AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮದುವೆಯಾಗಿದ್ದ ಆಸಾಮಿ ತಂಗಿಯೂ ಬೇಕು ಎಂದಿದ್ದ; ಕಿಡ್ನಾಪ್ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ

ಕೊಡಿಗೆಹಳ್ಳಿಯ ರಾಯಲ್ ಮಾರ್ಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ, ರಾತ್ರಿ 10 ಗಂಟೆಗೆ ಕೆಲಸ ಮುಗಿಸಿ ಬರುವಾಗ ಆರೋಪಿಗಳು ಕಾರ್ ನಲ್ಲಿ ಬಂದು ಕಿಡ್ನಾಪ್ ಮಾಡಿದ್ದರು. ಜನವರಿ 22 ರಂದು ಯುವತಿಯನ್ನು ಅಪಹರಿಸಿಕೊಂಡು ಹೋಗಲಾಗಿತ್ತು.

ಅಕ್ಕನ ಮದುವೆಯಾಗಿದ್ದ ಆಸಾಮಿ ತಂಗಿಯೂ ಬೇಕು ಎಂದಿದ್ದ; ಕಿಡ್ನಾಪ್ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ
ಸಾಂಕೇತಿಕ ಚಿತ್ರ
TV9 Web
| Updated By: ಸಾಧು ಶ್ರೀನಾಥ್​|

Updated on:Jan 24, 2022 | 9:27 AM

Share

ಬೆಂಗಳೂರು: ಭಾವನೇ ನಾದಿನಿಯ ಮೇಲೆ ಕಣ್ಣು ಹಾಕಿದ್ದ. ಅಕ್ಕನ ಮದುವೆಯಾಗಿದ್ದ ಆಸಾಮಿ ತಂಗಿಯನ್ನೂ ಬಯಸಿದ್ದ. ಪತ್ನಿಯ ತಂಗಿಯನ್ನು ಮದುವೆಯಾಗಬೇಕು ಎಂದು ಆ ಯುವತಯನ್ನು ಕಿಡ್ನಾಪ್ ಮಾಡಿದ್ದ. ಕಿಡ್ನಾಪ್ ಮಾಡಿದ್ದ ಆರೋಪಿ ದೇವರಾಜ್ ಎಂಬಾತನನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ದೇವರಾಜ್ ಸೇರಿ ಮೂವರು ಆರೋಪಿಗಳು ಅಂಧರ್​ ಆಗಿದ್ದಾರೆ. ಕೊಡಿಗೆಹಳ್ಳಿಯ ರಾಯಲ್ ಮಾರ್ಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ, ರಾತ್ರಿ 10 ಗಂಟೆಗೆ ಕೆಲಸ ಮುಗಿಸಿ ಬರುವಾಗ ಆರೋಪಿಗಳು ಕಾರ್ ನಲ್ಲಿ ಬಂದು ಕಿಡ್ನಾಪ್ ಮಾಡಿದ್ದರು. ಜನವರಿ 22 ರಂದು ಯುವತಿಯನ್ನು ಅಪಹರಿಸಿಕೊಂಡು ಹೋಗಲಾಗಿತ್ತು. ಹಾಸನದ ಸಕಲೇಶಪುರದಲ್ಲಿ ಇಂದು ಆರೋಪಿಗಳ ಬಂಧನವಾಗಿದ್ದು, ಯುವತಿಯನ್ನು ರಕ್ಷಣೆ ಮಾಡಲಾಗಿದೆ.

ನಾಲ್ಕು ವರ್ಷದ ಹಿಂದೆ ಮದುವೆಯಾಗಿದ್ದ ದೇವರಾಜ ಹೆಂಡತಿಯ ಜೊತೆಗೆ ಆಕೆಯ ತಂಗಿಯನ್ನೂ ಪ್ರೀತಿಸ್ತಿದ್ದ. ಆದ್ರೆ 20 ವರ್ಷದ ಯುವತಿ ಇದಕ್ಕೆ ಒಪ್ಪಿರಲಿಲ್ಲ. ಆಗ ಕಿಡ್ನಾಪ್ ಮಾಡಿಕೊಂಡು ಮದುವೆ ಮಾಡೊ‌ ಪ್ಲಾನ್ ನಲ್ಲಿದ್ದ ದೇವರಾಜ.

ಮಗನ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ತಾಯಿ ಸಾವು ಮಂಡ್ಯ: ಮಗನ ಸಾವಿನ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಗಿಡುವಿನ ಹೊಸಹಳ್ಳಿ ಕೊಪ್ಪಲಿನಲ್ಲಿ ತಾಯಿ-ಮಗ ಹೀಗೆ ಸಾವಿನಲ್ಲಿ ಒಂದಾಗಿದ್ದಾರೆ. ಲೋ ಬಿಪಿಯಿಂದಾಗಿ 45 ವರ್ಷದ ಕುಶಾಲ್ ಮೃತಪಟ್ಟಿದ್ದ. ಮಗನ ಸಾವಿನ ಸುದ್ದಿ ಕೇಳಿ ತಾಯಿ ಲಕ್ಷ್ಮಮ್ಮ(69) ಸಹ ಇಹಲೋಕ ತ್ಯಜಿಸಿದ್ದಾರೆ.

ನಿನ್ನೆ ಮನೆಯಲ್ಲಿ ಟಿವಿ ನೋಡುವ ವೇಳೆ ಕುಶಾಲ್‌ಗೆ ಲೋ‌ ಬಿಪಿ ಆಗಿದೆ. ರಕ್ತದೊತ್ತಡ ಕುಸಿದು ಒದ್ದಾಡುತ್ತಿದ್ದ ಕುಶಾಲ್‌ನನ್ನು ಸ್ಥಳೀಯರು ಮನೆಯ ಹೊರಗೆ ತಂದಿದ್ದಾರೆ. ಈ ವೇಳೆ ಕುಶಾಲ್ ಮನೆಯ ಮುಂದೆ ಪ್ರಾಣ ಬಿಟ್ಟಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಲಕ್ಷ್ಮಮ್ಮ ಮಗನ ಸಾವು ನೋಡಿ ಹೃದಯಾಘಾತಕ್ಕೆಈಡಾಗಿದ್ದಾರೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Also read: Republic Day 2022 Parade: ಮೈಸೂರು ಚಹಾ ಮಾರಾಟಗಾರರ ಮಗಳ ಹೆಗಲಿಗೆ ದೆಹಲಿ ಗಣರಾಜ್ಯೋತ್ಸವ ಪರೇಡ್​ನಲ್ಲಿ ಎನ್​ಸಿಸಿ ನೇತೃತ್ವ!

Published On - 9:21 am, Mon, 24 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ