AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೇಸರ್ ಸುನ್ನತ್ ಬದಲು ಸಾಮಾನ್ಯ ಶಸ್ತ್ರಚಿಕಿತ್ಸೆ: ವೈದ್ಯನ ಯಡವಟ್ಟಿನಿಂದ ಬಾಲಕನ ನರಳಾಟ!

ಬೆಂಗಳೂರಿನ ಫ್ರೇಜರ್ ಟೌನ್ ಆಸ್ಪತ್ರೆಯಲ್ಲಿ ಲೇಸರ್ ಶಸ್ತ್ರಚಿಕಿತ್ಸೆ ನೀಡುವುದಾಗಿ ನಂಬಿಸಿ, 12 ವರ್ಷದ ಬಾಲಕನಿಗೆ ಸಾಮಾನ್ಯ ಶಸ್ತ್ರಚಿಕಿತ್ಸೆ ನಡೆಸಿ ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಬಾಲಕ ತೀವ್ರ ನೋವಿನಿಂದ ನರಳಾಡುತ್ತಿದ್ದು, ದೈಹಿಕ ಹಾಗೂ ಮಾನಸಿಕ ತೊಂದರೆ ಅನುಭವಿಸುತ್ತಿದ್ದಾನೆ. ಈ ಸಂಬಂಧ ವೈದ್ಯ ಡಾ. ರಿಯಾಜ್ ವಿರುದ್ಧ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೇಸರ್ ಸುನ್ನತ್ ಬದಲು ಸಾಮಾನ್ಯ ಶಸ್ತ್ರಚಿಕಿತ್ಸೆ: ವೈದ್ಯನ ಯಡವಟ್ಟಿನಿಂದ ಬಾಲಕನ ನರಳಾಟ!
ಸಾಂದರ್ಭಿಕ ಚಿತ್ರImage Credit source: The doctorpreneur Academy
ರಾಚಪ್ಪಾಜಿ ನಾಯ್ಕ್
| Edited By: |

Updated on: Oct 13, 2026 | 8:22 AM

Share

ಮುಖ್ಯಾಂಶಗಳು

  • ವೈದ್ಯರ ಯಡವಟ್ಟಿನಿಂದ 12 ವರ್ಷದ ಬಾಲಕ ತೀವ್ರ ನೋವಿನಿಂದ ನರಳಾಡುತ್ತಿದ್ದಾನೆ.
  • ಲೇಸರ್ ಬದಲಿಗೆ ಸಾಮಾನ್ಯ ಶಸ್ತ್ರಚಿಕಿತ್ಸೆ ನಡೆಸಿ 19 ಸಾವಿರ ಪಡೆದ ಆರೋಪ.
  • ವೈದ್ಯ ರಿಯಾಜ್ ವಿರುದ್ಧ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು, ಅಕ್ಟೋಬರ್ 13: ನಗರದ 12 ವರ್ಷದ ಬಾಲಕನಿಗೆ ಲೇಸರ್ ಸುನ್ನತ್ ಮಾಡಿಸುವುದಾಗಿ ನಂಬಿಸಿ, ಸಾಮಾನ್ಯ ಶಸ್ತ್ರಚಿಕಿತ್ಸೆ ನಡೆಸಿ ವೈದ್ಯನೊಬ್ಬ ವಂಚಿಸಿರುವ ಘಟನೆ ನಡೆದಿದೆ. ಈಗ ಬಾಲಕನ ಆರೋಗ್ಯದಲ್ಲಿ ಏರುಪೇರಾಗಿದ್ದು, ಫ್ರೇಜರ್ ಟೌನ್‌ನ ‘ನ್ಯೂ ಹೋಪ್ ಸೆಕ್ಸಾಲಜಿಸ್ಟ್ ಅಂಡ್ ಇನ್‌ಫರ್ಟಿಲಿಟಿ ಆಸ್ಪತ್ರೆ’ಯ ವೈದ್ಯ ಡಾ. ರಿಯಾಜ್ ವಿರುದ್ಧ ಬಾಲಕನ ಪೋಷಕರು ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಲೇಸರ್ ಸುನ್ನತ್ ಬಗ್ಗೆ ನೋಡಿದ್ದ ತಂದೆ

ಚಿಕ್ಕಮಗಳೂರು ಮೂಲದ ತಬ್ರೇಜ್ ಖಾನ್ ಹಾಗೂ ಗಫಾರ್ ದಂಪತಿಯ 12 ವರ್ಷದ ಮಗನಿಗೆ ಈ ಅಚಾತುರ್ಯ ಸಂಭವಿಸಿದೆ. ಬಾಲಕನು ಚಿಕ್ಕಂದಿನಿಂದಲೇ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ. ಮಗುವಿಗೆ ಮೂರು ತಿಂಗಳಿದ್ದಾಗಲೇ ಹೃದಯ ಶಸ್ತ್ರಚಿಕಿತ್ಸೆಯೂ ನಡೆದಿತ್ತು. ಈ ಕಾರಣದಿಂದಾಗಿ ಇದುವರೆಗೂ ಸುನ್ನತ್ ಮಾಡಿಸಿರಲಿಲ್ಲ. ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಲೇಸರ್ ಸುನ್ನತ್ ಬಗ್ಗೆ ನೋಡಿದ್ದ ತಬ್ರೇಜ್ ಖಾನ್, ಮಗನಿಗೆ ನೋವುರಹಿತ ಲೇಸರ್ ಚಿಕಿತ್ಸೆ ಮಾಡಿಸಬಹುದಲ್ಲ ಎಂದು ಯೋಚಿಸಿದ್ದರು. ಈ ಬಗ್ಗೆ ಬೆಂಗಳೂರಿನ ವೈದ್ಯ ಡಾ. ರಿಯಾಜ್ ಅವರನ್ನು ಸಂಪರ್ಕಿಸಿದ್ದರು. ಪೋಷಕರ ಮನವಿಯಂತೆ ಬಾಲಕನಿಗೆ ಲೇಜರ್ ಸುನ್ನತ್ ಮಾಡುತ್ತೇನೆಂದು ವೈದ್ಯ ಕೂಡ ನಂಬಿಸಿದ್ದ.

LIVE TV

ಹಣ ಪಡೆದು ಯಾಮಾರಿಸಿದ ಡಾಕ್ಟರ್, ಬಾಲಕನ ನರಳಾಟ

ಅದರಂತೆ ಶನಿವಾರ (ಅ.10) ಚಿಕ್ಕಮಗಳೂರಿಂದ ಬೆಂಗಳೂರಿಗೆ ಆಗಮಿಸಿದ್ದ ಪೋಷಕರು ಮಗುವಿನ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ. ಆಪರೇಷನ್​ಗೂ ಮುಂಚೆ ಪೋಷಕರಿಂದ 19 ಸಾವಿರ ರೂ. ಪಡೆದಿದ್ದರು. ಹಣ ಪಡೆದ ಮೇಲೂ ಹುಡುಗನಿಗೆ ಲೇಸರ್ ಸುನ್ನತ್ ಬದಲಿಗೆ ಸಾಮಾನ್ಯ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಇದರಿಂದಾಗಿ ಬಾಲಕ ತೀವ್ರ ನೋವಿನಿಂದ ನರಳಾಡುತ್ತಿದ್ದು, ದೈಹಿಕ ಹಾಗೂ ಮಾನಸಿಕ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದೆ. ಕೂಡಲೇ ಎಚ್ಚೆತ್ತ ತಂದೆ, ಗಾಯಾಳು ಬಾಲಕನಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಸಂಬಂಧ ಬಾಲಕನ ತಂದೆ ತಬ್ರೇಜ್ ಖಾನ್ ನೀಡಿದ ದೂರಿನ ಮೇರೆಗೆ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ