AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಯೋಜನೆ: ತಮಿಳುನಾಡು ವಿರೋಧಕ್ಕೆ ಡೋಂಟ್ ಕೇರ್, ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ಯಲು ನಿರ್ಧಾರ

ಈ ಸಭೆಯಲ್ಲಿ ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗಲು ನಿರ್ಧಾರ ಮಾಡಲಾಗಿದೆ. ಇನ್ನೂ ಪ್ರಧಾನಿ ಬಳಿಗೆ ನಿಯೋಗ ಕೊಂಡೊಯ್ಯಲು ಸಭೆಯಲ್ಲಿ ನಿರ್ಣಯ ಮಾಡಲಾಗಿದ್ದು, ತಮಿಳುನಾಡು ವಿರೋಧಕ್ಕೆ ಕ್ಯಾರೆ ಮಾಡದಿರಲು ಸಭೆಯಲ್ಲಿ ಸಹಮತ ದೊರೆತಿದೆ.

ಮೇಕೆದಾಟು ಯೋಜನೆ: ತಮಿಳುನಾಡು ವಿರೋಧಕ್ಕೆ ಡೋಂಟ್ ಕೇರ್, ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ಯಲು ನಿರ್ಧಾರ
ವಿಧಾನ ಮಂಡಲ ಸದನ ನಾಯಕರ ಸಭೆ
Follow us
TV9 Web
| Updated By: preethi shettigar

Updated on:Mar 18, 2022 | 6:48 PM

ಬೆಂಗಳೂರು: ಮೇಕೆದಾಟು ಯೋಜನೆ ಜಾರಿ(Mekedatu Project) ವಿಚಾರದ ಬಗ್ಗೆ ಇಂದು (ಮಾರ್ಚ್​ 18) ವಿಧಾನಸೌಧದಲ್ಲಿ ಸರ್ವ ಪಕ್ಷಗಳ ಸಭೆ (Meeting) ನಡೆಸಲಾಗಿದೆ. ಈ ಸಭೆಯಲ್ಲಿ ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗಲು ನಿರ್ಧಾರ ಮಾಡಲಾಗಿದೆ. ಇನ್ನೂ ಪ್ರಧಾನಿ ನರೇಂದ್ರ ಮೊದಿ (Narendra Modi) ಬಳಿಗೆ ನಿಯೋಗ ಕೊಂಡೊಯ್ಯಲು ಸಭೆಯಲ್ಲಿ ನಿರ್ಣಯ ಮಾಡಲಾಗಿದ್ದು, ತಮಿಳುನಾಡು ವಿರೋಧಕ್ಕೆ ಕ್ಯಾರೆ ಮಾಡದಿರಲು ಸಭೆಯಲ್ಲಿ ಸಹಮತ ದೊರೆತಿದೆ.

ಮೇಕೆದಾಟು ಯೋಜನೆ ವಿವಾದದ ಬಗ್ಗೆ ಕೇಂದ್ರ ಜಲಸಂಪನ್ಮೂಲ ಸಚಿವರು ಕೊಟ್ಟ ಹೇಳಿಕೆಗೆ ಸರ್ವಪಕ್ಷ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಗಿತ್ತು. ಆದರೆ ಇಂದು ಕಾನೂನು ತಜ್ಞರು ಸಭೆಯಲ್ಲಿ ಸಹಮತ ವ್ಯಕ್ತಪಡಿಸಿದ್ದು, ಕಾವೇರಿ ನೀರು ಹಂಚಿಕೆಯಾಗಿರುವಾಗ ಮೇಕೆದಾಟು ಯೋಜನೆ ಮಾಡಲು ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆ:

ವಿಧಾನಸೌಧದಲ್ಲಿ ಇಂದು ಸಂಜೆ ನಡೆದ ಅಂತರ್ ಜಲ ವಿವಾದ ಸಂಬಂಧ ಮಹತ್ವದ ಸರ್ವಪಕ್ಷ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಮಾಧುಸ್ವಾಮಿ, ಗೋವಿಂದ್ ಕಾರಜೋಳ, ಕಾಂಗ್ರೆಸ್​ನ ಎಂಬಿ ಪಾಟೀಲ್, ಬಿಕೆ ಹರಿಪ್ರಸಾದ್, ಹೆಚ್.ಕೆ ಪಾಟೀಲ್, ಜೆಡಿಎಸ್​ನ ಬಂಡೆಪ್ಪ ಕಾಶಂಪುರ್, ಶ್ರೀಕಂಠೇಗೌಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗಿಯಾಗಿದ್ದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಏನಿದೆ ಅದರ ಬಗ್ಗೆ ಚರ್ಚೆ ಮಾಡಿದೆವು: ಸಿಎಂ ಬಸವರಾಜ ಬೊಮ್ಮಾಯಿ

ಅಂತರ್ ರಾಜ್ಯ ಜಲವಿವಾದಗಳ ಬಗ್ಗೆ ಚರ್ಚೆಸಲು ಸರ್ವೆ ಪಕ್ಷದವರನ್ನು ಆಹ್ವಾನಿಸಿದ್ದೇ. ಮಾಜಿ ನೀರಾವರಿ ಸಚಿವರನ್ನು ಕೂಡ ಆಹ್ವಾನಿಸಿ ಚರ್ಚೆ ನಡೆಸಿದೆ. ಈ ಚರ್ಚೆಯಲ್ಲಿ ಮೊದಲನೆಯದಾಗಿ ಮೇಕೆದಾಟು ಬಗ್ಗೆ ಚರ್ಚೆ ಮಾಡಿದ್ದೇವೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಏನಿದೆ ಅದರ ಬಗ್ಗೆ ಚರ್ಚೆ ಮಾಡಿದೆವು. ಡಿಪಿಆರ್ ಚರ್ಚೆ ನಡೆಸಿ ಒಪ್ಪಿಕೊಳ್ಳಬೇಕು ಅನ್ನೋದರ ಬಗ್ಗೆ ಚರ್ಚೆ ಮಾಡಿದ್ದೇವೆ. ನಾನು ನಮ್ಮ ಕೇಂದ್ರ ಜಲಮಂತ್ರಿ ಜೊತೆ ಚರ್ಚೆ ಮಾಡಿ ಸಭೆ ಫಿಕ್ಸ್ ಮಾಡುವುದರ ಬಗ್ಗೆ ಸಭೆಯಲ್ಲಿ ತಿಳಿಸಿದ್ದೇನೆ. ಸೆಷನ್ ಮುಗಿದ ಕೂಡಲೇ ನಾನು ದೆಹಲಿಗೆ ತೆರಳಿ ಇದರ ಬಗ್ಗೆ ನಮ್ಮ ಕೇಂದ್ರ ಸಚಿವರ ಜೊತೆ ಚರ್ಚಿಸಿ ಒತ್ತಾಯ ಮಾಡುತ್ತೇನೆ. ಬಳಿಕ ಇಲ್ಲಿ ಬಂದು ಎಲ್ಲರ ಜೊತೆ ಚರ್ಚೆ ನಡೆಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಳಿಕ ಸರ್ವಪಕ್ಷದ ನಿಯೋಗದೊಂದಿಗೆ ದೆಹಲಿಗೆ ತೆರಳುತ್ತೇನೆ. ಅದೇ ರೀತಿ ಮಹದಾಯಿ ಬಗ್ಗೆಯೂ ಚರ್ಚೆ ನಡೆಯಿತು. ಕೃಷ್ಣಾ ಬಗ್ಗೆಯೂ ಚರ್ಚೆ ನಡೆಸಲಾಯ್ತು. ಬಹಳ ವಿಳಂಬವಾಗ್ತಿದೆ. ಹೊಸ ನ್ಯಾಯಾಧೀಶರನ್ನು ನೇಮಿಸಲು ಸುಪ್ರೀಂ ಕೋರ್ಟ್​ಗೆ ಒತ್ತಾಯ ಮಾಡುತ್ತೇವೆ. ಇನ್ನೂ ಇಂಟರ್ ಲಿಂಕಿಂಗ್ ಆಫ್ ವಾಟರ್ ಗೋದಾವರಿ ಕೃಷ್ಣಾ ಪೆನ್ನಾರ್ ನದಿ ಜೋಡಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ನಮ್ಮ ರಾಜ್ಯದ ಪಾಲನ್ನ ಫಿಕ್ಸ್ ಮಾಡಿದ ಮೇಲೆಯೇ ನದಿ ಜೋಡಣೆಗೆ ಅನುಮತಿಯನ್ನು ನಾವೂ ಕೊಡಬೇಕು ಅನ್ನೋದರ ಬಗ್ಗೆ ಚರ್ಚೆ ಮಾಡಿದ್ದೇವೆ. ಅಂತರ್ ಜಲ ವಿವಾದಗಳನ್ನ ಬೇಗ ನಿವಾರಣೆ ಮಾಡಬೇಕು. ಇದಕ್ಕೆ ವೇಗವನ್ನ ಕೊಡಬೇಕು. ಒಂದು ವೇಳೆ ತಡವಾದರೇ ಆಲ್ ಪಾರ್ಟಿ ಸದಸ್ಯರನ್ನ ಕರೆದುಕೊಂಡು ಹೋಗುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬೇಕಿರುವುದು ರಾಜಕೀಯ ಇಚ್ಛಾಶಕ್ತಿ: ಡಿ.ಕೆ. ಶಿವಕುಮಾರ್

ಅಂತರ ರಾಜ್ಯ ಜಲ ವಿವಾದಗಳ ಬಗ್ಗೆ ಇಂದು ಏರ್ಪಡಿಸಿದ್ದ ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆಯಲ್ಲಿ ಮೇಕೆದಾಟು ಯೋಜನೆ ಕುರಿತು ಡಿ.ಕೆ. ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬೇಕಿರುವುದು ರಾಜಕೀಯ ಇಚ್ಛಾಶಕ್ತಿ. ತಮಿಳುನಾಡು ಪರ ವಕೀಲರೇ 2018 ರಲ್ಲಿ ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸುವಾಗ ಮೆಟ್ಟೂರಿನ ಮೇಲ್ಭಾಗದಲ್ಲಿ ಕರ್ನಾಟಕವು ಮತ್ತೊಂದು ಅಣೆಕಟ್ಟೆ ಕಟ್ಟುವ ಬಗ್ಗೆ ಪರಿಗಣಿಸಬೇಕು ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಮೇಕೆದಾಟು ಯೋಜನೆ ಕರ್ನಾಟಕದ ಭೌಗೋಳಿಕ ಪರಿಧಿಯಲ್ಲಿ ಬರುತ್ತದೆ. ಕರ್ನಾಟಕವು ಇದಕ್ಕಾಗಿ ನೆರೆ ರಾಜ್ಯಗಳ ಅನುಮತಿ ಪಡೆಯಬೇಕು ಎಂದು ಯಾವ ಕಾನೂನು ಹೇಳಿಲ್ಲ. ಕಾವೇರಿ ನ್ಯಾಯಾಧೀಕರಣವು ಈಗಾಗಲೇ ನೀರು ಹಂಚಿಕೆ ಮಾಡಿ ಆಗಿದೆ. ಈಗ ಯಾರ ನೀರನ್ನೂ ಯಾರೂ ಕಬಳಿಸಲು ಆಗಲ್ಲ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಕೂಡ ಕುಡಿಯುವ ನೀರು ಯೋಜನೆಗೆ ಯಾವುದೇ ಅಡಚಣೆ ಮಾಡಬಾರದು ಎಂದು ಸ್ಪಷ್ಟವಾಗಿ ಹೇಳಿದೆ. ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್, ರಾಷ್ಟ್ರೀಯ ಜಲ ಆಯೋಗ, ಕಾವೇರಿ ಪ್ರಾಧಿಕಾರ, ಕೇಂದ್ರ ಸರಕಾರ ಸೇರಿದಂತೆ ಯಾರ ಅಭ್ಯಂತರವೂ ಇಲ್ಲ. ಅರಣ್ಯ ಮತ್ತು ಪರಿಸರ ಇಲಾಖೆ ಅನುಮತಿ ಮಾತ್ರ ಬಾಕಿ ಉಳಿದಿದೆ. ಕೇಂದ್ರ ಸರಕಾರದ ಮೇಲೆ ಒತ್ತಡ ತಂದು ಈ ಅನುಮತಿ ಪಡೆಯಿರಿ. ಮೇಕೆದಾಟು ಯೋಜನೆಯನ್ನು ಅನುಷ್ಠಾನಕ್ಕೆ ತರಲು ಇರುವ ಸುಲಭ ಮಾರ್ಗೋಪಾಯಗಳ ಬಗ್ಗೆ ರಾಜ್ಯದ ಪರ ವಕೀಲರು, ಕಾನೂನು ಸಲಹೆಗಾರರು ಸರಕಾರಕ್ಕೆ ಸಲಹೆ ಮಾಡಬೇಕು. ಇಲ್ಲದ ಅಡಚಣೆಗಳ ಬಗ್ಗೆ ಹೇಳಿ ಗೊಂದಲ ಸೃಷ್ಟಿಸಬಾರದು. ನೀವಿರುವುದು ಯೋಜನೆ ಅನುಷ್ಠಾನ ಸುಲಭ ಮಾಡುವ ಸಲಹೆ ನೀಡಲು. ಅದು ಬಿಟ್ಟು ಆಗಲ್ಲ, ನೋಡಬೇಕು ಅಂತ ಕತೆ ಹೇಳಬಾರದು. ರಾಜ್ಯ ಸರಕಾರ ಅದನ್ನು ಜಾರಿಗೆ ತರಲು ಏನು ಮಾಡಬೇಕೋ ಅದನ್ನು ಮಾಡಲಿ ಎಂದು ಹೇಳಿದ್ದಾರೆ.

ವಾಸ್ತವವಾಗಿ ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಲಾಭ. ಏಕೆಂದರೆ ನಾವೇನು ಇದನ್ನು ನೀರಾವರಿಗೆ ಬಳಸಲ್ಲ. ಬೆಂಗಳೂರಿನ ಜನತೆಗೆ ಕುಡಿಯುವ ನೀರಿಗೆ ಮಾತ್ರ ಬಳಸಲು ಉದ್ದೇಶಿಸಿದ್ದೇವೆ. ಹಾಗೆ ನೋಡಿದರೆ ಸಂಕಷ್ಟ ಕಾಲದಲ್ಲಿ ತಮಿಳುನಾಡಿಗೆ ಇದರಿಂದ ಲಾಭ. ಅದು ತಮಿಳುನಾಡಿಗೆ ಚೆನ್ನಾಗಿ ಗೊತ್ತಿದೆ. ರಾಜಕೀಯ ಕಾರಣಗಳಿಗಾಗಿ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಾ ಬಂದಿದೆ. ಮುಂದೆಯೂ ವ್ಯಕ್ತಪಡಿಸುತ್ತಾರೆ. ಅವರನ್ನು ಕಾಯ್ದುಕೊಂಡು ಕೂರಲು ಆಗುವುದಿಲ್ಲ ಎಂದು ಡಿ.ಕೆ. ಶಿವಕುಮಾರ್​ ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮೇಕೆದಾಟು ಯೋಜನೆ ವಿಚಾರ ಚರ್ಚೆಗಾಗಿ ಶುಕ್ರವಾರ ಸಂಜೆ ವಿಧಾನ ಮಂಡಲ ಸದನ ನಾಯಕರ ಸಭೆ

ಜಿ-23 ಸಭೆಯ ನಂತರ ಕಾಂಗ್ರೆಸ್​​ನ ಹಿರಿಯ ನಾಯಕ ಭೂಪಿಂದರ್ ಸಿಂಗ್​​ ಹೂಡಾ ಭೇಟಿ ಮಾಡಿದ ರಾಹುಲ್​​ ಗಾಂಧಿ

Published On - 5:38 pm, Fri, 18 March 22

ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ