿಳಾ ಮತ್ತು ಪುರುಷ  ಕ್ಯಾನ್ಸರ್ ಹಾಗೂ ಕಿಡ್ನಿ ಡಯಾಲಿಸಿಸ್ ಪಡೆಯುವ ರೋಗಿಗಳಿಗೆ ವಿಶೇಷ ರಜೆ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಸಿ.ಎಸ್.ಷಡಾಕ್ಷರಿ ಹೇಳಿದ್ದಾರೆ.

ಬಳಿಕ ಮಾತನಾಡಿದ ಅವರು, ಸರ್ಕಾರವು ಸುಸ್ಥಿರ ನಾಡಿಗಾಗಿ ಲಿಂಗ ಸಮಾನತೆ ಎಂಬ ಶೀರ್ಷಿಕೆಯಡಿ ಮಹಿಳೆಯರ ಸಬಲೀಕರಣಕ್ಕಾಗಿ ಅನೇಕ ಕೆಲಸ ಮಾಡುತ್ತಿದೆ. ತೊಟ್ಟಿಲು ತೂಗುವ ಕೈ ದೇಶವನ್ನೇ ಆಳಬಹುದು ಎಂದು ತೋರಿಸಿಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

womens day

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಬೇರೆ ಜಿಲ್ಲೆಯಿಂದ ಬರುವ ಮಹಿಳೆಯರಿಗೆ ಈ ಮೊದಲು ನೌಕರರ ಭವನದಲ್ಲಿ ಮೂಲಭೂತ ಸೌಲಭ್ಯಗಳಿರಲಿಲ್ಲ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ 60 ಸುಸಜ್ಜಿತ ಕೊಠಡಿಗಳನ್ನು ನಿರ್ಮಿಸಿ ಮೂಲ ಸೌಲಭ್ಯ ಕಲ್ಪಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರದ ಮಾದರಿಯಲ್ಲಿಯೆ ರಾಜ್ಯದಲ್ಲಿನ ಸರ್ಕಾರಿ ನೌಕರರಿಗೆ 7ನೇ ವೇತನ ನೀಡಲು ಬದ್ದನಾಗಿದ್ದೇನೆ ಎಂದು ತಿಳಿಸಿದ್ದಾರೆ. ಇನ್ನೂ ಬೆಂಗಳೂರು ನಗರದಲ್ಲಿನ 87 ಇಲಾಖೆಯಲ್ಲಿನ 10 ಸಾವಿರ ನೌಕರರಿಗೆ ಖುದ್ದು ಆಮಂತ್ರಣ ನೀಡಿ ಆಹ್ವಾನಿಸಿದ್ದೇವೆ. ಮಹಿಳೆಯರ ಅಭ್ಯುದಯದ ಜೊತೆಗೆ ದೇಶ ಕಟ್ಟುವ ಕೆಲಸಕ್ಕೂ ಮುಂದಾಗಬೇಕು ಎಂದು .ಎಸ್.ಷಡಾಕ್ಷರಿ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಮಹಿಳಾ ಕುಸ್ತಿ ಕ್ರೀಡಾಪಟು ಶ್ರೀಮತಿ ರತ್ನಮಾಲ ಅವರು ಕುಸ್ತಿ ಆಡುವ ಸಂದರ್ಭದಲ್ಲಿ ಕೈಗೆ ಗಾಯವಾಗಿದ್ದರಿಂದ ಸಂಘದ ವತಿಯಿಂದ 25 ಸಾವಿರ ಪರಿಹಾರ ವಿತರಿಸಲಾಯಿತು. ಕರ್ನಾಟಕ ರಾಜ್ಯ ಕರಕುಶಲ ಅಭಿವೃಧ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಡಿ.ರೂಪಾ ಮೌದ್ಗಿಲ್ ಅವರು ಸಹ ಈ ವೇಳೆ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ನ್ಯಾಯಾಧೀಶರುಗಳಾದ ಶ್ರೀಮತಿ ಸುನಿತಾ ಶರ್ಮಾ, ಶ್ರೀಮತಿ ಮೋಹನ್ ಕುಮಾರಿ, ರಾಜ್ಯ ಉಪಾಧ್ಯಕ್ಷರಾದ ಹೆಚ್.ಎಸ್. ಹೇಮಲತಾ, ರಾಜ್ಯ ಜಂಟಿ ಕಾರ್ಯದರ್ಶಿ ಶ್ರೀಮತಿ ರುಚಿತ, ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀಮತಿ ಯಶೋಧ, ರಾಜ್ಯ ಪರಿಷತ್ ಸದಸ್ಯರು ಶ್ರೀಮತಿ ರೋಷಿಣಿ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರದ ಸಿಆರ್‌ಪಿಎಫ್ ಶಿಬಿರದೊಳಗೆ ಬಾಂಬ್ ಎಸೆದ ಬುರ್ಖಾಧಾರಿ ಮಹಿಳೆ; ಕೃತ್ಯ ಕ್ಯಾಮೆರಾದಲ್ಲಿ ಸೆರೆ

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಹೀಗೂ ಆಚರಿಸಬಹುದು, ಮೈಸೂರಿನ ಡಾ ಶ್ವೇತಾರ ಹಾಗೆ!

Published On - 9:05 pm, Thu, 31 March 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ