AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸಭೆ ಫಲಪ್ರದ: ಮುಷ್ಕರ ವಾಪಸ್​​ ಪಡೆದ 108 ಆ್ಯಂಬುಲೆನ್ಸ್ ನೌಕರರ ಸಂಘ

108 ಆ್ಯಂಬುಲೆನ್ಸ್ ನೌಕರರ ಸಂಘವು ತನ್ನ ಮುಷ್ಕರವನ್ನು ಅಧಿಕೃತವಾಗಿ ವಾಪಸ್ ಪಡೆದಿದೆ. ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಜೊತೆಗಿನ ಸಭೆ ಯಶಸ್ವಿಯಾಗಿದ್ದು, ನೌಕರರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ಭರವಸೆ ಸಿಕ್ಕಿದೆ. ಸರ್ಕಾರ ಬೇಕಿದ್ದರೆ ಜಿವಿಕೆ ಸಂಸ್ಥೆ ಜೊತೆಗಿನ ಒಪ್ಪಂದ ರದ್ದು ಮಾಡಿಕೊಳ್ಳಲಿ. ಹೊಸ ಟೆಂಡರ್ ಆಗುವ ತನಕ ಸಂಬಳ ಇಲ್ಲದೆ ನಾವು ಕೆಲಸ ಮಾಡೋಕೆ ಸಿದ್ಧರಿದ್ದೇವೆ ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ ನೌಕರರ ಸಂಘ ತಿಳಿಸಿದೆ.

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸಭೆ ಫಲಪ್ರದ: ಮುಷ್ಕರ ವಾಪಸ್​​ ಪಡೆದ 108 ಆ್ಯಂಬುಲೆನ್ಸ್ ನೌಕರರ ಸಂಘ
108 ಆ್ಯಂಬುಲೆನ್ಸ್ (ಫೈಲ್​​ ಚಿತ್ರ)
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Oct 14, 2026 | 3:38 PM

Share

ಬೆಂಗಳೂರು, ಅಕ್ಟೋಬರ್​​ 14: ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆಗಿನ ಸಭೆ ಫಲಪ್ರದವಾಗಿರುವ ಹಿನ್ನೆಲೆ 108 ಆ್ಯಂಬುಲೆನ್ಸ್ ನೌಕರರ ಸಂಘ ಮುಷ್ಕರ ವಾಪಸ್ ಪಡೆದಿದೆ. ಆರೋಗ್ಯ ಸಚಿವರ ಖಾದರ್​ ಜೊತೆ ಸಮಾಲೋಚನೆ ನಡೆಸಿ ಹಂತ ಹಂತವಾಗಿ ನೌಕರರ ಬಹುತೇಕ ಬೇಡಿಕೆ ಈಡೇರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿರುವ ಹಿನ್ನೆಲೆ ಮುಷ್ಕರ ಹಿಂಪಡೆಯಲು ಸುವರ್ಣ ಕರ್ನಾಟಕ ಆರೋಗ್ಯ ಕವಚ(108) ನೌಕರರ ಸಂಘ ನಿರ್ಧರಿಸಿದೆ. ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತ್ವಿಕ್​​ ಪಾಂಡೆ ನೇತೃತ್ವದಲ್ಲಿ ವಿಕಾಸಸೌಧದಲ್ಲಿ 108 ಆ್ಯಂಬುಲೆನ್ಸ್ ನೌಕರರ ಸಂಘದ ಜೊತೆ ಸಭೆ ನಡೆಸಲಾಗಿತ್ತು.

‘ಸರ್ಕಾರ ಬೇಕಿದ್ದರೆ ಜಿವಿಕೆ ಸಂಸ್ಥೆ ಜೊತೆಗಿನ ಒಪ್ಪಂದ ರದ್ದು ಮಾಡಿಕೊಳ್ಳಲಿ’

ಈ ಹಿಂದೆ ಕೂಡ ಅಧಿಕಾರಿಗಳ ಜೊತೆಗೆ ಹಲವು ಸಭೆಗಳು ಆಗಿದ್ದವು. ಇಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆಗೆ ಉನ್ನತ ಮಟ್ಟದ ಸಭೆ ಆಗಿದೆ. ಸಭೆಯಲ್ಲಿ ಮುಷ್ಕರ ಮಾಡಬೇಡಿ, ನಿಮ್ಮ ಬೇಡಿಕೆ ಈಡೇರಿಸುತ್ತೇವೆ ಅಂತ ಭರವಸೆ ನೀಡಿದ್ದಾರೆ. ಸದ್ಯ ಸಚಿವರು ಬೆಂಗಳೂರಿನಲ್ಲಿ ಇಲ್ಲ, ಬಂದ ನಂತರ ಅವರ ಜೊತೆ ಸಮಾಲೋಚಿಸಿ ಸರಿ ಮಾಡುತ್ತೇವೆ ಎಂದಿದ್ದಾರೆ. ಸಾರ್ವಜನಿಕರ ಸೇವೆ ಮಾಡಿ, ಪ್ರತಿಭಟನೆ ಮುಷ್ಕರ ಬೇಡ ಅಂತ ಹೇಳಿದ್ದಾರೆ. ಹೀಗಾಗಿ ನಾವು ಮುಷ್ಕರ ವಾಪಸ್ ಪಡೆಯುತ್ತಿದ್ದೇವೆ. ಸರ್ಕಾರ ಬೇಕಿದ್ದರೆ ಜಿವಿಕೆ ಸಂಸ್ಥೆ ಜೊತೆಗಿನ ಒಪ್ಪಂದ ರದ್ದು ಮಾಡಿಕೊಳ್ಳಲಿ. ಹೊಸ ಟೆಂಡರ್ ಆಗುವ ತನಕ ಸಂಬಳ ಇಲ್ಲದೆ ನಾವು ಕೆಲಸ ಮಾಡೋಕೆ ಸಿದ್ಧರಿದ್ದೇವೆ ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ ನೌಕರರ ಸಂಘದ ಉಪಾಧ್ಯಕ್ಷ ಪರಮಶಿವ ಅವರು ತಿಳಿಸಿದ್ದಾರೆ.

LIVE TV

ಇದನ್ನೂ ಓದಿ: ರಾಜ್ಯದಲ್ಲಿ ನಾಳೆಯಿಂದ 108 ಆಂಬುಲೆನ್ಸ್ ಸೇವೆ ಬಂದ್ ಭೀತಿ: “ಆಂಬುಲೆನ್ಸ್ ಮೇಲೆ ಅವಲಂಬಿತರಾಗಬೇಡಿ” ಎಂದ ಸಚಿವ ಯು.ಟಿ. ಖಾದರ್

108 ಆ್ಯಂಬುಲೆನ್ಸ್ ನೌಕರರ ಬೇಡಿಕೆಗಳು ಏನಾಗಿತ್ತು?

ಪ್ರತಿ ವರ್ಷ 108 ಆ್ಯಂಬುಲೆನ್ಸ್ ನೌಕರರ ವೇತನ ಪರಿಷ್ಕರಣೆ ಮಾಡಬೇಕು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು. 3 ಪಾಳಿಯಲ್ಲಿ ಆ್ಯಂಬುಲೆನ್ಸ್​ ವಾಹನದ ಸೌಕರ್ಯ ಮಾಡಬೇಕು. ⁠ವಲಯವಾರು ವಿಂಗಡಣೆ ಮಾಡಿ ನಿಗದಿ ಮಾಡಿರೋ ವೇತನ ರದ್ದು ಪಡಿಸಿ ಏಕರೂಪ ವಲಯವಾಗಿ ಬದಲಾವಣೆ ಸೇರಿದಂತೆ ಇನ್ನಿತರ ಕೆಲ ಬೇಡಿಕೆಗಳನ್ನು 108 ಆ್ಯಂಬುಲೆನ್ಸ್ ನೌಕರರು ಪ್ರಸ್ತಾಪಿಸಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More