AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಬೇಟೆ: 11.86 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿಯ ಬಂಧನ

ಬೆಂಗಳೂರು ಪೊಲೀಸರು ನಗರದ 6 ವಿವಿಧ ಠಾಣೆಗಳಲ್ಲಿ ಕಾರ್ಯಾಚರಣೆ ನಡೆಸಿ 11.86 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ, ಕೊಕೇನ್ ಮತ್ತು ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಇಬ್ಬರು ವಿದೇಶಿ ಮಹಿಳೆಯರು, ಹೊರ ರಾಜ್ಯದವರು ಸೇರಿ 10 ಮಂದಿ ಡ್ರಗ್ಸ್ ಪೆಡ್ಲರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಬೇಟೆ: 11.86 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿಯ ಬಂಧನ
ಸಾಂದರ್ಭಿಕ ಚಿತ್ರImage Credit source: tv9
ಗಣಪತಿ ಶರ್ಮಾ
|

Updated on: Apr 16, 2026 | 12:51 PM

Share

ಬೆಂಗಳೂರು, ಏಪ್ರಿಲ್ 16: ಮಾದಕ ವಸ್ತು ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿರುವ ಬೆಂಗಳೂರು (Bangalore) ಪೊಲೀಸರು, ನಗರದ ವಿವಿಧೆಡೆ ದಾಳಿ ನಡೆಸಿ ಬರೋಬ್ಬರಿ 11.86 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಜಾಲದಲ್ಲಿ ಶಾಮೀಲಾಗಿದ್ದ ಇಬ್ಬರು ವಿದೇಶಿ ಮಹಿಳೆಯರು ಹಾಗೂ ಹೊರರಾಜ್ಯದ ಐವರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಯಲಹಂಕ, ಡಿ.ಜೆ.ಹಳ್ಳಿ, ಬಾಣಸವಾಡಿ, ಕೋರಮಂಗಲ, ಬೊಮ್ಮನಹಳ್ಳಿ ಹಾಗೂ ಪುಲಿಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಬಂಧಿತರಿಂದ ಭಾರಿ ಪ್ರಮಾಣದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರಲ್ಲಿ 5.9 ಕೆಜಿ ಎಂಡಿಎಂಎ (MDMA), 1.15 ಕೆಜಿ ಕೊಕೇನ್, 21 ಕೆಜಿ ಗಾಂಜಾ ಮತ್ತು 19 ಗ್ರಾಂ ಎಕ್ಸ್‌ಟೆಸಿ ಮಾತ್ರೆಗಳು ಸೇರಿವೆ. ಜೊತೆಗೆ ಕೃತ್ಯಕ್ಕೆ ಬಳಸುತ್ತಿದ್ದ ಒಂದು ದ್ವಿಚಕ್ರ ವಾಹನವನ್ನು ಸೀಜ್ ಮಾಡಲಾಗಿದೆ. ಈ ಪೈಕಿ ವಿದೇಶಿ ಮಹಿಳೆಯರು ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿ ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ.

ಬೆಂಗಳೂರಿನಲ್ಲಿ ಇತ್ತೀಚಿನ ಪ್ರಮುಖ ಡ್ರಗ್ಸ್ ಜಪ್ತಿ ಪ್ರಕರಣಗಳು

  • ಮಾರ್ಚ್ 12, 2026: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 4 ಕೋಟಿ ಮೌಲ್ಯದ ಹೆರಾಯಿನ್ ಸಾಗಿಸುತ್ತಿದ್ದ ವಿದೇಶಿ ಪ್ರಜೆಯ ಬಂಧನ.
  • ಮಾರ್ಚ್ 28, 2026: ಎಲೆಕ್ಟ್ರಾನಿಕ್ ಸಿಟಿಯ ನೈಜೀರಿಯನ್ ಪ್ರಜೆಯಿಂದ 2.5 ಕೋಟಿ ರೂ. ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ವಶ.
  • ಏಪ್ರಿಲ್ 05, 2026: ಸಿಸಿಬಿ ಪೊಲೀಸರಿಂದ ದೊಡ್ಡಬಳ್ಳಾಪುರ ರಸ್ತೆಯಲ್ಲಿ ಅಂತರಾಷ್ಟ್ರೀಯ ಡ್ರಗ್ಸ್ ಜಾಲ ಭೇದಿಸಿ 5 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ.
  • ಏಪ್ರಿಲ್ 16, 2026: ನಗರದ 6 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 11.86 ಕೋಟಿ ರೂ. ಮೌಲ್ಯದ ಡ್ರಗ್ಸ್ ಮತ್ತು 10 ಆರೋಪಿಗಳ ಬಂಧನ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು