ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್, ಸೆಪ್ಟೆಂಬರ್ 6ರಿಂದ ಮೆಟ್ರೋ ಮಿತ್ರ ಆರಂಭ; ಹೇಗೆ ಕಾರ್ಯನಿರ್ವಹಿಸುತ್ತೆ? ಇಲ್ಲಿದೆ ವಿವರ

Metro Mitra; ಪ್ರಯಾಣಿಕರು ಒಮ್ಮೆ ಕ್ಯುಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದರೆ, ಅದು ಅವರನ್ನು ನಿಲ್ದಾಣದ 5 ​​ಕಿಮೀ ವ್ಯಾಪ್ತಿಯಲ್ಲಿರು ಪ್ರಮುಖ ಪ್ರದೇಶಗಳನ್ನು ಪಟ್ಟಿ ಮಾಡಲಾದ ಲಿಂಕ್‌ಗೆ ಕರೆದೊಯ್ಯುತ್ತದೆ. ಪ್ರಯಾಣಿಕರು ನಿರ್ದಿಷ್ಟ ಸ್ಥಳವನ್ನು ಆಯ್ಕೆ ಮಾಡಿದ ನಂತರ, ರೈಡ್ ಅನ್ನು ಬುಕ್ ಮಾಡಲು ಒಂದು-ಬಾರಿಯ ಪಾಸ್‌ವರ್ಡ್ ಅಥವಾ ಒಟಿಪಿಯನ್ನು ಕಳುಹಿಸಲಾಗುತ್ತದೆ. ಆಮೇಲೆ ಏನು ಮಾಡಬೇಕು? ಇಲ್ಲಿದೆ ವಿವರ

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್, ಸೆಪ್ಟೆಂಬರ್ 6ರಿಂದ ಮೆಟ್ರೋ ಮಿತ್ರ ಆರಂಭ; ಹೇಗೆ ಕಾರ್ಯನಿರ್ವಹಿಸುತ್ತೆ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Sep 04, 2023 | 3:42 PM

ಬೆಂಗಳೂರು, ಸೆಪ್ಟೆಂಬರ್ 4: ನಮ್ಮ ಯಾತ್ರಿ ಅಪ್ಲಿಕೇಶನ್‌ನ ಯಶಸ್ಸಿನ ನಂತರ, ಆಟೋ ರಿಕ್ಷಾ ಚಾಲಕರ ಒಕ್ಕೂಟ (ARDU) ಇದೀಗ ಸೆಪ್ಟೆಂಬರ್ 6 ರಂದು ಮೆಟ್ರೋ ಮಿತ್ರವನ್ನು (Metro Mitra) ಪ್ರಾರಂಭಿಸಲು ಸಿದ್ಧವಾಗಿದೆ. ಇದು ಮೆಟ್ರೋ ನಿಲ್ದಾಣಗಳಿಂದ ಪ್ರಮುಖ ಪ್ರದೇಶಗಳಿಗೆ ಪ್ರಯಾಣಿಕರನ್ನು ಕರೆದೊಯ್ಯುವ ಗುರಿಯನ್ನು ಹೊಂದಿದೆ. ಈ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಗ್ರಾಹಕರು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡುವ ಅಗತ್ಯವಿಲ್ಲ. ಬದಲಿಗೆ, ಅವರು ಕೇವಲ ಕ್ಯುಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಸೇವೆಯನ್ನು ಪಡೆಯಬಹುದಾಗಿದೆ.

ಏನಿದು ಮೆಟ್ರೋ ಮಿತ್ರ?

ಇದು ನಗರದಾದ್ಯಂತ ಮೆಟ್ರೋ ನಿಲ್ದಾಣಗಳಿಂದ ಪ್ರಮುಖ ಪ್ರದೇಶಗಳಿಗೆ ಪ್ರಯಾಣಿಕರನ್ನು ಕರೆದೊಯ್ಯುವ ಗುರಿಯೊಂದಿಗೆ ಆಟೋ ರಿಕ್ಷಾ ಚಾಲಕರ ಒಕ್ಕೂಟ ಅಭಿವೃದ್ಧಿಪಡಿಸಿದ ಅಪ್ಲಿಕೇಶನ್ ಆಗಿದೆ. ಹಲವಾರು ಆಟೋ ಚಾಲಕರು ಕಡಿಮೆ ದೂರದ ಪ್ರಯಾಣದ ಬೇಡಿಕೆಯನ್ನು ನಿರಾಕರಿಸುತ್ತಾರೆ. ಇದರಿಂದ ಗ್ರಾಹಕರಿಗೆ ಮೆಟ್ರೋ ನಿಲ್ದಾಣವನ್ನು ತಲುಪುದು ಅಥವಾ ಮೆಟ್ರೋ ನಿಲ್ದಾಣದಿಂದ ಬೇರೆಡೆಗೆ ತೆರಳುವುದು ಸಮಸ್ಯೆಯಾಗುತ್ತಿದೆ. ಇದೀಗ ಮೆಟ್ರೋ ಮಿತ್ರ ತಂತ್ರಜ್ಞಾನವು ಸಮಸ್ಯೆಯನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.

ಮೆಟ್ರೋ ಮಿತ್ರ ಹೇಗೆ ಕೆಲಸ ಮಾಡುತ್ತದೆ?

ಮೆಟ್ರೋ ಮಿತ್ರದಲ್ಲಿ ಬಳಸಲಾದ ತಂತ್ರಜ್ಞಾನದ ಕಾರಣ ಗ್ರಾಹಕರು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡುವ ಅಗತ್ಯವಿಲ್ಲ. ಬದಲಾಗಿ, ಪ್ರಯಾಣಿಕರು ಆಟೋವನ್ನು ಬುಕ್ ಮಾಡಲು ಮೆಟ್ರೋ ನಿಲ್ದಾಣಗಳ ಹೊರಗೆ ಪ್ರದರ್ಶಿಸಲಾದ ಕ್ಯುಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಬಹುದು.

ಪ್ರಯಾಣಿಕರು ಒಮ್ಮೆ ಕ್ಯುಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದರೆ, ಅದು ಅವರನ್ನು ನಿಲ್ದಾಣದ 5 ​​ಕಿಮೀ ವ್ಯಾಪ್ತಿಯಲ್ಲಿರು ಪ್ರಮುಖ ಪ್ರದೇಶಗಳನ್ನು ಪಟ್ಟಿ ಮಾಡಲಾದ ಲಿಂಕ್‌ಗೆ ಕರೆದೊಯ್ಯುತ್ತದೆ. ಪ್ರಯಾಣಿಕರು ನಿರ್ದಿಷ್ಟ ಸ್ಥಳವನ್ನು ಆಯ್ಕೆ ಮಾಡಿದ ನಂತರ, ರೈಡ್ ಅನ್ನು ಬುಕ್ ಮಾಡಲು ಒಂದು-ಬಾರಿಯ ಪಾಸ್‌ವರ್ಡ್ ಅಥವಾ ಒಟಿಪಿಯನ್ನು ಕಳುಹಿಸಲಾಗುತ್ತದೆ. ಅಪ್ಲಿಕೇಶನ್ ಅನ್ನು ಸ್ಥಾಪಿಸಿದ ಆಟೋ ಚಾಲಕರಿಗೆ ಸಂದೇಶ ರವಾನೆಯಾಗುತ್ತದೆ. ನಂತರ ಅವರು ಪ್ರಯಾಣಿಕರನ್ನು ಕರೆದೊಯ್ಯಲು ಸ್ಥಳಕ್ಕೆ ಆಗಮಿಸುತ್ತಾರೆ.

ಸರ್ಕಾರ ನಿಗದಿಪಡಿಸಿದ ಮೀಟರ್ ದರದ ಪ್ರಕಾರ ಪ್ರಯಾಣಿಕರಿಗೆ ಶುಲ್ಕ ವಿಧಿಸಲಾಗುತ್ತದೆ. ತಂತ್ರಜ್ಞಾನದ ನಿರ್ವಹಣೆಗೆ ಹೆಚ್ಚುವರಿಯಾಗಿ 10 ರೂ. ವಿಧಿಸಲಾಗುತ್ತದೆ ಎಂದು ‘ನ್ಯೂಸ್ 9’ ವರದಿ ಮಾಡಿದೆ.

ಆರಂಭದಲ್ಲಿ, ಈ ಸೇವೆಯು ಮೆಟ್ರೋ ನಿಲ್ದಾಣಗಳಿಂದ ವಿವಿಧ ಸ್ಥಳಗಳಿಗೆ ಪ್ರಯಾಣಿಸಲು ಲಭ್ಯವಿರುತ್ತದೆ. ಮುಂದಿನ ಕೆಲವು ತಿಂಗಳುಗಳಲ್ಲಿ ಪ್ರಮುಖ ಸ್ಥಳಗಳಿಂದ ಮೆಟ್ರೋ ನಿಲ್ದಾಣಗಳಿಗೆ ಸೇವೆಯನ್ನು ಒದಗಿಸಲಾಗುವುದು ಎಂದು ಎಆರ್​ಡಿಯು ತಿಳಿಸಿದೆ.

ಇದನ್ನೂ ಓದಿ: ಮೆಟ್ರೋ ನಿಲ್ದಾಣದಲ್ಲಿನ ಅವ್ಯವಸ್ಥೆಯನ್ನು ಪರಿಹರಿಸಲು ಬಿಎಂಆರ್​ಸಿಎಲ್​​ನಿಂದ ವಿಶೇಷ ಕಾರ್ಯಾಚರಣೆ

‘ಮೆಟ್ರೋ ಮಿತ್ರ’ ಸೇವೆಗಳನ್ನು ತನ್ನ ವಾಟ್ಸಾಪ್ ಚಾಟ್‌ಬಾಕ್ಸ್‌ನೊಂದಿಗೆ ಸಂಯೋಜಿಸಲು ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL) ಜೊತೆಗೆ ಎಆರ್​ಡಿಯು ಮಾತುಕತೆ ನಡೆಸುತ್ತಿದೆ ಎಂದು ಹೇಳಲಾಗಿದೆ. ಇದನ್ನು ಟಿಕೆಟ್‌ಗಳನ್ನು ಬುಕ್ ಮಾಡಲು ಬಳಸಲಾಗುತ್ತದೆ.

ಬೆಂಗಳೂರಿನ ಮೆಟ್ರೋ ರೈಲು ನಿಲ್ದಾಣಗಳ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಪ್ರಯಾಣಿಕರಿಗೆ ನೆರವಾಗುವ ಉದ್ದೇಶದೊಂದಿಗೆ ಈ ಯೋಜನೆ ಜಾರಿಗೆ ಎಆರ್​ಡಿಯು ಮುಂದಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ