AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಮಾನ್ಯತಾ ಟೆಕ್ ಪಾರ್ಕ್ ಅಲ್ಲ, ಮಾನ್ಯತಾ ವಾಟರ್ ಪಾರ್ಕ್! ಮಳೆಯಿಂದ ಹೊಳೆಯಂತಾದ ರಸ್ತೆಯ ವಿಡಿಯೋ ವೈರಲ್

ಬೆಂಗಳೂರಿನ ಪ್ರತಿಷ್ಠಿತ ಮಾನ್ಯತಾ ಟೆಕ್ ಪಾರ್ಕ್ ಸೋಮವಾರ ಸಂಜೆ ಸುರಿದ ಭಾರಿ ಮಳೆಗೆ ಜಲಾವೃತಗೊಂಡಿದ್ದು, ರಸ್ತೆಗಳು ಕೆರೆಯಂತಾಗಿವೆ. ಐಟಿ ಉದ್ಯೋಗಿಗಳು ಮನೆಗೆ ತೆರಳಲು ಪರದಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಇದು ‘ಮಾನ್ಯತಾ ಟೆಕ್ ಪಾರ್ಕ್ ಅಲ್ಲ ವಾಟರ್ ಪಾರ್ಕ್’ ಎಂದು ಟ್ರೋಲ್ ಮಾಡಲಾಗಿದೆ. ಸದ್ಯ ಹೊಳೆಯಂತಾಗಿರುವ ರಸ್ತೆಯ ವಿಡಿಯೋ ಭಾರಿ ವೈರಲ್ ಆಗಿದೆ.

ಇದು ಮಾನ್ಯತಾ ಟೆಕ್ ಪಾರ್ಕ್ ಅಲ್ಲ, ಮಾನ್ಯತಾ ವಾಟರ್ ಪಾರ್ಕ್! ಮಳೆಯಿಂದ ಹೊಳೆಯಂತಾದ ರಸ್ತೆಯ ವಿಡಿಯೋ ವೈರಲ್
ಮಳೆಯಿಂದ ಹೊಳೆಯಂತಾದ ಮಾನ್ಯತಾ ಟೆಕ್ ಪಾರ್ಕ್ ರಸ್ತೆImage Credit source: @karnatakaportf
ಗಣಪತಿ ಶರ್ಮಾ
|

Updated on: May 19, 2026 | 1:46 PM

Share

ಬೆಂಗಳೂರು, ಮೇ 19: ಭಾರತದ ಸಿಲಿಕಾನ್ ಸಿಟಿ ಎಂದೇ ಖ್ಯಾತಿಯಾಗಿರುವ ಬೆಂಗಳೂರಿನ (Bengaluru) ಜಾಗತಿಕ ಐಟಿ ಇಮೇಜ್‌ಗೆ ಸೋಮವಾರ ಸಂಜೆ ಸುರಿದ ಭಾರಿ ಮಳೆ ಮತ್ತೊಮ್ಮೆ ಮಸಿ ಬಳಿದಿದೆ. ದೇಶದ ಅತ್ಯಂತ ದೊಡ್ಡ ಹಾಗೂ ಪ್ರತಿಷ್ಠಿತ ಟೆಕ್ ಪಾರ್ಕ್‌ಗಳಲ್ಲಿ ಒಂದಾದ ಹೆಣ್ಣೂರು ರಸ್ತೆಯ ‘ಮಾನ್ಯತಾ ಟೆಕ್ ಪಾರ್ಕ್’ ಏರಿಯಾವು ಕೇವಲ ಒಂದು ಸಂಜೆಯ ಮಳೆಗೆ ಸಂಪೂರ್ಣ ಜಲಾವೃತಗೊಂಡಿದೆ. ಕಚೇರಿ ಮುಗಿಸಿ ಮನೆಗೆ ಹೊರಟ ಸಾವಿರಾರು ಐಟಿ ಉದ್ಯೋಗಿಗಳು ರಸ್ತೆಯಲ್ಲಿ ಮೊಣಕಾಲುದ್ದ ನಿಂತಿದ್ದ ನೀರಿನಲ್ಲಿ ಪರದಾಡಿದ್ದಾರೆ.

ಸದ್ಯ, ಮಾನ್ಯತಾ ಟೆಕ್ ಪಾರ್ಕ್‌ನ ಈ ದುಸ್ಥಿತಿಯ ವೀಡಿಯೊ ‘ಕರ್ನಾಟಕ ಪೋರ್ಟ್‌ಫೋಲಿಯೋ’ ಎಕ್ಸ್​​​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಭಾರಿ ವೈರಲ್ ಆಗುತ್ತಿದೆ. ನೆಟ್ಟಿಗರು ಇದನ್ನು ‘ಮಾನ್ಯತಾ ಟೆಕ್ ಪಾರ್ಕ್ ಅಲ್ಲ, ಮಾನ್ಯತಾ ವಾಟರ್ ಪಾರ್ಕ್’ ಅಥವಾ ‘ಮಾನ್ಯತಾ ಸರೋವರ’ ಎಂದು ಲೇವಡಿ ಮಾಡುತ್ತಿದ್ದಾರೆ.

ಮುಖ್ಯಾಂಶಗಳು

  • ಜಿಬಿಎ ಆಡಳಿತ ನಿರ್ಲಕ್ಷ್ಯದ ವಿರುದ್ಧ ಜನಾಕ್ರೋಶ.
  • ಐಟಿ ಉದ್ಯೋಗಿಗಳಿಂದ ತೀವ್ರ ಅಸಮಾಧಾನ.
  • ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ.

‘ಗ್ಲಾಸ್ ಬಿಲ್ಡಿಂಗ್ ಇದ್ದರೆ ಸಾಲದು, ಸರಿಯಾದ ರಸ್ತೆ ಇರಬೇಕು’

ಪ್ರತಿ ವರ್ಷ ಮುಂಗಾರು ಆರಂಭವಾಗುವ ಮುನ್ನವೇ ಬೆಂಗಳೂರಿನಲ್ಲಿ ಇದೇ ಅವಸ್ಥೆ ಮರುಕಳಿಸುತ್ತಿದೆ. ಮಳೆ ಬಂದ ತಕ್ಷಣ ರಸ್ತೆಗಳು ಕಣ್ಮರೆಯಾಗುತ್ತವೆ, ಟ್ರಾಫಿಕ್ ವ್ಯವಸ್ಥೆ ಸಂಪೂರ್ಣ ಕುಸಿಯುತ್ತದೆ ಮತ್ತು ಸಾರ್ವಜನಿಕರು ರಸ್ತೆಯಲ್ಲೇ ಗಂಟೆಗಟ್ಟಲೆ ನರಕಯಾತನೆ ಅನುಭವಿಸುತ್ತಾರೆ. ಕೇವಲ ದೊಡ್ಡ ದೊಡ್ಡ ಗ್ಲಾಸ್ ಬಿಲ್ಡಿಂಗ್‌ಗಳು ಹಾಗೂ ಆಕರ್ಷಕ ಕಚೇರಿಗಳನ್ನು ನಿರ್ಮಿಸಿದರೆ ಅಭಿವೃದ್ಧಿ ಎನಿಸಿಕೊಳ್ಳುವುದಿಲ್ಲ, ಅದಕ್ಕೆ ತಕ್ಕಂತೆ ಸೂಕ್ತ ಒಳಚರಂಡಿ ಮತ್ತು ಪ್ರವಾಹ ನಿರ್ವಹಣಾ ವ್ಯವಸ್ಥೆ ಇರಬೇಕು ಎಂದು ಉದ್ಯೋಗಿಗಳು ಆಗ್ರಹಿಸಿರುವುದಾಗಿ ‘ಕರ್ನಾಟಕ ಪೋರ್ಟ್‌ಫೋಲಿಯೋ’ ಎಕ್ಸ್​​​​ ಖಾತೆಯಲ್ಲಿ ಉಲ್ಲೇಖಿಸಲಾಗಿದೆ.

ವೈರಲ್ ವಿಡಿಯೋ

ದೇಶದ ನಂಬರ್ ಒನ್ ಐಟಿ ಹಬ್‌ನ ಸ್ಥಿತಿಯೇ ಹೀಗಾದರೆ, ಇನ್ನು ನಗರದ ಉಳಿದ ಸಾಮಾನ್ಯ ಪ್ರದೇಶಗಳ ಗತಿ ಏನು ಎಂದು ಸಾರ್ವಜನಿಕರು ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?
‘ಬಿಗ್ ಬಾಸ್ ಕನ್ನಡ ಸೀಸನ್ 13’: ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು?