Sign In

By signing in or creating an account, you agree with Associated Broadcasting Company's Terms & Conditions and Privacy Policy.

Kill DK Brothers ಎಂದು ಪೋಸ್ಟ್ ಹಾಕಿದ್ದ ಆರೋಪಿಯಿಂದ ಮತ್ತಷ್ಟು ಸ್ಫೋಟಕ ಅಂಶ ಬಯಲಿಗೆ

ಸಾಮಾಜಿಕ ಜಾಲತಾಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು‌‌ ಬಂಧಿಸಲಾಗಿದ್ದು ತನಿಖೆ ವೇಳೆ ಮತ್ತಷ್ಟು ಸತ್ಯ ಬಯಲಾಗಿದೆ. ಆರೋಪಿ ರಂಜಿತ್, ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಸೇರಿದಂತೆ ಹೊರ ರಾಜ್ಯದ ರಾಜಕಾರಣಿಗಳ ಬಗ್ಗೆಯೂ ಅವಹೇಳನಕಾರಿ ಪೋಸ್ಟ್ ಹಾಕಿದ್ದ.

Kill DK Brothers ಎಂದು ಪೋಸ್ಟ್ ಹಾಕಿದ್ದ ಆರೋಪಿಯಿಂದ ಮತ್ತಷ್ಟು ಸ್ಫೋಟಕ ಅಂಶ ಬಯಲಿಗೆ
ಆರೋಪಿ ರಂಜಿತ್
Follow us
TV9 Web
| Updated By: ಆಯೇಷಾ ಬಾನು

Updated on: Nov 16, 2023 | 7:25 AM

ಬೆಂಗಳೂರು, ನ.16: ಸಾಮಾಜಿಕ ಜಾಲತಾಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಹಾಗೂ ಸಂಸದ ಡಿ.ಕೆ. ಸುರೇಶ್ (DK Suresh) ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರಕರಣ ಸಂಬಂಧ ಆರೋಪಿಯನ್ನು‌‌ ಜಯನಗರ ಠಾಣೆ ಪೊಲೀಸರು (Jayanagar Police Station) ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿ ರಂಜಿತ್​ ಬಗ್ಗೆ ಮತ್ತಷ್ಟು ಮಾಹಿತಿ ಬಹಿರಂಗವಾಗಿದೆ. ಈತ DK ಬ್ರದರ್ಸ್​ ಬಗ್ಗೆ ಮಾತ್ರವಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಗ್ಗೆಯೂ ನಿಂದಿಸಿ ಪೋಸ್ಟ್​​ ಹಾಕಿದ್ದ. ಬೇರೆ ರಾಜ್ಯಗಳ ರಾಜಕಾರಣಿಗಳಿಗೂ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್​​​​ ಹಾಕಿದ್ದ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.

ಖಾಸಗಿ ಕಂಪನಿ ನೌಕರ ರಂಜಿತ್, ಫೇಸ್‌ಬುಕ್ ಹಾಗೂ ಎಕ್ಸ್‌ (ಟ್ವಿಟರ್) ಖಾತೆಯಲ್ಲಿ ‘ಕಿಲ್ ಡಿಕೆ ಬ್ರದರ್ಸ್’ ಎಂದು ಪೋಸ್ಟ್ ಹಾಕಿದ್ದ. ಅಲ್ಲದೆ, ಕಾಂಗ್ರೆಸ್ ಸರ್ಕಾರ ಮತ್ತು ಡಿ.ಕೆ ಸಹೋದರರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ. ಪ್ರಚೋದನಾಕಾರಿ ಪೋಸ್ಟ್ ಹಾಕುತ್ತಿದ್ದ ಎಂದು ಆರೋಪಿಸಿ ಜಯನಗರ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಶರತ್ ದೂರು ನೀಡಿದ್ದರು. ಈ ಹಿನ್ನೆಲೆ ಆರೋಪಿಯನ್ನು ಬಂಧಿಸಿ ಜಯನಗರ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಮತ್ತಷ್ಟು ಸತ್ಯ ಬಯಲಾಗಿದೆ. ಈತ ತಾನೂ ಸೈಬರ್ ಅಪರಾಧದ ಡಿಟೆಕ್ಟಿವ್ ಎಂದು ಹೇಳಿಕೊಂಡು ಓಡಾಟ ನಡೆಸುತ್ತಿದ್ದ. ತಾನು ಬೆಂಗಳೂರು ಸಿಟಿ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿಕೊಂಡಿದ್ದೇನೆ ಎಂದು ಹೇಳಿಕೊಂಡಿದ್ದ ಎಂಬುದು ಬಯಲಾಗಿದೆ.

ಜೊತೆಗೆ ಆರೋಪಿ ರಂಜಿತ್, ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರು, ಅಲ್ಲದೆ ಮುಸ್ಲಿಂ ಸಮುದಾಯದವರ ನಿಂದನೆ ಮಾಡಿದ್ದ. ಬೇರೆ ಬೇರೆ ರಾಜ್ಯದ ರಾಜಕಾರಣಿಗಳಿಗೂ ನಿಂದಿಸಿ ಪೋಸ್ಟ್ ಹಾಕಿದ್ದ ಎಂಬ ಬಗ್ಗೆ ತನಿಖೆ ವೇಳೆ ಬಯಲಾಗಿದೆ.

ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಕಿಲ್​ ಡಿಕೆ ಬ್ರದರ್ಸ್​​ ಎಂದು ಪೋಸ್ಟ್:​ ದೂರು ದಾಖಲು

ಆರೋಪಿ ರಂಜಿತ್ ಕಾಂಗ್ರೆಸ್‌ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದ. ಕಿಕ್ ಔಟ್ ಕಾಂಗ್ರೆಸ್‌ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ. ರಂಜಿತ್‌ ವಿರುದ್ಧ ಧರ್ಮಗಳ ಮಧ್ಯೆ ದ್ವೇಷಕ್ಕೆ ಕಾರಣವಾಗುವ ಮತ್ತು ಮಾನಹಾನಿಕರವಾಗಿ ವರ್ತಿಸುವ ಆರೋಪದ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು