AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಡ್ರಗ್​​​​ ಕಾರ್ಯಾಚರಣೆ ಮುಂದುವರಿಸಿದ ಪೊಲೀಸರು: ನೂರಾರು ಪೆಡ್ಲರ್​ಗಳ ಬಂಧನ

ಬೆಂಗಳೂರು ಪೊಲೀಸರು ಡ್ರಗ್ಸ್ ದಂಧೆ ವಿರುದ್ಧ ಸಮರ ಮುಂದುವರಿಸಿದ್ದಾರೆ. ಕಾರ್ಯಾಚರಣೆ ವೇಳೆ ಹೈಡ್ರೋ ಗಾಂಜಾ, ಎಂಡಿಎಂಎ ಸೇರಿದಂತೆ 160 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಂಡು, ನೂರಾರು ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಈ ವರ್ಷ 11 ತಿಂಗಳಲ್ಲಿ ಸಾವಿರಕ್ಕೂ ಹೆಚ್ಚು ಡ್ರಗ್ಸ್ ಪ್ರಕರಣಗಳು ದಾಖಲಾಗಿದ್ದು, ನಗರದಲ್ಲಿ ಮಾದಕವಸ್ತು ಜಾಲಕ್ಕೆ ತೀವ್ರ ಹೊಡೆತ ನೀಡಲಾಗಿದೆ.

ಬೆಂಗಳೂರಿನಲ್ಲಿ ಡ್ರಗ್​​​​ ಕಾರ್ಯಾಚರಣೆ ಮುಂದುವರಿಸಿದ ಪೊಲೀಸರು: ನೂರಾರು ಪೆಡ್ಲರ್​ಗಳ ಬಂಧನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Dec 04, 2025 | 2:41 PM

Share

ಬೆಂಗಳೂರು, ಡಿ.4: ಬೆಂಗಳೂರಿನಲ್ಲಿ ಡ್ರಗ್ಸ್​ ದಂಧೆ (Bengaluru drug bust) ವಿರುದ್ಧ ಬೆಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ವಿವಿಧ ಠಾಣಾ ವ್ಯಾಪ್ತಿಗಳಲ್ಲಿನ ಡ್ರಗ್ಸ್​, ಗಾಂಜಾ ಮಾರಾಟಗಾರರ ಬಂಧನ ಮಾಡಿದ್ದಾರೆ. ಈ ಮೂಲಕ ಕೋಟ್ಯಂತರ ಮೌಲ್ಯದ ಡ್ರಗ್ಸ್​, ಗಾಂಜಾವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್​ ಸಿಂಗ್ ಕಾರ್ಯಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ. ಹೈಡ್ರೋ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧನ ಮಾಡಲಾಗಿದೆ. ಮಹಾಲಕ್ಷ್ಮೀ ಲೇಔಟ್​ ಪೊಲೀಸರಿಂದ ವಿದೇಶಿ ಮಹಿಳೆ ಸೇರಿ ಇಬ್ಬರನ್ನು ಬಂಧಿಸಿದ್ದಾರೆ. 18.60 ಕೋಟಿ ಮೌಲ್ಯದ 18 ಕೆಜಿ 590 ಗ್ರಾಂ ಹೈಡ್ರೋ ಗಾಂಜಾ ವಶಪಡಿಸಿಕೊಂಡಿದ್ದು, ಬಂಧಿತರಿಂದ 2 ಮೊಬೈಲ್, ಕೃತ್ಯಕ್ಕೆ ಬಳಸಿದ್ದ ಕಾರು ವಶಕ್ಕೆ ಪಡೆಯಲಾಗಿದೆ.

ಇನ್ನು ಆರ್.ಟಿ.ನಗರ ಪೊಲೀಸರು ಐವರು ಗಾಂಜಾ ಮಾರಾಟಗಾರರ ಬಂಧನ ಮಾಡಿದ್ದಾರೆ. ಬಂಧಿತರಿಂದ 5.43 ಲಕ್ಷ ಮೌಲ್ಯದ ಐದು ಕೆಜಿ 437 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಮಲ್ಲೇಶ್ವರಂ ಪೊಲೀಸರು ಗಾಂಜಾ ಮಾರುತ್ತಿದ್ದ ಓರ್ವನನ್ನು ಬಂಧಿಸಿದ್ದಾರೆ. ಆರೋಪಿಯಿಂದ 77,600 ರೂ. ಮೌಲ್ಯದ 772 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ಜೆಸಿನಗರ ಪೊಲೀಸರು ಎಂಡಿಎಂಎ ಮಾರುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ. ಆತನಿಂದ 1.35 ಲಕ್ಷ ಮೌಲ್ಯದ 21 ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಡ್ರಗ್ ಮಾಫಿಯಾ ವಿರುದ್ಧ ಬೆಂಗಳೂರು ಪೊಲೀಸರ ಸತತ ದಾಳಿ: 11 ತಿಂಗಳಲ್ಲಿ 146 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಲಾರಿ ಸ್ಟಾಂಡ್ ಬಳಿ 8.35 ಲಕ್ಷ ರೂ. ಮೌಲ್ಯದ ಗಾಜಾ ವಶ:

RMC ಯಾರ್ಡ್ ಪೊಲೀಸರು ಲಾರಿ ಸ್ಟಾಂಡ್ ಬಳಿ ಮಾರಾಟ ಮಾಡುತ್ತಿದ್ದ 8 kG 350 ಗ್ರಾಂ ನ 8.35 ಲಕ್ಷ ಮೌಲ್ಯದ ಗಾಜಾ ವಶವನ್ನು ವಶಪಡಿಸಿಕೊಂಡಿದ್ದಾರೆ. ಹಾಗೂ ಆರೋಪಿಯನ್ನು ಬಂಧಿಸಿದ್ದಾರೆ. ಈ ವರ್ಷ ನಗರದಲ್ಲಿ ಇದುವರೆಗೆ 160 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ. ನಗರದಲ್ಲಿ 11 ತಿಂಗಳಲ್ಲಿ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ನೂರಾರು ಆರೋಪಿಗಳ ಬಂಧನವಾಗಿದೆ. ಚಾಕಲೆಟ್, ಕಾಫಿ ಪುಡಿ, ಪಾರ್ಸೆಲ್, ಗಿಫ್ಟ್ ಬಾಕ್ಸ್ ಜತೆಗೆ ಇಟ್ಟುಕೊಂಡು ಸಾಗಿಸುವುದೂ ಸೇರಿದಂತೆ ಅನೇಕ ಮಾದರಿಯಲ್ಲಿ ಡ್ರಗ್‌ಗಳನ್ನು ಸಾಗಿಸಲು ಪೆಡ್ಲರ್‌ಗಳು ಯತ್ನಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Thu, 4 December 25

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
ಹಿಜಾಬ್ Vs ಕೇಸರಿ ಶಾಲು: ಮತ್ತೆ ಮುನ್ನೆಲೆಗೆ ಬಂದ ವಿವಾದ
ಹಿಜಾಬ್ Vs ಕೇಸರಿ ಶಾಲು: ಮತ್ತೆ ಮುನ್ನೆಲೆಗೆ ಬಂದ ವಿವಾದ