ಚುನಾವಣೆ ನೆತ್ತಿ ಮೇಲಿರುವಾಗ ಮಂಡ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಭಾರೀ ಹಿನ್ನಡೆ, ಪ್ರಮುಖ ನಾಯಕ ದೇವರಾಜ್ ಕಾಂಗ್ರೆಸ್ ಸೇರ್ಪಡೆ

ಅರುಣ್​ ಕುಮಾರ್​ ಬೆಳ್ಳಿ

Updated on: Mar 27, 2023 | 3:09 PM

ಎಲ್ಲರನ್ನು ಪಕ್ಷಕ್ಕೆ ಸ್ವಾಗತಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಯಾವುದೇ ಷರತ್ತುಗಳಿಲ್ಲದೆ ದೇವರಾಜ್ ತಮ್ಮ ಸಂಗಡಿಗರೊಂದಿಗೆ ಪಕ್ಷ ಸೇರಿದ್ದಾರೆ ಅಂತ ಹೇಳಿದರು.

ಬೆಂಗಳೂರು: ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿರುವಾಗ ಮಂಡ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಭಾರೀ ಹಿನ್ನಡೆ ಎದುರಾಗಿದೆ. ಕಳೆದ ಮೂರೂವರೆ ದಶಕಗಳಿಂದ ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿದಿದ್ದ ಮತ್ತು ಕೆ ಆರ್ ಪೇಟೆಗೆ (KR Pet) ನಡೆದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ 57,000 ಕ್ಕೂ ಹೆಚ್ಚು ಮತ ಪಡೆದಿದ್ದ ಬಿಎಲ್ ದೇವರಾಜ್ (BL Devaraj) ಇಂದು ತಮ್ಮ ಸಾವಿರಾರು ಬೆಂಬಲಿಗರೊಂದಿಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಎಲ್ಲರನ್ನು ಪಕ್ಷಕ್ಕೆ ಸ್ವಾಗತಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar), ಯಾವುದೇ ಷರತ್ತುಗಳಿಲ್ಲದೆ ದೇವರಾಜ್ ತಮ್ಮ ಸಂಗಡಿಗರೊಂದಿಗೆ ಪಕ್ಷ ಸೇರಿದ್ದಾರೆ ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 27, 2023 03:09 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.