ಬೆಂಗಳೂರಿನಲ್ಲಿ IPL 2024 ಪಂದ್ಯ: ಈ ನಾಲ್ಕು ದಿನ ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಐಪಿಎಲ್ (IPL) ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆ ಐಪಿಎಲ್ ಪ್ರಿಯರಿಗಾಗಿ ಮೆಟ್ರೋ(Namma Metro) ಅವಧಿ ವಿಸ್ತರಣೆ ಮಾಡಿ ಬಿಎಂಆರ್​ಸಿಎಲ್​ ಆದೇಶ ಹೊರಡಿಸಿದೆ.

ಬೆಂಗಳೂರಿನಲ್ಲಿ IPL 2024 ಪಂದ್ಯ: ಈ ನಾಲ್ಕು ದಿನ ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ
ನಮ್ಮ ಮೆಟ್ರೋ
Follow us
Kiran Surya
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 12, 2024 | 4:45 PM

ಬೆಂಗಳೂರು, ಏ.12: ಈಗಾಗಲೇ ಐಪಿಎಲ್​ ಶುರುವಾಗಿದ್ದು, ಕ್ರಿಕೆಟ್​ ಪ್ರೇಮಿಗಳು ಸಂತಸದಲ್ಲಿದ್ದಾರೆ. ಅದರಂತೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 15, ಮೇ 4, 12 ಹಾಗೂ 18 ರಂದು ಐಪಿಎಲ್ (IPL) ಪಂದ್ಯಾವಳಿಗಳನ್ನು ಆಯೋಜನೆ ಮಾಡಲಾಗಿದೆ. ಈ ಹಿನ್ನೆಲೆ ಐಪಿಎಲ್ ಪ್ರಿಯರಿಗಾಗಿ ಮೆಟ್ರೋ(Namma Metro) ಅವಧಿ ವಿಸ್ತರಣೆ ಮಾಡಿ ಬಿಎಂಆರ್​ಸಿಎಲ್​ ಆದೇಶ ಹೊರಡಿಸಿದೆ. ಪಂದ್ಯದ ವೇಳೆ ಮೆಟ್ರೋ ಸಂಚಾರದ ಅವಧಿಯನ್ನ ಮಧ್ಯರಾತ್ರಿ ಮಧ್ಯರಾತ್ರಿ 11.30 ವರೆಗೂ ವಿಸ್ತರಿಸಿದೆ.

ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಪೇಪರ್ ಟಿಕೆಟ್ ವಿತರಣೆ

ಇನ್ನು ಮೆಟ್ರೋ ನಿಲ್ದಾಣಗಳಲ್ಲಿ ರಿಟರ್ನ್ ಪೇಪರ್ ಟಿಕೆಟ್ ವಿತರಣೆ ಕೂಡ ಲಭ್ಯವಿದ್ದು, ಪಂದ್ಯದ ವೇಳೆ ಮಧ್ಯಾಹ್ನ 2 ಗಂಟೆಯಿಂದ ಎಲ್ಲಾ ನಿಲ್ದಾಣಗಳಲ್ಲಿ 50 ರೂಪಾಯಿ ಪೇಪರ್ ಟಿಕೆಟ್ ಸಿಗಲಿದೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಪೇಪರ್ ಟಿಕೆಟ್​ಗೆ ವ್ಯವಸ್ಥೆ ಮಾಡಲಾಗಿದೆ. ಪೇಪರ್ ಟಿಕೆಟ್ ಪಡೆದು ಎಲ್ಲಾ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಅವಕಾಶ ಇದೆ. ಆದರೆ, ಈ ಟಿಕೆಟ್ ರಾತ್ರಿ 8 ರಿಂದ ದಿನದ ಸೇವೆಗಳು ಕೊನೆಗೊಳ್ಳುವರೆಗೆ ಮಾತ್ರ ಮಾನ್ಯವಾಗಲಿದೆ.

ಇದನ್ನೂ ಓದಿ:ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಲೈವ್​ ಪಂದ್ಯ​ ನೋಡ್ತ​ ಬೆಟ್ಟಿಂಗ್, ಬುಕ್ಕಿಗಳ ಬಂಧನ

QR ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್​ಗಳು ಮತ್ತು NCMC ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್, ನಮ್ಮ ಮೆಟ್ರೋ ಆ್ಯಪ್, ಪೇಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ನಿರ್ಣಯ ಕೈಗೊಳ್ಳಲಾಗಿದ್ದು, ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಲು ನಮ್ಮ ಮೆಟ್ರೋ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ