ಸಿಸಿಬಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; 3 ಪ್ರತ್ಯೇಕ ಡ್ರಗ್ಸ್ ಪ್ರಕರಣಗಳಲ್ಲಿ ನಾಲ್ವರು ಅರೆಸ್ಟ್

ಪ್ರತ್ಯೇಕ ಮೂರು ಪ್ರಕರಣಗಳ ಸಂಬಂಧ ಸಿಸಿಬಿ ಕಾರ್ಯಾಚರಣೆ‌ ನಡೆಸಿ ಅನೇಕರ ಹೆಡೆಮುರಿ ಕಟ್ಟಿದೆ. ವಿದೇಶದಿಂದ ಬಂದು ಡ್ರಗ್ ದಂಧೆಯಲ್ಲೇ ಭಾಗಿಯಾಗಿದ್ದ ಡ್ರಗ್ ಪೆಡ್ಲರ್ ಮತ್ತು ನೈಜಿರಿಯಾ ಹಾಗೂ ಘಾನದಿಂದ ಬಂದು ಪ್ರತ್ಯೇಕ ಎರಡು ತಂಡಗಳಿಂದ ನಡೆಯುತ್ತಿದ್ದ ಡ್ರಗ್ ದಂಧೆಯ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಿಸಿಬಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; 3 ಪ್ರತ್ಯೇಕ ಡ್ರಗ್ಸ್ ಪ್ರಕರಣಗಳಲ್ಲಿ ನಾಲ್ವರು ಅರೆಸ್ಟ್
ಡ್ರಗ್ಸ್
Follow us
Jagadisha B
| Updated By: ಆಯೇಷಾ ಬಾನು

Updated on: Feb 27, 2024 | 2:21 PM

ಬೆಂಗಳೂರು, ಫೆ.27: ಸಿಸಿಬಿ ಪೊಲೀಸರು (CCB Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಡ್ರಗ್ ಪೆಡ್ಲರ್ ಸಹಿತ ನಾಲ್ವರನ್ನು ಬಂಧಿಸಿದ್ದಾರೆ. ನಶೆ ಏರಿಸಲು ಸಿದ್ಧವಾಗಿದ್ದ ಬರೋಬ್ಬರಿ 2.35 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ವಶಕ್ಕೆ ಪಡೆದಿದೆ. ಪ್ರತ್ಯೇಕ ಮೂರು ಪ್ರಕರಣಗಳ ಸಂಬಂಧ ಸಿಸಿಬಿ ಕಾರ್ಯಾಚರಣೆ‌ ನಡೆಸಿ ಅನೇಕರ ಹೆಡೆಮುರಿ ಕಟ್ಟಿದೆ. ವಿದೇಶದಿಂದ ಬಂದು ಡ್ರಗ್ ದಂಧೆಯಲ್ಲೇ ಭಾಗಿಯಾಗಿದ್ದ ಡ್ರಗ್ ಪೆಡ್ಲರ್ ಮತ್ತು ನೈಜಿರಿಯಾ ಹಾಗೂ ಘಾನದಿಂದ ಬಂದು ಪ್ರತ್ಯೇಕ ಎರಡು ತಂಡಗಳಿಂದ ನಡೆಯುತ್ತಿದ್ದ ಡ್ರಗ್ ದಂಧೆಯ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸೊಲದೇವನಹಳ್ಳಿಯ ಕಾರ್ಯಾಚರಣೆಯಲ್ಲಿ ಇಬ್ಬರು ಡ್ರಗ್ ಪೆಡ್ಲರ್​ಗಳನ್ನು ಬಂಧಿಸಲಾಗಿದೆ. ಓರ್ವ ಪೆಡ್ಲರ್ ಈ ಹಿಂದೆ ಪ್ರವಾಸಿ ವಿಸಾದಲ್ಲಿ ಬಂದು ಡ್ರಗ್ ದಂಧೆಯಲ್ಲಿ ಭಾಗಿಯಾಗಿ ಮುಂಬೈನಲ್ಲಿ ಬಂಧನದ ಬಳಿಕ ಜೈಲು ಸೇರಿದ್ದ. ಬಳಿಕ ಜೈಲಿನಿಂದ ಬಿಡುಗಡೆಯಾಗಿ ಮತ್ತೋರ್ವ ವಿದೇಶಿ ವ್ಯಕ್ತಿಯ ಜೊತೆ ಸೇರಿಕೊಂಡು ಬೆಂಗಳೂರಿನಲ್ಲಿ ದಂಧೆ ನಡೆಸುತ್ತಿದ್ದ. ಸದ್ಯ ಈಗ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 51 ಲಕ್ಷ ಮೌಲ್ಯದ 500 ಗ್ರಾಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.

ಇನ್ನು ಮತ್ತೊಂದೆಡೆ ಘಾನ ದೇಶದ ಇಮಾನ್ಯುಲ್ ಎಂಬ ಡ್ರಗ್ ಪೆಡ್ಲರ್​ನನ್ನು ಬಂಧಿಸಲಾಗಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಬ್ಯುಸಿನೆಸ್ ವಿಸಾದಲ್ಲಿ ಬಂದ ಇಮಾನ್ಯುಲ್ ಡ್ರಗ್ಸ್ ದಂಧೆ ನಡೆಸುತ್ತಿದ್ದ. ಇನ್ನು ಇಂಡಿಯನ್ ಪೋಸ್ಟ್ ಮುಖಾಂತರ ಹೈಡ್ರೋ ಗಾಂಜಾ ತರಿಸಿಕೊಳ್ಳುತಿದ್ದ ಆರೋಪಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಆರೋಪಿ ವಶಕ್ಕೆ ಪಡೆಯಲಾಗಿದೆ. ಬಂಧಿತನಿಂದ 3 ಲಕ್ಷ ಮೌಲ್ಯದ 42 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನಿಷೇಧದ ನಡುವೆಯೂ ತೆರೆದಿದ್ದ ಹುಕ್ಕಾ ಬಾರ್​ಗಳ ಮೇಲೆ ಸಿಸಿಬಿ ದಾಳಿ, 7 ಜನರ ಬಂಧನ

ರಾಡ್‌ ನಿಂದ ಹೊಡೆದು ಯುವಕನ ಹತ್ಯೆ

ಬಾಗಲಕೋಟೆಯ ಬೀಳಗಿಯಲ್ಲಿ ರಾಡ್‌ನಿಂದ ಹೊಡೆದು ಯುವಕನನ್ನು ಹತ್ಯೆಗೈಯ್ಯಲಾಗಿದೆ. ಹೆಗ್ಗೂರು ಪುನರ್ವಸತಿ ಕೇಂದ್ರದಲ್ಲಿ ಸಿದ್ದು ಇಂಡಿ ಎಂಬ ಯುವಕನನ್ನು ಸಾಗರ್ & ಟೀಂ ಕೊಲೆ ಮಾಡಿದೆ. ಬೈಕ್‌ ಅಪಘಾತ ಸಂಬಂಧ ಸಿದ್ದು ಮತ್ತು ಸಾಗರ್ ನಡುವೆ ಜಗಳ ನಡೆದಿತ್ತು. ಇದೇ ವಿಚಾರಕ್ಕೆ ಕಳೆದ ರಾತ್ರಿ ಸಿದ್ದುವನ್ನು ಕೊಲೆ ಮಾಡಲಾಗಿದೆ.

ಆಸ್ತಿವಿಚಾರಕ್ಕೆ ತಂದೆ ಕೊಂದ ಮಗ

ಮಂಡ್ಯದಲ್ಲಿ ಆಸ್ತಿ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಸುಂಡಹಳ್ಳಿ ಗ್ರಾಮದಲ್ಲಿ ಮಗನೇ ತಂದೆಯನ್ನು ಕೊಲೆಗೈದಿದ್ದಾನೆ. ಮಗ ಮಹದೇವ್‌ ತಲೆ ಮೇಲೆ ಕಲ್ಲು ಎತ್ತುಹಾಕಿ ತಂದೆ ನಂಜಪ್ಪನನ್ನು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಕೊಲೆಯಾದ ನಂಜಪ್ಪ ಆಸ್ತಿಯನ್ನು ಮಗಳ ಹೆಸರಿಗೆ ಬರೆದುಕೊಟ್ಟಿದ್ದ. ಆಸ್ತಿ ಕೊಡಲಿಲ್ಲ ಎಂಬ ಕಾರಣಕ್ಕೆ ಮಗ ಮಹದೇವ್ ಈ ಕೃತ್ಯವೆಸಗಿದ್ದಾನೆ.

ಅಪರಾಧ ಸುದ್ದಿಗಳನ್ನು  ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್