AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ, ಗಂಡನ ಮನೆಯವರೇ ಕೊಲೆ ಮಾಡಿರುವ ಆರೋಪ

ಮದುವೆಯಾದಾಗಿನಿಂದ ಮಗಳ ಜೊತೆ ಯಾವಾಗಲೂ ಜಗಳ ಆಗುತ್ತಿತ್ತು. ನನ್ನ ಅಳಿಯನಿಗೆ ಇನ್ನೋರ್ವ ಮಹಿಳೆಯ ಜೊತೆ ಸಂಬಂಧವಿದೆ ಎಂದು ಮೃತ ಗೃಹಿಣಿ ತಂದೆ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ, ಗಂಡನ ಮನೆಯವರೇ ಕೊಲೆ ಮಾಡಿರುವ ಆರೋಪ
ಗೃಹಿಣಿ ಕತೀಜಾ
TV9 Web
| Edited By: ಆಯೇಷಾ ಬಾನು|

Updated on:Nov 28, 2022 | 8:13 AM

Share

ಬೆಂಗಳೂರು: ನಗರದ ಸುದ್ದಗುಂಟೆಪಾಳ್ಯದ ಗುರಪ್ಪನಪಾಳ್ಯದ ಮನೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಕತೀಜಾ ಕೂಬ್ರ(29) ಶವ ಪತ್ತೆಯಾಗಿದೆ. ಗಂಡನ ಮನೆಯವರೇ ಕೊಲೆ ಮಾಡಿದ್ದಾರೆಂದು ಮೃತ ಕತೀಜಾ ಕುಟುಂಬಸ್ಥರು ಸುದ್ದಗುಂಟೆಪಾಳ್ಯ ಪೊಲೀಸ್​​​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪತಿ ಮಹೆಬೂಬ್ ಪರೀಷ್ ಪತ್ನಿಯನ್ನ ಹೊಡದು ನೇಣು ಹಾಕಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದು ದೂರು ಆಧರಿಸಿ ಪತಿ ಮೆಹಬೂಬ್​ ಪರೀಷ್, ಮಾವ, ನಾದಿನಿಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ಸಂಬಂಧ ಮಾತನಾಡಿದ ಮೃತ ಕತೀಜಾ ತಂದೆ ಕಣ್ಣೀರು ಹಾಕಿದ್ದಾರೆ. ಮದುವೆಯಾದಾಗಿನಿಂದ ಮಗಳ ಜೊತೆ ಯಾವಾಗಲೂ ಜಗಳ ಆಗುತ್ತಿತ್ತು. ನನ್ನ ಅಳಿಯನಿಗೆ ಇನ್ನೋರ್ವ ಮಹಿಳೆಯ ಜೊತೆ ಸಂಬಂಧವಿದೆ. ಹಾಗಾಗಿ ನನ್ನ ಮಗಳನ್ನ ಅಳಿಯನೇ ಸಾಯಿಸಿದ್ದಾನೆ. ನನ್ನ ಮಗಳ ಗಂಡನ ಮನೆಯವರೇ ಕೊಲೆ ಮಾಡಿ ನೇಣು ಹಾಕಿದ್ದಾರೆ. ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ ಅವರಿಗೆ ಶಿಕ್ಷೆಯಾಗಬೇಕು ಎಂದು ಮೃತ ಕತೀಜಾ ತಂದೆ ಜಾವಿದ್​ ವುಲ್ಲಾಖಾನ್ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಉಗ್ರರನ್ನು ಟಾರ್ಗೆಟ್ ಮಾಡುವಂತೆ ನಾವು ಹೇಳಿದೆವು, ಅವರು ಮೋದಿಯನ್ನು ಟಾರ್ಗೆಟ್ ಮಾಡಿದರು: ಪ್ರಧಾನಿ ಮೋದಿ

ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ಮತ್ತೊಂದೆಡೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದಲ್ಲಿ ತಿಪ್ಪಣ್ಣ ಹೊಸಮನಿ(34), ಸುಜಾತಾ(30) ಎಂಬ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಕ್ಯಾಮೆರಾಮನ್ ಆಗಿ‌ ಕೆಲಸ ಮಾಡುತ್ತಿದ್ದ ತಿಪ್ಪಣ್ಣ, ಇತ್ತೀಚೆಗೆ ಕೆಲಸ ಬಿಟ್ಟು ಮುದ್ದೇಬಿಹಾಳ ಪಟ್ಟಣಕ್ಕೆ ಬಂದಿದ್ದರು. ಕಳೆದ ಒಂದು ವರ್ಷದ ಹಿಂದೆ ಸುಜಾತಾಳನ್ನು‌ ಪ್ರೀತಿಸಿ ಮದುವೆಯಾಗಿದ್ದರು. ಆದ್ರೆ ಈಗ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಲಭ್ಯವಾಗಿಲ್ಲ. ಸ್ಥಳಕ್ಕೆ ‌ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿ ನಗರದಲ್ಲಿ ಹೆಚ್ಚಾದ ಮನೆಗಳ್ಳತನ ಪ್ರಕರಣಗಳು

ಕಲಬುರಗಿಯಲ್ಲಿ ಮನೆಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ನಗರದ ಫಿರ್ದೋಸ್ ಕಾಲೋನಿಯಲ್ಲಿ ಮನೆ ಬೀಗ ಮುರಿದು ಕಳ್ಳರು 50 ಗ್ರಾಂ ಚಿನ್ನಾಭರಣ ಮತ್ತು 50 ಸಾವಿರ ರೂ ನಗದು ದೋಚಿ ಪರಾರಿಯಾಗಿದ್ದಾರೆ. ತಬಸುಮ್ ಎಂಬುವರು ಕೆಲಸಕ್ಕೆ ಹೋದಾಗ ಕನ್ನ ಹಾಕಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:13 am, Mon, 28 November 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು