ಬೆಂಗಳೂರು: ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಮುಂದೆ ಎಂಬಿಬಿಎಸ್ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಮತ್ತೊಮ್ಮೆ ಪರೀಕ್ಷೆ ಬೇಡ, ಮರು ಮೌಲ್ಯಮಾಪನ ಮಾಡುವಂತೆ ಆಗ್ರಹಿಸಿದ್ದಾರೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಎಂಬಿಬಿಎಸ್ ಆರ್-3 ಬ್ಯಾಚ್ನ ಪರೀಕ್ಷೆ ನಡೆದಿತ್ತು. ಕೋರ್ಟ್ ಮತ್ತೊಮ್ಮೆ ಮರು ಮೌಲ್ಯಮಾಪನ ನಡೆಸುವಂತೆ ಸೂಚಿಸಿದೆ. ಆದರೆ, ರಾಜೀವ್ ಗಾಂಧಿ ವಿವಿ ಪುನಃ ಪರೀಕ್ಷೆ ಮಾಡಲು ಮುಂದಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಸೆಪ್ಟೆಂಬರ್ 14 ರಂದು ಆರ್-3 ಬ್ಯಾಚ್ನ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತೇವೆ ಎಂದು ರಾಜೀವ್ ಗಾಂಧಿ ವಿವಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ವಿದ್ಯಾರ್ಥಿಗಳು ಪರೀಕ್ಷೆ ಬೇಡ ಅಂತಿದ್ದಾರೆ. ಆದರೆ ಮತ್ತೊಮ್ಮೆ ಮೌಲ್ಯಮಾಪನ ಮಾಡಲು ಸಾಧ್ಯವಿಲ್ಲ ಅಂತ ರಾಜೀವ್ ಗಾಂಧಿ ವಿವಿ ಕುಲಸಚಿವ ಪ್ರೊ.ರಾಮಕೃಷ್ಣ ರೆಡ್ಡಿ ಹೇಳುತ್ತಿದ್ದಾರೆ. ಹೀಗಾಗಿ ಎಂಬಿಬಿಎಸ್ ವಿದ್ಯಾರ್ಥಿಗಳು ರಾಜೀವ್ ಗಾಂಧಿ ವಿವಿ ಮುಂಭಾಗ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ.
ವೈದ್ಯಕೀಯ ಶಿಕ್ಷಣದಲ್ಲಿ ಶೇ. 27ರಷ್ಟು ಮೀಸಲಾತಿ
ಒಬಿಸಿ ಸಮುದಾಯದ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯುವುದಾದರೆ ಅವರಿಗೆ ಶೇ.27ರಷ್ಟು ಮೀಸಲಾತಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಹಾಗೇ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ (EWS) ಶೇ. 10ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದೆ. ಈ ಮೀಸಲಾತಿ ಎಂಬಿಬಿಎಸ್ (MBBS) ಮತ್ತು ಬಿಡಿಎಸ್(BDS)ಗೂ ಅನ್ವಯವಾಗಲಿದೆ. ಆಲ್ ಇಂಡಿಯಾ ಕೋಟಾದಡಿ ಬರುವ ಎಲ್ಲ ಸ್ನಾತಕೋತ್ತರ ವೈದ್ಯಕೀಯ ಕಾಲೇಜುಗಳಲ್ಲಿ ಕೂಡ ಒಬಿಸಿ (OBC) ವಿದ್ಯಾರ್ಥಿಗಳಿಗೆ ಶೇ. 27ರಷ್ಟು ಮೀಸಲಾತಿ ನೀಡಲಾಗುವುದು. ಜೊತಗೆ ಆರ್ಥಿಕವಾಗಿ ಹಿಂದುಳಿದಿರುವವರಿಗೆ ಶೇ.10ರಷ್ಟು ಮೀಸಲಾತಿ ನೀಡಲಾಗುವುದು. ಈ ವರ್ಷದಿಂದಲೇ ಈ ಮೀಸಲಾತಿ ಅನ್ವಯವಾಗಲಿದೆ.
ಇದನ್ನೂ ಓದಿ
ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವಂತೆ ಸಿಎಂ ಬೊಮ್ಮಾಯಿಗೆ ಸಿ.ಟಿ.ರವಿ ಮನವಿ
OBC Reservation: ಒಬಿಸಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಲ್ಲಿ ಶೇ. 27ರಷ್ಟು ಮೀಸಲಾತಿ; ಕೇಂದ್ರ ಸರ್ಕಾರ ಘೋಷಣೆ
(MBBS students protesting Front of Rajiv Gandhi University against re exam)