ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ, ಪತಿ ಮೇಲೆ ಅನುಮಾನ
ಬೆಂಗಳೂರಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಶವ ಪತ್ತೆಯಾಗಿದೆ. ಮತ್ತೊಂದೆಡೆ ಚಿಕ್ಕಗಳೂರಿನಲ್ಲಿ ರೈತ ಮಹಿಳೆಯೊಬ್ಬರು ಸಾಲಬಾಧೆ ತಾಳಲಾರದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಎರಡು ಪ್ರತ್ಯೇಕ ಸುದ್ದಿಯ ವಿವರ ಈ ಕೆಳಗಿನಂತಿದೆ.
ಬೆಂಗಳೂರು, (ಅಕ್ಟೋಬರ್ 05): ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆ ಮೃತದೇಹ ಪತ್ತೆಯಾಗಿದೆ. ಬೆಂಗಳೂರಿನ (Bengaluru) ಯಲಹಂಕ ಉಪನಗರ 3ನೇ ಹಂತದಲ್ಲಿ ಈ ಘಟನೆ ನಡೆದಿದೆ. ರೇಖಾ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ಮೃತ ಮಹಿಳೆಯ ಪೊಷಕರು ಆಕೆಯ ಪತಿ ಅಭಿರಾಮ್ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಹಣ, ಒಡವೆ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿಕೊಡಲಾಗಿದೆ. ಆದರೂ ಪತಿ ಅಭಿರಾಮ್ ಹಾಗೂ ಕುಟುಂಬಸ್ಥರು ರೇಖಾಗೆ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ಕೊಟ್ಟು ಬಳಿಕ ದೈಹಿಕವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ನಂತರ ರೇಖಾ ಆತ್ಮಹತ್ಯೆ ಮಾಡಿಕೊಂಡಂತೆ ಬಿಂಬಿಸಿದ್ದಾರೆ ಎಂದು ಆರೋಪಿಸಿದ್ದು, ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಪೊಲೀಸರು PC 302 ಸೆಕ್ಷನ್ ಹಾಗೂ 304B, 34 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ರೈತ ಮಹಿಳೆ ಆತ್ಮಹತ್ಯೆ
ಚಿಕ್ಕಮಗಳೂರು, (ಅ.05): ಸಾಲಬಾಧೆ ತಾಳಲಾರದೆ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. 75 ವರ್ಷದ ಹನುಮಮ್ಮ ಮೃತ ರೈತ ಮಹಿಳೆ. ಮೂರು ಎಕರೆ 30 ಗುಂಟೆಯ ಹೊಲದಲ್ಲಿ ಜೋಳ, ರಾಗಿ ಬಿತ್ತನೆ ಮಾಡಿದ್ದರು. ಆದ್ರೆ, ಮಳೆ ಕೈಕೊಟ್ಟ ಹಿನ್ನೆಲೆ ಬೆಳೆ ನಾಶವಾಗಿದೆ ಮತ್ತೊಂದಡೆ ಸಾಲ. ಇದರಿಂದ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ್ದಾರೆ. ಕೆನರಾ ಬ್ಯಾಂಕ್ ನಲ್ಲಿ 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಮಳೆ ಕೈಕೊಟ್ಟ ಹಿನ್ನೆಲೆ ಬೆಳೆ ನಷ್ಟ, ಸಾಲಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ