
ಬೆಂಗಳೂರು, ಡಿ.4: ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ (Bengaluru drug bust) ವಿರುದ್ಧ ಬೆಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ವಿವಿಧ ಠಾಣಾ ವ್ಯಾಪ್ತಿಗಳಲ್ಲಿನ ಡ್ರಗ್ಸ್, ಗಾಂಜಾ ಮಾರಾಟಗಾರರ ಬಂಧನ ಮಾಡಿದ್ದಾರೆ. ಈ ಮೂಲಕ ಕೋಟ್ಯಂತರ ಮೌಲ್ಯದ ಡ್ರಗ್ಸ್, ಗಾಂಜಾವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಕಾರ್ಯಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ. ಹೈಡ್ರೋ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧನ ಮಾಡಲಾಗಿದೆ. ಮಹಾಲಕ್ಷ್ಮೀ ಲೇಔಟ್ ಪೊಲೀಸರಿಂದ ವಿದೇಶಿ ಮಹಿಳೆ ಸೇರಿ ಇಬ್ಬರನ್ನು ಬಂಧಿಸಿದ್ದಾರೆ. 18.60 ಕೋಟಿ ಮೌಲ್ಯದ 18 ಕೆಜಿ 590 ಗ್ರಾಂ ಹೈಡ್ರೋ ಗಾಂಜಾ ವಶಪಡಿಸಿಕೊಂಡಿದ್ದು, ಬಂಧಿತರಿಂದ 2 ಮೊಬೈಲ್, ಕೃತ್ಯಕ್ಕೆ ಬಳಸಿದ್ದ ಕಾರು ವಶಕ್ಕೆ ಪಡೆಯಲಾಗಿದೆ.
ಇನ್ನು ಆರ್.ಟಿ.ನಗರ ಪೊಲೀಸರು ಐವರು ಗಾಂಜಾ ಮಾರಾಟಗಾರರ ಬಂಧನ ಮಾಡಿದ್ದಾರೆ. ಬಂಧಿತರಿಂದ 5.43 ಲಕ್ಷ ಮೌಲ್ಯದ ಐದು ಕೆಜಿ 437 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಮಲ್ಲೇಶ್ವರಂ ಪೊಲೀಸರು ಗಾಂಜಾ ಮಾರುತ್ತಿದ್ದ ಓರ್ವನನ್ನು ಬಂಧಿಸಿದ್ದಾರೆ. ಆರೋಪಿಯಿಂದ 77,600 ರೂ. ಮೌಲ್ಯದ 772 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ಜೆಸಿನಗರ ಪೊಲೀಸರು ಎಂಡಿಎಂಎ ಮಾರುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ. ಆತನಿಂದ 1.35 ಲಕ್ಷ ಮೌಲ್ಯದ 21 ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಡ್ರಗ್ ಮಾಫಿಯಾ ವಿರುದ್ಧ ಬೆಂಗಳೂರು ಪೊಲೀಸರ ಸತತ ದಾಳಿ: 11 ತಿಂಗಳಲ್ಲಿ 146 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ
RMC ಯಾರ್ಡ್ ಪೊಲೀಸರು ಲಾರಿ ಸ್ಟಾಂಡ್ ಬಳಿ ಮಾರಾಟ ಮಾಡುತ್ತಿದ್ದ 8 kG 350 ಗ್ರಾಂ ನ 8.35 ಲಕ್ಷ ಮೌಲ್ಯದ ಗಾಜಾ ವಶವನ್ನು ವಶಪಡಿಸಿಕೊಂಡಿದ್ದಾರೆ. ಹಾಗೂ ಆರೋಪಿಯನ್ನು ಬಂಧಿಸಿದ್ದಾರೆ. ಈ ವರ್ಷ ನಗರದಲ್ಲಿ ಇದುವರೆಗೆ 160 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ. ನಗರದಲ್ಲಿ 11 ತಿಂಗಳಲ್ಲಿ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ನೂರಾರು ಆರೋಪಿಗಳ ಬಂಧನವಾಗಿದೆ. ಚಾಕಲೆಟ್, ಕಾಫಿ ಪುಡಿ, ಪಾರ್ಸೆಲ್, ಗಿಫ್ಟ್ ಬಾಕ್ಸ್ ಜತೆಗೆ ಇಟ್ಟುಕೊಂಡು ಸಾಗಿಸುವುದೂ ಸೇರಿದಂತೆ ಅನೇಕ ಮಾದರಿಯಲ್ಲಿ ಡ್ರಗ್‌ಗಳನ್ನು ಸಾಗಿಸಲು ಪೆಡ್ಲರ್‌ಗಳು ಯತ್ನಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:40 pm, Thu, 4 December 25