ಇಂದು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್ ಸಿಗುವುದು ಡೌಟ್! ಕಾರಣವೇನು?

ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ವೈದ್ಯಕೀಯ ಸಿಬ್ಬಂದಿಗಳಿಂದ ಇಂದು ಬೆಂಗಳೂರು ಚಲೋ ನಡೆಯಲಿದೆ.

ಇಂದು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್ ಸಿಗುವುದು ಡೌಟ್! ಕಾರಣವೇನು?
ಸಾಂದರ್ಭಿಕ ಚಿತ್ರ
TV9kannada Web Team

| Edited By: sandhya thejappa

Jul 07, 2022 | 10:18 AM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ತಾಲೂಕು, ಜಿಲ್ಲಾ ಆಸ್ಪತ್ರೆಗಳಲ್ಲಿ ಇಂದು (ಜುಲೈ 7) ವೈದ್ಯರು (Doctors) ಹಾಗೂ ನರ್ಸ್ (Nurses) ಕೆಲಸಕ್ಕೆ ಹಾಜರಾಗುವುದು ಬಹುತೇಕ ಅನುಮಾನ ಇದೆ. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ವೈದ್ಯಕೀಯ ಸಿಬ್ಬಂದಿಗಳಿಂದ ಇಂದು ಬೆಂಗಳೂರು ಚಲೋ ನಡೆಯಲಿದೆ. ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದು, ಬೆಳಿಗ್ಗೆ 11 ಗಂಟೆ ಹೊತ್ತಿಗೆ ಫ್ರೀಡಂ ಪಾರ್ಕ್​ನಲ್ಲಿ ಧರಣಿ ಆರಂಭವಾಗಲಿದೆ.

ಸಂಘದ ಗೌರವಾಧ್ಯಕ್ಷ, ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ. ವೈದ್ಯರುಗಳು, ನರ್ಸ್, ಲ್ಯಾಬ್ ಟೆಕ್ನಿಷಿಯನ್ಸ್ ಹಾಗೂ ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

ರಾಜ್ಯದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಮೂವತ್ತು ಸಾವಿರ ನೌಕರರು ಕೆಲಸ ಮಾಡುತ್ತಿದ್ದಾರೆ. ನಿವೃತ್ತ ಐಎಎಸ್​ ಅಧಿಕಾರಿ ಶ್ರೀನಿವಾಸಾಚಾರಿಯವರ ಸಮಿತಿ ರಚಿಸಿ ವರದಿ ಸಲ್ಲಿಸಿ ವರ್ಷಗಳು ಕಳೆದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ಪ್ರತಿಭಟನೆಗೆ ನಿರ್ಧರಿಸಿದೆ.

ಇದನ್ನೂ ಓದಿ: Diabetes: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವುದು ಹೇಗೆ? ಇಲ್ಲಿವೆ ಟಿಪ್ಸ್

ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ, ವಯೋಮಿತಿ ಸಡಿಲಿಕೆ ಹೆಚ್ಚಳ, ಕೃಪಾಂಕ ಹೆಚ್ಚಳ, ವರ್ಗಾವಣೆ, ಹೊರಗುತ್ತಿಗೆ ನೌಕರರಿಗೆ ಸರ್ಕಾರದ ಸಂಸ್ಥೆಯಿಂದ ನಿರ್ವಹಣೆ ಮಾಡಬೇಕು ಎಂದು ಆಗ್ರಹಿಸಿ ವೈದ್ಯರು, ನರ್ಸ್​ ಸಿಬ್ಬಂದಿ ಧರಣಿ ಮಾಡಲಿದ್ದಾರೆ.

ಇದನ್ನೂ ಓದಿ

ಇದನ್ನೂ ಓದಿ: Happy Birthday Devdutt Padikkal: ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಇಂದು ಹುಟ್ಟುಹಬ್ಬದ ಸಂಭ್ರಮ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada