AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lunar Eclipse March 03: ಚಂದ್ರ ಗ್ರಹಣದ ಹಿನ್ನೆಲೆ ಈ ಎಲ್ಲಾ ದೇವಾಲಯಗಳು ಬಂದ್!

ಮಾರ್ಚ್ 3 ರಂದು ಸಂಭವಿಸಲಿರುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ದೇವಾಲಯಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ತುಮಕೂರಿನ ದೇವರಾಯನದುರ್ಗ, ದಾವಣಗೆರೆಯ ಶಾರದಾ ಹಾಗೂ ಬೆಂಗಳೂರಿನ ಕಾಡುಮಲ್ಲೇಶ್ವರ ದೇವಾಲಯಗಳಲ್ಲಿ ಗ್ರಹಣಕಾಲದಲ್ಲಿ ದರ್ಶನಕ್ಕೆ ನಿರ್ಬಂಧವಿದ್ದು, ವಿಶೇಷ ಪೂಜೆಗಳನ್ನು ಏರ್ಪಡಿಸಲಾಗಿದೆ. ಗ್ರಹಣ ಶಾಂತಿ ಮತ್ತು ದಾನಗಳ ಕುರಿತು ಜ್ಯೋತಿಷಿಗಳು ಸಲಹೆ ನೀಡಿದ್ದಾರೆ. ದರ್ಶನ ಮತ್ತು ಪೂಜಾ ಸಮಯಗಳನ್ನು ತಿಳಿಯಲು ಸಂಪೂರ್ಣ ಮಾಹಿತಿ ಲಭ್ಯವಿದೆ.

Lunar Eclipse March 03: ಚಂದ್ರ ಗ್ರಹಣದ ಹಿನ್ನೆಲೆ ಈ ಎಲ್ಲಾ ದೇವಾಲಯಗಳು ಬಂದ್!
ಚಂದ್ರ ಗ್ರಹಣದ ಹಿನ್ನೆಲೆ ಈ ಎಲ್ಲಾ ದೇವಾಲಯಗಳು ಬಂದ್!
ಭಾವನಾ ಹೆಗಡೆ
|

Updated on: Mar 01, 2026 | 11:28 AM

Share

ಬೆಂಗಳೂರು, ಮಾರ್ಚ್ 01: ಮಾರ್ಚ್ 3ರಂದು ಸಂಭವಿಸಲಿರುವ ವರ್ಷದ ಮೊದಲ ಹಾಗೂ ಹಿಂದು ಪಂಚಾಂಗದ ಪ್ರಕಾರ ವರ್ಷದ ಕೊನೆಯ ಚಂದ್ರಗ್ರಹಣದ (Lunar Eclipse) ಹಿನ್ನೆಲೆ ರಾಜ್ಯದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಬದಲಾದ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಜಾತ್ರೆಯ ದಿನವೇ ಚಂದ್ರ ಗ್ರಹಣ

ತುಮಕೂರು ಜಿಲ್ಲೆಯ ದೇವರಾಯನ ದುರ್ಗ ಜಾತ್ರಾ ಮಹೋತ್ಸವದ ದಿನವೇ ಚಂದ್ರಗ್ರಹಣ ಇರುವುದರಿಂದ ದೇವಸ್ಥಾನದ ಮಹಾದ್ವಾರ ಮಧ್ಯಾಹ್ನ 1ರಿಂದ ರಾತ್ರಿ 8:30ರವರೆಗೆ ಬಂದ್ ಆಗಲಿದೆ. ಬೆಳಿಗ್ಗೆ 7:30ರಿಂದ 10:30ರೊಳಗೆ ಪೂಜೆ ನೆರವೇರಿಸಲು ಸೂಚನೆ ನೀಡಲಾಗಿದೆ. ಮಾರ್ಚ್ 3ರ ಬೆಳಗಿನ ಜಾವ 4 ಗಂಟೆಗೆ ಅಭಿಷೇಕ, 5 ಗಂಟೆಗೆ ಅಲಂಕಾರ, 6ರಿಂದ 6:30ರವರೆಗೆ ಯಾತ್ರಾದಾನ, 7 ಗಂಟೆಗೆ ಮಹಾಮಂಗಳಾರತಿ ನಡೆಯಲಿದೆ. ಬಳಿಕ ಕರಿಗಿರಿಯಲ್ಲಿ ಮಂಟಪಮಡಿ ಹಾಗೂ ರಥೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ರಾತ್ರಿ 8:30ರಿಂದ 10:30ರವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ದಾವಣಗೆರೆಯ ರಿಂಗ್‌ರಸ್ತೆಯ ಬಳಿಯ ಶಾರದಾ ದೇವಸ್ಥಾನ ಸೇರಿದಂತೆ ಹಲವು ದೇವಾಲಯಗಳಲ್ಲಿ ಗ್ರಹಣದ ಹಿನ್ನೆಲೆ ವಿಶೇಷ ಪೂಜೆ ಏರ್ಪಡಿಸಲಾಗಿದೆ. ಸಂಜೆ 6:33ರಿಂದ 6:47ರವರೆಗೆ ಗ್ರಹಣಕಾಲವಾಗಿದ್ದು, ಅಂದು ದೇವಸ್ಥಾನಗಳು ಬಂದ್ ಆಗಲಿವೆ. ಸಿಂಹ, ವೃಷಭ, ಕನ್ಯಾ, ಮಕರ ರಾಶಿಯವರು ಶಾಂತಿ ಮಾಡಿಸಿಕೊಳ್ಳಲು ಸಲಹೆ ನೀಡಲಾಗಿದ್ದು, ಗ್ರಹಣ ಮೋಕ್ಷದ ಬಳಿಕ ಹುರುಳಿ, ಅಕ್ಕಿ, ಎಳ್ಳೆಣ್ಣೆ, ಬೆಳ್ಳಿನಾಗ ದಾನಗಳನ್ನು ಮಾಡಲು ಪುರೋಹಿತರು ಸೂಚಿಸಿದ್ದಾರೆ.

ಇದನ್ನೂ ಓದಿ ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ

ಇದೇ ವೇಳೆ ಬೆಂಗಳೂರಿನ ಕಾಡು ಮಲ್ಲೇಶ್ವರ ದೇವಸ್ಥಾನ ಮಧ್ಯಾಹ್ನ 12:30ರಿಂದ ಬಂದ್ ಆಗಲಿದೆ. ಸಂಜೆ 7 ಗಂಟೆಯ ಬಳಿಕ ದರ್ಶನಕ್ಕೆ ಅವಕಾಶವಿದ್ದು, ಗ್ರಹಣ ಮೋಕ್ಷದ ನಂತರ ಅಭಿಷೇಕ ಮತ್ತು ಮಹಾಮಂಗಳಾರತಿ ನಡೆಯಲಿದೆ ಎಂದು ಅರ್ಚಕ ಶರತ್ ದೀಕ್ಷಿತ್ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!