AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನೂರಾರು ಮರಗಳ ಮಾರಣಹೋಮಕ್ಕೆ ರೈಲ್ವೆ ಇಲಾಖೆ ಸಿದ್ದತೆ: ಪರಿಸರ ಹೋರಾಟಗಾರರ ಆಕ್ರೋಶ

ಬೆಂಗಳೂರಿನ, ಏರ್ಪೋರ್ಟ್ ಮಾದರಿಯ ಮೊದಲ ರೈಲು ನಿಲ್ದಾಣ ಬೈಯಪ್ಪನಹಳ್ಳಿ ಬಳಿಯ ಸರ್​​ಎಂ ವಿಶ್ವೇಶ್ವರಯ್ಯ ರೈಲ್ವೆ ಸ್ಟೇಷನ್​​ನಲ್ಲಿ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆ, ನೂರಾರು ಮರಗಳನ್ನು ಕಡಿಯಲು ರೈಲ್ವೆ ಇಲಾಖೆ ಸಿದ್ದತೆ ಮಾಡಿಕೊಳ್ಳುತ್ತಿದೆ. ಇದರ ವಿರುದ್ಧ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮರಗಳ ಕಡಿಯುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ನೂರಾರು ಮರಗಳ ಮಾರಣಹೋಮಕ್ಕೆ ರೈಲ್ವೆ ಇಲಾಖೆ ಸಿದ್ದತೆ: ಪರಿಸರ ಹೋರಾಟಗಾರರ ಆಕ್ರೋಶ
ಸರ್​​ಎಂ ವಿಶ್ವೇಶ್ವರಯ್ಯ ರೈಲ್ವೆ ಸ್ಟೇಷನ್​​ ಹೊರಬಾಗದ ನೋಟImage Credit source: tv9
ಕಿರಣ್​ ಸೂರ್ಯ
| Edited By: |

Updated on: Mar 02, 2026 | 8:50 AM

Share

ಬೆಂಗಳೂರು, ಮಾರ್ಚ್​ 2: ಬೈಯಪ್ಪನಹಳ್ಳಿ ಬಳಿಯ ಸರ್​ಎಂ ವಿಶ್ವೇಶ್ವರಯ್ಯ ರೈಲ್ವೆ ಸ್ಟೇಷನ್​ನಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ ಬರೋಬ್ಬರಿ 269 ಮರಗಳನ್ನು ಕಡಿಯಲು ರೈಲ್ವೆ ಇಲಾಖೆ (Indian Railways) ಮುಂದಾಗುತ್ತಿದೆ. ಇದಕ್ಕೆ ಪರಿಸರ ಹೋರಾಟಗಾರರಿಂದ ಆಕ್ಷೇಪ ವ್ಯಕ್ತವಾಗಿದೆ. ಬೈಯಪ್ಪನಹಳ್ಳಿಯಲ್ಲಿರುವ ಎಸ್ಎಂವಿಟಿ ರೈಲ್ವೆ ನಿಲ್ದಾಣದಲ್ಲಿರುವ 269 ಮರಗಳು ಹತ್ತಾರು ವರ್ಷಗಳ ಹಳೆಯದ್ದಾಗಿವೆ. ಅವುಗಳು ಬೃಹತ್ ಮರಗಳಾಗಿದ್ದು, ಹಾಗಾಗಿ ಯಾವುದೇ ಕಾರಣಕ್ಕೂ ಅವುಗಳನ್ನು ಕಡಿಯಬಾರದು ಎಂದು ಪರಿಸರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ವೇಳೆ ಮರಗಳನ್ನು ಕಡಿಯಲು ಮುಂದಾದರೆ ರೈಲು ನಿಲ್ದಾಣದ ಎದುರು ಬೃಹತ್ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಆದರೆ, ರೈಲ್ವೆ ಇಲಾಖೆ ಮಾತ್ರ ಯಾವುದನ್ನೂ ಲೆಕ್ಕಿಸದೆ ಮರಗಳನ್ನು ಕಡಿಯಲು ಸಿದ್ದತೆ ಮಾಡಿಕೊಂಡಿದೆ.

ರೈಲ್ವೆ ಕೋಚ್​ಗಳ ತಪಾಸಣೆ ಮತ್ತು ನಿರ್ವಹಣೆ ಮಾಡುವುದಕ್ಕಾಗಿ ರೈಲ್ವೆ ಡಿಪೋ ನಿರ್ಮಾಣಕ್ಕೆ ರೈಲ್ವೆ ಇಲಾಖೆ ಮುಂದಾಗಿದೆ. ಇಲಾಖೆ ಉದ್ದೇಶಿಸಿರುವ ಅದೇ ಜಾಗದಲ್ಲಿ 269 ಮರಗಳಿವೆ. ಹೀಗಾಗಿ ಆ ಮರಗಳನ್ನು ಕಡಿದು ಕಾಮಗಾರಿ ಮಾಡಲು ರೈಲ್ವೆ ಇಲಾಖೆ ತೀರ್ಮಾನ ಮಾಡಿದೆ. ಇದಕ್ಕೆ ಈಗ ಸ್ಥಳೀಯರಿಂದಲೂ ಅಸಮಾಧಾನ ವ್ಯಕ್ತವಾಗಿದೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣಕ್ಕೂ ತಟ್ಟಿದ ಇರಾನ್-ಇಸ್ರೇಲ್ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು, ಪ್ರಯಾಣಿಕರ ಪರದಾಟ

ಒಟ್ಟಿನಲ್ಲಿ, ಅಭಿವೃದ್ಧಿ ಅನ್ನೋ ಹೆಸರಿನಲ್ಲಿ ಮರಗಳನ್ನು ಕಡಿಯುತ್ತಾ ಹೋದರೆ ಗಾರ್ಡನ್ ಸಿಟಿ ಹೋಗಿ ಕಾಂಕ್ರೀಟ್ ಜಂಗಲ್ ಆಗುವುದರಲ್ಲಿ ಅನುಮಾನವಿಲ್ಲ ಎಂಬ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು