ಆಸ್ಪತ್ರೆಗಳಲ್ಲಿ ಉಂಟಾಗಲಿದೆಯಾ ಸ್ಟಾಫ್‌ಗಳ ಕೊರತೆ; ಹೊರ ಗುತ್ತಿಗೆ ಆಧಾರದಲ್ಲಿರುವ ವೈದ್ಯಕೀಯ ಸಿಬ್ಬಂದಿಗಳಿಂದ ನಾಳೆ ಪ್ರತಿಭಟನೆ

ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ವೈದ್ಯಕೀಯ ಸಿಬ್ಬಂದಿಗಳು ಬೆಂಗಳೂರು ಚಲೋಗೆ ಕರೆ ಕೊಟ್ಟಿದ್ದು, ನಾಳೆ (ಜುಲೈ 7) ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್​​ನಲ್ಲಿ ಬೃಹತ್ ಪ್ರತಿಭಟನೆ ಮಾಡಲಿದ್ದಾರೆ.

ಆಸ್ಪತ್ರೆಗಳಲ್ಲಿ ಉಂಟಾಗಲಿದೆಯಾ ಸ್ಟಾಫ್‌ಗಳ ಕೊರತೆ; ಹೊರ ಗುತ್ತಿಗೆ ಆಧಾರದಲ್ಲಿರುವ ವೈದ್ಯಕೀಯ ಸಿಬ್ಬಂದಿಗಳಿಂದ ನಾಳೆ ಪ್ರತಿಭಟನೆ
ಸಾಂಧರ್ಬಿಕ ಚಿತ್ರ
TV9kannada Web Team

| Edited By: Vivek Biradar

Jul 06, 2022 | 10:44 PM

ಬೆಂಗಳೂರು: ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ವೈದ್ಯಕೀಯ ಸಿಬ್ಬಂದಿಗಳು (Medical staff) ಬೆಂಗಳೂರು (Bengaluru) ಚಲೋಗೆ ಕರೆ ಕೊಟ್ಟಿದ್ದು, ನಾಳೆ (ಜುಲೈ 7) ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ (Freedom Park) ​​ನಲ್ಲಿ ಬೃಹತ್ ಪ್ರತಿಭಟನೆ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದಿಂದ ಪ್ರತಿಭಟನೆ ಗೆ ಕರೆ ನೀಡಿದ್ದು, ಸಂಘದ ಗೌರವಾಧ್ಯಕ್ಷ, ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ (Ayanur Manjunath) ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಇದನ್ನು ಓದಿ:ಕಾಡಾನೆ ದಾಳಿಯಿಂದ ಮೃತಪಟ್ಟವರ ಮನೆಗೆ ಕೇಂದ್ರ ಸಚಿವ ಕೃಷ್ಣಪಾಲ್ ಗುರ್ಜಾರ್  ಭೇಟಿ; ಕುಟುಂಬಕ್ಕೆ ಕೆಲಸದ ಭರವಸೆ

ನಾಳೆ (ಜುಲೈ 7) ರಿಂದ ಬೃಹತ್ ಪ್ರತಿಭಟನೆ ಆರಂಭವಾಗಲಿದ್ದು,ಅನಿರ್ದಿಷ್ಟವದಿ ಪ್ರತಿಭಟನೆ ಮಾಡಲು ನಿರ್ಧಾರಿಸಲಾಗಿದೆ. ಪ್ರತಿಭಟನೆಯಲ್ಲಿ ವೈದ್ಯರುಗಳು, ನರ್ಸ್, ಲ್ಯಾಬ್ ಟೆಕ್ನಿಷಿಯನ್ಸ್ ಹಾಗೂ ಸಿಬ್ಬಂದಿಗಳು ಭಾಗಿಯಾಗಲಿದ್ದಾರೆ.  ರಾಜ್ಯದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಮೂವತ್ತು ಸಾವಿರ ನೌಕರರು ಕೆಲಸ ಮಾಡುತ್ತಿದ್ದಾರೆ.

ಹೊರಗುತ್ತಿಗೆ ಸಿಬ್ಬಂದಿಗಳ ಬೇಡಿಕೆಗಳು

1. ನಿವೃತ್ತ IAS ಅಧಿಕಾರಿ ಶ್ರೀನಿವಾಸಾಚಾರಿಯವರ ಸಮಿತಿ ರಚಿಸಿದ ಶ್ರೇಯೋಭಿವೃದ್ಧಿ ವಿಚಾರ ವರದಿಯನ್ನು ಅನುಷ್ಠಾನಗೊಳಿಸಬೇಕು.

2. ಸಮಾನ ಕೆಲಸಕ್ಕೆ ಸಮಾನವೇತನ, ಸೇವಾಭದ್ರತೆ, ವಯೋಮಿತಿ ಸಡಿಲಿಕೆ ಹೆಚ್ಚಳ, ಕೃಪಾಂಕ ಹೆಚ್ಚಳ ಮಾಡಬೇಕು.

3. ವರ್ಗಾವಣೆ, ಹೊರಗುತ್ತಿಗೆ ನೌಕರರಿಗೆ ಸರ್ಕಾರದ ಸಂಸ್ಥೆಯಿಂದ ನಿರ್ವಹಣೆ ಮಾಡಬೇಕು ಎಂದು ಬೇಡಿಕೆ ಇಡಲಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada