ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ರಾಜಕೀಯ ಪ್ರೇರಿತ ಪಾದಯಾತ್ರೆ: ಸಿಎಂ ಬಸವರಾಜ ಬೊಮ್ಮಾಯಿ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ರಾಜಕೀಯ ಪಾದಯಾತ್ರೆ ಕೈಗೊಂಡಿದ್ದಾರೆ. ತಮ್ಮ ಅವಧಿಯಲ್ಲಿ ಈ ಬಗ್ಗೆ ಯಾವುದೇ ಕೆಲಸ ಮಾಡಿಲ್ಲವೆನ್ನುವ ಅಪರಾಧ ಕಾಂಗ್ರೆಸ್​ನವರನ್ನು ಕಾಡುತ್ತಿದೆ. ಆದರೆ ಜನರನ್ನು ಪದೇ ಪದೇ ಮರುಳು ಮಾಡಲು ಆಗುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ರಾಜಕೀಯ ಪ್ರೇರಿತ ಪಾದಯಾತ್ರೆ: ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: preethi shettigar

Updated on:Jan 09, 2022 | 2:51 PM

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ವರ್ಷದ ಅವಧಿಯಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಅನ್ನು ಸಮರ್ಪಕವಾಗಿ ಸಲ್ಲಿಸಲಿಲ್ಲ. ಕಾಂಗ್ರೆಸ್ (Congress) ಪಕ್ಷಕ್ಕೆ ಯಾವುದೇ ಬದ್ಧತೆ ಇಲ್ಲ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡಿಕಿಶಿಯವರು ನೀರಾವರಿ ಸಚಿವರಾಗಿದ್ದರು, ಆಗಲೂ ಈ ಯೋಜನೆಗೆ ಬಗ್ಗೆ ಕ್ರಮ ವಹಿಸಲಿಲ್ಲ. ಕಳೆದ ಮೂರು ವರ್ಷಗಳಿಂದಲೂ ಇದರ ಬಗ್ಗೆ ಚಕಾರವೆತ್ತಿರಲಿಲ್ಲ.  ಈಗ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ರಾಜಕೀಯ ಪಾದಯಾತ್ರೆ ಕೈಗೊಂಡಿದ್ದಾರೆ. ತಮ್ಮ ಅವಧಿಯಲ್ಲಿ ಈ ಬಗ್ಗೆ ಯಾವುದೇ ಕೆಲಸ ಮಾಡಿಲ್ಲವೆನ್ನುವ ಅಪರಾಧ ಕಾಂಗ್ರೆಸ್​ನವರನ್ನು ಕಾಡುತ್ತಿದೆ. ಆದರೆ ಜನರನ್ನು ಪದೇ ಪದೇ ಮರುಳು ಮಾಡಲು ಆಗುವುದಿಲ್ಲ ಎಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷ ಯಾವುದೇ ನೀರಾವರಿ ಯೋಜನೆಗಳ ಬಗ್ಗೆ ಬದ್ಧತೆಯಿಂದ ಕೆಲಸ ಮಾಡಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಪ್ರತಿವರ್ಷ 10,000 ಕೋಟಿ ಅನುದಾನ ನೀಡುವುದಾಗಿ ಕೃಷ್ಣೆ ಪಾದಯಾತ್ರೆ ಕೈಗೊಂಡು ಪ್ರಮಾಣ ಮಾಡಿದರು. ಆದರೆ ಐದು ವರ್ಷದ ಅವಧಿಯಲ್ಲಿ ಒಟ್ಟು 7000 ಕೋಟಿ ರೂ.ಗಳಷ್ಟೂ ಬಿಡುಗಡೆ ಮಾಡಲಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರ ಮೇಕೆದಾಟು ಯೋಜನೆಯ ಬಗ್ಗೆ ಬದ್ಧತೆಯನ್ನ ಪ್ರದರ್ಶಿಸಿದ್ದು, ಮುಖ್ಯಮಂತ್ರಿಯಾದ ನಂತರ ಡಿಪಿಆರ್ ಅನುಮೋದನೆಗೆ ಸಿಡಬ್ಲ್ಯೂಸಿನಿಂದ ಕಾವೇರಿ ಮಾನಿಟರ್ ಬೋರ್ಡ್​ಗೆ ಈಗಾಗಲೇ ಕಳುಹಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಸಭೆಯನ್ನು ಈ ತಿಂಗಳಲ್ಲಿ ನಡೆಸಲಾಗುತ್ತಿದ್ದು, ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲಿದ್ದಾರೆ. ಉಚ್ಛನ್ಯಾಯಾಲಯದಲ್ಲಿ ಈ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗುತ್ತಿರುವುದು ಸರ್ಕಾರದ ಗಮನದಲ್ಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಿಂದೆ ಕೇವಲ ರೈತ ಸಂಘಟನೆಯವರು ಯೋಜನೆ ಸ್ಥಳಕ್ಕೆ ಭೇಟಿ ಕೊಟ್ಟಿದ್ದರ ಹಿನ್ನೆಲೆಯಲ್ಲಿ ಎನ್​ಜಿಟಿಯವರು ಇಡೀ ಮೇಕೆದಾಟು ಯೋಜನೆಗೆ ಸ್ಟೇ ವಿಧಿಸಿದ್ದರು. ಪ್ರಸ್ತುತ ಕಾಂಗ್ರೆಸ್​ನವರು ದೊಡ್ಡ ಪ್ರಮಾಣದ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ. ಇದರ ಪರಿಣಾಮಗಳ ಬಗ್ಗೆ ಕಾಂಗ್ರೆಸ್​ನವರಿಗೆ ಅರಿವಿದೆ. ಆದರೂ ರಾಜಕಾರಣ ಮಾಡುವುದೇ ಅವರ ಪ್ರಮುಖ ಉದ್ದೇಶವಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಮೇಕೆದಾಟು ಯೋಜನೆಯಲ್ಲಿ ಅಂತರರಾಜ್ಯ ಜಲ ವಿವಾದದಲ್ಲಿನ ಕಾನೂನಾತ್ಮಕ ವಿಷಯಗಳು, ಕಾವೇರಿ ಟ್ರಿಬ್ಯುನಲ್ ತೀರ್ಪು, ನ್ಯಾಯಾಲಯದ ಆದೇಶಗಳನ್ನು ಗಮನಿಸಿದ್ದರೆ ಕಾಂಗ್ರೆಸ್​ನವರು ಈ ಪಾದಯಾತ್ರೆ ಕೈಗೊಳ್ಳುತ್ತಿರಲಿಲ್ಲ. ಆದರೆ ಕಾಂಗ್ರೆಸ್​ನವರಿಗೆ ಬೇಕಿರುವುದು ರಾಜಕೀಯ. ಈ ಬಗ್ಗೆ ಜನತೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಸಿಎಂ ಬಸವರಾಜ್​ ಬೊಮ್ಮಾಯಿ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ನಾಲ್ಕು ವರ್ಷ ತೆಗೆದುಕೊಂಡರೂ ಮೇಕೆದಾಟು ಯೋಜನೆಯ ಡಿಪಿಆರ್ ಮಾಡಲಾಗಲಿಲ್ಲ. ಬೆಟ್ಟ ಅಗೆದು ಇಲಿ ಹೊರತೆಗೆದಂತೆ, ಯೋಜನೆಯ ಫೀಸಬಲಿಟಿ ವರದಿ ಮಾತ್ರ ಸಿದ್ಧಪಡಿಸಿದ್ದಾರೆ ಎಂದು ಸಿಎಂ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.

ಕೋವಿಡ್ ನಿಯಮ ಉಲ್ಲಂಘಿಸಿ ಪಾದಯಾತ್ರೆ ಕೈಗೊಳ್ಳುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ನೋಟೀಸ್ ನೀಡಲಾಗಿದೆ. ಈ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕಾಂಗ್ರೆಸ್​ ಪಾದಯಾತ್ರೆ: ಸಿಎಂ ಬೊಮ್ಮಾಯಿ ಬೆಂಗಳೂರಿಗೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಲ್ಲಿ ಕೊರೊನಾ ಹೆಚ್ಚಿದೆ ಹೀಗಾಗಿ ಜನ ಪ್ರಶ್ನಿಸುತ್ತಿದ್ದಾರೆ. ನಗರ ಪ್ರವೇಶಕ್ಕೆ ಪಾದಯಾತ್ರೆಗೆ ಅವಕಾಶ ನೀಡಿದರೆ ಕಷ್ಟ. ನೈಜ ವಿಚಾರ ಜನರ ಮುಂದೆ ತನ್ನಿ. ಜನರಲ್ಲಿ ಕಾಂಗ್ರೆಸ್ ಪಾದಯಾತ್ರೆಯ ಪರಿಣಾಮವನ್ನ ತಿಳಿಸಿ. ಕೊರೊನಾ ಹೆಚ್ಚುತ್ತಿರುವ ಬಗ್ಗೆ ಹೆಚ್ಚು ತಿಳಿಸುವಂತೆ ಸಚಿವರಿಗೆ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19ರಂದು ತಮಿಳುನಾಡು ಗಡಿ ಬಂದ್: ವಾಟಾಳ್ ನಾಗರಾಜ್

Mekedatu Padayatra: ಪಾದಯಾತ್ರೆಗೆ ಬರುವ ಯಾರನ್ನು ನೀವು ತಡೆಯುವುದಕ್ಕೆ ಆಗಲ್ಲ: ಡಿಕೆ ಶಿವಕುಮಾರ್

Published On - 2:26 pm, Sun, 9 January 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ