AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mekedatu Padayatra: ಸಮಾರೋಪ ಸಮಾರಂಭಕ್ಕೆ ಬೆಂಗಳೂರಿನಲ್ಲಿ ಅನುಮತಿ ವಿಚಾರ; ಹಾಲಿ ಕೊವಿಡ್ ರೂಲ್ಸ್ ಪಾಲಿಸಿ ಅನುಮತಿ ರದ್ದು?

ಮುಖ್ಯ ಆಯುಕ್ತರ ನಿರ್ದೇಶನದ ಮೇರೆಗೆ, ದಕ್ಷಿಣ ವಲಯ ಜಂಟಿ ಆಯುಕ್ತರ ಸೂಚನೆ ಮೇರೆಗೆ ಅನುಮತಿ ನೀಡಲಾಗಿತ್ತು. ಆದರೆ ಹಾಲಿ ಕೊರೊನಾ ರೂಲ್ಸ್ ಜಾರಿಗೆ ಬಂದ ಕಾರಣ, ಅನುಮತಿ ರದ್ದುಪಡಿಸಲು ಬಿಬಿಎಂಪಿ ಮುಂದಾಗಿದೆ ಎಂದೂ ಮಾಹಿತಿ ಕೇಳಿಬಂದಿದೆ.

Mekedatu Padayatra: ಸಮಾರೋಪ ಸಮಾರಂಭಕ್ಕೆ ಬೆಂಗಳೂರಿನಲ್ಲಿ ಅನುಮತಿ ವಿಚಾರ; ಹಾಲಿ ಕೊವಿಡ್ ರೂಲ್ಸ್ ಪಾಲಿಸಿ ಅನುಮತಿ ರದ್ದು?
ಕಾಂಗ್ರೆಸ್ ಆಯೋಜಿಸಿರುವ ಮೇಕೆದಾಟು ಪಾದಯಾತ್ರೆ
TV9 Web
| Edited By: |

Updated on:Jan 12, 2022 | 4:55 PM

Share

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದ್ದು ಬೆಂಗಳೂರಿನಲ್ಲಿ ಪಾದಯಾತ್ರೆ ಸಮಾರೋಪ ಸಮಾರಂಭಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅನುಮತಿ ನೀಡಿದೆ. ಪಾಲಿಕೆ ಆಟದ ಮೈದಾನದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ಬಗ್ಗೆ ಪತ್ರ ಬರೆಯಲಾಗಿದೆ. ಬಿಬಿಎಂಪಿ ಸಮಾರಂಭಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ. ಕೊವಿಡ್-19​ ನಿಯಮಗಳನ್ನು ಉಲ್ಲಂಘಿಸದಂತೆ ಸೂಚನೆ ಕೊಡಲಾಗಿದೆ.

ಈ ಸಂಬಂಧ ಬಿಬಿಎಂಪಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್​​ಗೆ ಪತ್ರ ಬರೆದಿದ್ದಾರೆ. ಬಸವನಗುಡಿ ನ್ಯಾಷನಲ್ ಕಾಲೇಜು ಪಕ್ಕದಲ್ಲಿರುವ ಮೈದಾನದಲ್ಲಿ ಜನವರಿ 18 ಹಾಗೂ 19 ಎರಡು ದಿನ ಕಾರ್ಯಕ್ರಮಕ್ಕೆ BBMP ಅನುಮತಿ ನೀಡಿದೆ. ದಕ್ಷಿಣ ವಲಯ ಜಂಟಿ ಆಯುಕ್ತರ ಸೂಚನೆ ಮೇರೆಗೆ ಒಪ್ಪಿಗೆ ನೀಡಲಾಗಿದೆ.

ಈ ನಡುವೆ ಬಿಬಿಎಂಪಿಯಿಂದ ಅನುಮತಿ ವಿಚಾರವಾಗಿ ಮತ್ತೊಂದು ಮಾತು ಕೇಳಿಬಂದಿದೆ. ಕಾಂಗ್ರೆಸ್, ಕೊರೊನಾ ರೂಲ್ಸ್ ಜಾರಿಗೆ ಬರುವ ಮುನ್ನ ಅನುಮತಿ ಪಡೆದಿತ್ತು. ಜನವರಿ 18- 19 ರಂದು ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಮಾವೇಶ ನಡೆಸಲು ಅನುಮತಿ ಪಡೆದಿತ್ತು. ಮುಖ್ಯ ಆಯುಕ್ತರ ನಿರ್ದೇಶನದ ಮೇರೆಗೆ, ದಕ್ಷಿಣ ವಲಯ ಜಂಟಿ ಆಯುಕ್ತರ ಸೂಚನೆ ಮೇರೆಗೆ ಅನುಮತಿ ನೀಡಲಾಗಿತ್ತು. ಆದರೆ ಹಾಲಿ ಕೊರೊನಾ ರೂಲ್ಸ್ ಜಾರಿಗೆ ಬಂದ ಕಾರಣ, ಅನುಮತಿ ರದ್ದುಪಡಿಸಲು ಬಿಬಿಎಂಪಿ ಮುಂದಾಗಿದೆ ಎಂದೂ ಮಾಹಿತಿ ಕೇಳಿಬಂದಿದೆ.

ಹೈಕೋರ್ಟ್‌ ಆದೇಶ ನೀಡಿದ್ರೆ ಪಾದಯಾತ್ರೆ ನಿಲ್ಲಿಸುತ್ತೇವೆ: ಸಿದ್ದರಾಮಯ್ಯ ಹೇಳಿಕೆ

ಪಾದಯಾತ್ರೆ ನಿಲ್ಲಿಸಲು ಹೈಕೋರ್ಟ್‌ ಸೂಚಿಸಿದ್ರೆ ಪಾಲಿಸ್ತೇವೆ. ಹೈಕೋರ್ಟ್‌ ಆದೇಶದ ವಿರುದ್ಧವಾಗಿ ನಾವು ನಡೆದುಕೊಳ್ಳಲ್ಲ. ಹೈಕೋರ್ಟ್‌ ಆದೇಶ ನೀಡಿದ್ರೆ ಪಾದಯಾತ್ರೆ (Mekedatu Padayatre) ನಿಲ್ಲಿಸುತ್ತೇವೆ ಎಂದು ಟಿವಿ9ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ  (Siddaramaiah) ಬುಧವಾರ ಹೇಳಿಕೆ ನೀಡಿದ್ದಾರೆ. ನೆಲದ ಕಾನೂನು ಬಗ್ಗೆ ನಮಗೆ ಗೌರವವಿದೆ. ನೆಲದ ಕಾನೂನು ಬಗ್ಗೆ ಬಿಜೆಪಿಯವರಿಗೇ ನಂಬಿಕೆ ಇಲ್ಲ. ಬಿಜೆಪಿ ಶಾಸಕರೇ ಕೊವಿಡ್ (Covid19) ನಿಯಮ ಉಲ್ಲಂಘಿಸಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ನಿಯಮ ಪಾಲಿಸುವ ವಿಚಾರದಲ್ಲಿ ಸರ್ಕಾರ ದ್ವಂದ್ವ ನೀತಿ ವಹಿಸಿದೆ. ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಏಕೆ ಪ್ರಕರಣ ದಾಖಲಿಸಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ ಕ್ಷೇತ್ರದಲ್ಲೇ ಜಾತ್ರೆ ನಡೆಸಲಾಗಿದೆ. ಬಿಜೆಪಿಯವರೇ ನಿಯಮ ಸರಿಯಾಗಿ ಪಾಲಿಸುತ್ತಿಲ್ಲ. ಕೊವಿಡ್ ಹೆಚ್ಚಾಗಲು ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಸರ್ಕಾರ ಕಾರಣ. ಸೋಂಕು ಹೆಚ್ಚಿರುವ ರಾಜ್ಯಗಳಲ್ಲಿ ಪ್ರಧಾನಿ ರಾಲಿ ನಡೆಸಿದ್ರು ಎಂದು ಟಿವಿ9ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ವಿರುದ್ಧ ಹೈಕೋರ್ಟ್​ಗೆ ಪಿಐಎಲ್! ತುರ್ತು ವಿಚಾರಣೆಗೆ ಮನವಿ

ಇದನ್ನೂ ಓದಿ: Mekedatu Padayatra Live: ನಾಲ್ಕನೇ ದಿನದ ಕಾಂಗ್ರೆಸ್ ಪಾದಯಾತ್ರೆ ಚಿಕ್ಕೇನಹಳ್ಳಿಯಿಂದ ಆರಂಭ; ಕ್ಷಣ ಕ್ಷಣದ ಅಪ್​ಡೇಟ್​ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:54 pm, Wed, 12 January 22

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!