1-8ನೇ ತರಗತಿ ಆರಂಭ ಬಗ್ಗೆ ಆ.30ಕ್ಕೆ ನಿರ್ಧಾರ ಸಾಧ್ಯತೆ; ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ

1ರಿಂದ 8ನೇ ತರಗತಿ ಆರಂಭದ ಕುರಿತು ನಾಳೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಸಭೆ ನಡೆಯುತ್ತದೆ. ಸಿಎಂ ಜೊತೆ ಚರ್ಚೆ ನಡೆಸಲಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂದು ನಾಳೆ (ಆಗಸ್ಟ್ 30) ತಿಳಿಯಲಿದೆ.

1-8ನೇ ತರಗತಿ ಆರಂಭ ಬಗ್ಗೆ ಆ.30ಕ್ಕೆ ನಿರ್ಧಾರ ಸಾಧ್ಯತೆ; ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on: Aug 29, 2021 | 9:14 AM

ಬೆಂಗಳೂರು: ಈಗಾಗಲೇ 9, 10 ಮತ್ತು 11ನೇ ತರಗತಿ ಮಕ್ಕಳಿಗೆ ಶಾಲೆ ಮತ್ತು ಕಾಲೇಜಿಗೆ ಹೋಗುವ ಅವಕಾಶ ಸಿಕ್ಕಿದೆ. ಕೊರೊನಾ (Coronavirus) ಮೂರನೇ ಅಲೆ ನಡುವೆ ಆಗಸ್ಟ್ 23ರಿಂದ ಮಕ್ಕಳಿಗೆ ಆಫ್​ಲೈನ್​ ತರಗತಿಗೆ ಹಾಜರಾಗಲು ಸರ್ಕಾರ ಅನುಮತಿ ನೀಡಿದೆ. ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡು 9ರಿಂದ 11ನೇ ತರಗತಿವರೆಗೆ ಆಫ್​ಲೈನ್ ಶಿಕ್ಷಣ ನೀಡಲಾಗುತ್ತಿದೆ. ಅದರಂತೆ ಪ್ರಾಥಮಿಕ ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತಿಸುತ್ತಿದ್ದು, ಈ ಬಗ್ಗೆ ನಾಳೆ ಮಹತ್ವದ ಸಭೆ ನಡೆಯಲಿದೆ. ಸದ್ಯ ಕೊರೊನಾ ಸೋಂಕು ನಿಯಂತ್ರಣದಲ್ಲಿರುವ ಕಾರಣ ಪ್ರಾಥಮಿಕ ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ.

1ರಿಂದ 8ನೇ ತರಗತಿ ಆರಂಭದ ಕುರಿತು ನಾಳೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಸಭೆ ನಡೆಯುತ್ತದೆ. ಸಿಎಂ ಜೊತೆ ಚರ್ಚೆ ನಡೆಸಲಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂದು ನಾಳೆ (ಆಗಸ್ಟ್ 30) ತಿಳಿಯಲಿದೆ. ಶೇ.2 ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಚಿಂತನೆ ನಡೆಸುತ್ತಿದ್ದು, ಸರ್ಕಾರ ತಾಂತ್ರಿಕ ಸಲಹಾ ತಜ್ಞರ ಸಲಹೆಯನ್ನು ಪಡೆಯಲಿದೆ. ತಜ್ಞರು 1ರಿಂದ 8ನೇ ತರಗತಿ ವರೆಗೆ ಶಾಲೆಗಳನ್ನು ತೆರೆಯಲು ಗ್ರೀನ್ ಸಿಗ್ನಲ್ ನೀಡಿದರೆ ಸೆಪ್ಟಂಬರ್ ಮೊದಲ ವಾರದಲ್ಲಿಯೇ ಶಾಲೆ ಪುನಾರಂಭವಾಗುವ ಸಾಧ್ಯತೆ ಹೆಚ್ಚಿದೆ.

ಈ ಬಗ್ಗೆ ಆಗಸ್ಟ್ 26ರಂದು ಮಾತನಾಡಿದ್ದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, 1 ರಿಂದ 8ನೇ ತರಗತಿಯವರೆಗೆ ಶಾಲೆಗಳು ಆರಂಭಿಸುವ ಕುರಿತು ಆಗಸ್ಟ್ 30ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಕರೆದಿದ್ದು, ಅದೇ ದಿನ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ಶಾಲೆ ಆರಂಭಕ್ಕೆ ಪೋಷಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ತಾಂತ್ರಿಕ ಸಮಿತಿಯಲ್ಲಿರುವ ಡಾ.ದೇವಿ ಪ್ರಸಾದ್ ಶೆಟ್ಟಿಯವರು 6 ರಿಂದ 8ನೇ ತರಗತಿ ಆರಂಭ ಮಾಡಬಹುದು ಎಂದಿದ್ದಾರೆ ಎಂದು ಹೇಳಿದ್ದರು.

ಇದನ್ನೂ ಓದಿ

ಮಕ್ಕಳಿಗಾಗಿ ನೀತಿಕತೆ: ಪ್ರೀತಿ ಮತ್ತೆ ದಯೆಯಿಂದ ಏನನ್ನು ಬೇಕಾದರೂ ಗೆಲ್ಲಬಹುದು

ಆಗಸ್ಟ್ 30ರಂದು 1ರಿಂದ 8 ನೇ ತರಗತಿವರೆಗಿನ ಶಾಲೆ ಆರಂಭದ ಕುರಿತು ಅಂತಿಮ ತೀರ್ಮಾನ: ಶಿಕ್ಷಣ ಸಚಿವ ಬಿ ಸಿ ನಾಗೇಶ್

(meeting will be held tomorrow under the leadership of Basavaraja Bommai to start class 1to 8 in Karnataka)

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ