AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಣಿ ಸಮಸ್ಯೆ ಮಧ್ಯೆ ಮತ್ತೊಂದು ದುರಂತ: ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ​ ಸಾವು

ಬೆಂಗಳೂರಿಗರ ಜೀವನಾಡಿ ನಮ್ಮ ಮೆಟ್ರೋ ಸಾಲು ಸಾಲು ಸಮಸ್ಯೆಗೆ ಗುರಿಯಾಗುತ್ತಿದೆ. ತಾಂತ್ರಿಕ ದೋಷದಿಂದ ಮೆಟ್ರೋ ರೈಲು ಎರಡೆರಡು ಸಲ ಕೈಕೊಟ್ಟಿತ್ತು. ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಮೆಟ್ರೋ ಪಿಲ್ಲರ್​ಗೆ ಲೈಟಿಂಗ್ಸ್​​​ ಅಳವಡಿಸುವಾಗ ವಿದ್ಯುತ್​ ಪ್ರವಹಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.​

ಸರಣಿ ಸಮಸ್ಯೆ ಮಧ್ಯೆ ಮತ್ತೊಂದು ದುರಂತ: ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ​ ಸಾವು
ಮೃತ ಗುರಪ್ಪImage Credit source: tv9 kannada
ಕಿರಣ್​ ಸೂರ್ಯ
| Edited By: |

Updated on: Jun 26, 2026 | 8:27 PM

Share

ಮುಖ್ಯಾಂಶಗಳು

  • ಮೆಟ್ರೋ ಪಿಲ್ಲರ್​ಗೆ ಲೈಟಿಂಗ್ಸ್​​​ ಅಳವಡಿಸುವಾಗ ದುರಂತ
  • ವಿದ್ಯುತ್​ ಪ್ರವಹಿಸಿ ಎಲೆಕ್ಟ್ರಿಷಿಯನ್ ಸಾವು
  • ಬೆಂಗಳೂರಿನ ಟ್ರಿನಿಟಿ ಮೆಟ್ರೋ ನಿಲ್ದಾಣ ಬಳಿ ದುರ್ಘಟನೆ

ಬೆಂಗಳೂರು, ಜೂನ್​​ 26: ನಮ್ಮ ಮೆಟ್ರೋ (Namma Metro) ಪಿಲ್ಲರ್​ಗೆ ಲೈಟಿಂಗ್ಸ್​​​ ಅಳವಡಿಸುವಾಗ ದುರಂತವೊಂದು ಸಂಭವಿಸಿದ್ದು, ವಿದ್ಯುತ್​ ಪ್ರವಹಿಸಿ ಕಾರ್ಮಿಕ​​ ಸಾವನ್ನಪ್ಪಿದ್ದಾರೆ (death). ಗುರಪ್ಪ(70) ಮೃತ ಕಾರ್ಮಿಕ. ವೈಟ್‌ಫೀಲ್ಡ್​ ಟು ಚಲ್ಲಘಟ್ಟ ಮಾರ್ಗದ ನೇರಳೆ ಮಾರ್ಗದ ಟ್ರಿನಿಟಿ ಮೆಟ್ರೋ ನಿಲ್ದಾಣದ 153ನೇ ಪಿಲ್ಲರ್​​ ಬಳಿ ಘಟನೆ ನಡೆದಿದೆ. ಘಟನೆ ಸಂಬಂಧ ಹಲಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಎಂಆರ್​ ಎಲೆಕ್ಟ್ರಿಕಲ್ಸ್ ಎಂಬ ಸಂಸ್ಥೆ ಬಿಎಂಆರ್​ಸಿಎಲ್​​ನಿಂದ ಲೈಟಿಂಗ್ಸ್ ಹಾಕುವ ಟೆಂಡರ್ ಪಡೆದಿತ್ತು. ಹಾಗಾಗಿ ಸಂಸ್ಥೆಯ ಕಾರ್ಮಿಕ ಗುರಪ್ಪ ಮೆಟ್ರೋ ಪಿಲ್ಲರ್​ಗೆ ಲೈಟಿಂಗ್ಸ್ ಅಳವಡಿಸುತ್ತಿದ್ದರು. ಲೈಟಿಂಗ್​​ಗಾಗಿ ಅರ್ಥಿಂಗ್ ಗುಂಡಿ ಅಗೆಯಲಾಗುತಿತ್ತು. ಟ್ರಿನಿಟಿ ಮೆಟ್ರೋ ನಿಲ್ದಾಣದ ಹೊರಭಾಗದಲ್ಲಿರುವ ಪಿಲ್ಲರ್ ಸಂಖ್ಯೆ 153ರ ಸಮೀಪ ಗುಂಡಿ ಅಗೆಯುವಾಗ ಅಡಿಯಲ್ಲಿದ್ದ ಕೇಬಲ್​​ಗೆ ಡ್ರಿಲ್ಲಿಂಗ್ ಮಿಷನ್​ ತಾಗಿದೆ.​

ಇದನ್ನೂ ಓದಿ: ಚೂರು ಹೆಚ್ಚು ಕಮ್ಮಿಯಾಗಿದ್ರು ದೊಡ್ಡ ಅನಾಹುತ: ಮೆಟ್ರೋನಲ್ಲಿ ತಾಂತ್ರಿಕ ದೋಷಕ್ಕೆ ಸ್ಫೋಟಕ ಕಾರಣ ಬಯಲು

ಈ ವೇಳೆ ವಿದ್ಯುತ್ ಶಾಕ್​ನಿಂದ ಗುರಪ್ಪ ಅಸ್ವಸ್ಥರಾಗಿದ್ದಾರೆ. ತಕ್ಷಣ ಸ್ಥಳಿಯರು ಸೇಂಟ್ ಫಿಲೋಮಿನಾ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಗುರಪ್ಪ ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.

ವಿದ್ಯುತ್​ ಪ್ರವಹಿಸಿ ಯುವಕ ದುರ್ಮರಣ

ಮತ್ತೊಂದು ಪ್ರಕರಣದಲ್ಲಿ ವಿದ್ಯುತ್​ ಪ್ರವಹಿಸಿ ಯುವಕ ದುರ್ಮರಣ ಹೊಂದಿರುವಂತ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಗ್ರಾಮದಲ್ಲಿ ನಡೆದಿದೆ. ಅಭಿಷೇಕ್​ ಶೆಟ್ಟಿ(32) ಮೃತ ವ್ಯಕ್ತಿ. ಸದ್ಯ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ರೈಲು ಮತ್ತೆ ಕೈಕೊಟ್ಟಿದ್ದೇಕೆ? ಬಾಗಿಲು ಲಾಕ್ ಆಗದೇ ಇದ್ದುದರ ಅಸಲಿ ಕಾರಣ ಬಯಲು

ತೀರ್ಥಹಳ್ಳಿ ಪಟ್ಟಣದ ಇಂದಿರಾನಗರ ನಿವಾಸಿ ಅಭಿಷೇಕ್​​, ಪತ್ರೊಡೆ ಎಲೆ ಕೀಳಲು ಮರವೇರಿದ್ದಾರೆ. ಈ ವೇಳೆ ಆಕಸ್ಮಿಕವಾಗಿ 11 ಕೆವಿ ವಿದ್ಯುತ್ ತಂತಿ ಸ್ಪರ್ಶಿಸಿ ಶಾಕ್​​ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವಿವಾಹಿತನಾಗಿದ್ದ ಅಭಿಷೇಕ್ ಶೆಟ್ಟಿಗೆ ತಂದೆ-ತಾಯಿ ಇರಲಿಲ್ಲ. ತನ್ನ ಚಿಕ್ಕಮನ ಮಗಳ ಮನೆಯಲ್ಲಿ ವಾಸವಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​