ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿನ 3.5 ಲಕ್ಷ ಮೌಲ್ಯದ ವಸ್ತುಗಳು ಕಳವು

ವಿಮಾನ ನಿಲ್ದಾಣದ ಟರ್ಮಿನಲ್​1 ಮತ್ತು ಟರ್ಮಿನಲ್​ 2 ಅನ್ನು ಸಂಪರ್ಕಿಸುವ ಮಲ್ಟಿ-ಮೋಡಲ್ ಟ್ರಾನ್ಸ್‌ಪೋರ್ಟೇಶನ್ ಹಬ್ ಅನ್ನು ನಿರ್ಮಿಸಿಲು 3,50,000 ಮೌಲ್ಯದ ಕಬ್ಬಿಣದಿಂದ ತಯಾರಿಸಿದ 30 ರೈಲ್ಸ್ ಆಪ್ಟಿಮೈಸರ್‌ಗಳು ವಿಮಾನ ನಿಲ್ದಾಣದ ಆವರಣದಲ್ಲಿ ಇರಿಸಲಾಗಿತ್ತು. ಆದರೆ ಇದೀಗ ಈ ಸಾಮಗ್ರಿಗಳು ನಾಪತ್ತೆಯಾಗಿವೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
Follow us
ವಿವೇಕ ಬಿರಾದಾರ
|

Updated on: Nov 15, 2023 | 8:20 AM

ಬೆಂಗಳೂರು ನ.15: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 2 ರ ಆವರಣದಿಂದ 3.5 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಕಳ್ಳತನವಾಗಿದ್ದು, ಏರ್‌ಪೋರ್ಟ್ ಪೊಲೀಸ್ (Police) ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಗೋದ್ರೇಜ್ ಮತ್ತು ಬಾಯ್ಸ್ ಮ್ಯಾನುಫ್ಯಾಕ್ಚರಿಂಗ್ ಕಂಪನಿ ಲಿಮಿಟೆಡ್​​ಗೆ ಸಂಬಂಧಿಸಿದ ಸಾಮಗ್ರಿಗಳು ನಾಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಗೋದ್ರೇಜ್ ಕಂಪನಿಯ ಮ್ಯಾನೇಜರ್ ಕುಲದೀಪಕ್ ಸಿಂಗ್ ಶನಿವಾರ (ನವೆಂಬರ್ 11) ರಂದು ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 379 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣದ ಟರ್ಮಿನಲ್​1 ಮತ್ತು ಟರ್ಮಿನಲ್​ 2 ಅನ್ನು ಸಂಪರ್ಕಿಸುವ ಮಲ್ಟಿ-ಮೋಡಲ್ ಟ್ರಾನ್ಸ್‌ಪೋರ್ಟೇಶನ್ ಹಬ್ ಅನ್ನು ನಿರ್ಮಿಸಿಲು 3,50,000 ಮೌಲ್ಯದ ಕಬ್ಬಿಣದಿಂದ ತಯಾರಿಸಿದ 30 ರೈಲ್ಸ್ ಆಪ್ಟಿಮೈಸರ್‌ಗಳು ವಿಮಾನ ನಿಲ್ದಾಣದ ಆವರಣದಲ್ಲಿ ಇರಿಸಲಾಗಿತ್ತು. ಆದರೆ ಇದೀಗ ಈ ಸಾಮಗ್ರಿಗಳು ನಾಪತ್ತೆಯಾಗಿವೆ.

ಇದನ್ನೂ ಓದಿ: ಬೆಂಗಳೂರು: ವಿಮಾನದಲ್ಲಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಸಹಪ್ರಯಾಣಿಕನಿಂದ ಕಿರುಕುಳ; ದೂರು ದಾಖಲು

ವಿಮಾನ ನಿಲ್ದಾಣದ ಕಾಮಗಾರಿ 2020ರಿಂದ ಆರಂಭವಾಗಿದ್ದು, ಡಿಸೆಂಬರ್ 2022 ರಿಂದ ಆವರಣದೊಳಗೆ ಸಾಮಗ್ರಿಗಳನ್ನು ಇರಿಸಲಾಗಿತ್ತು. ಇತರ ಕೆಲಸಗಳಿಗಾಗಿ ಇರಿಸಲಾಗಿತ್ತು. ಸಂಸ್ಥೆಯ ಕಾರ್ಮಿಕರು ಕೆಲಸ ಮಾಡಲು ಸಾಮಗ್ರಿಗಳನ್ನು ತೆಗೆದುಕೊಳ್ಳಲು ಹೋದಾಗ ವಸ್ತುಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ವಸ್ತುಗಳು ನಾಪತ್ತೆಯಾಗಿರುವುದರ ಬಗ್ಗೆ ಭದ್ರತಾ ಸಿಬ್ಬಂದಿಗೂ ತಿಳಿದಿರಲಿಲ್ಲ ಎಂದು ಎಫ್ಐಆರ್​ನಲ್ಲಿ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ

ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ

ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?

ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್

ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ

ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್

ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ