ಮೆಜೆಸ್ಟಿಕ್ – ವೈಟ್ಫೀಲ್ಡ್ ನಡುವೆ ಮೂರು ನಿಮಿಷಕ್ಕೊಮ್ಮೆ ಮೆಟ್ರೋ ಸೇವೆ: ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಗುಡ್ ನ್ಯೂಸ್
ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ಸಾರ್ವಜನಿಕರಿಗೆ ಗುಡ್ ನ್ಯೂಸ್ ನೀಡಿದೆ. ಬೆಳಗ್ಗಿನ ಪೀಕ್ ಆವರ್ಗಳಲ್ಲಿ ಪ್ರತಿ ಮೂರು ನಿಮಿಷಕ್ಕೆ ಮೆಟ್ರೋ ಸೇವೆ ಒದಗಿಸುತ್ತಿದೆ. ಮೆಜೆಸ್ಟಿಕ್‌ನಿಂದ ವೈಟ್ ಫಿಲ್ಡ್ ಕಡೆ ಪ್ರಯಾಣಿಸುವವರಿಗೆ ಈ ಸೇವೆ ಅನುಕೂಲವಾಗಲಿದೆ. ಸೋಮವಾರದಿಂದ ಬೆಳಿಗ್ಗೆ 8.45 ರಿಂದ 10.20 ರವರೆಗೆ ಮೆಜೆಸ್ಟಿಕ್ ಮತ್ತು ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆಯನ್ನು ಆರಂಭಿಸಲಿದೆ.
ಬೆಂಗಳೂರು, ಫೆಬ್ರವರಿ 23: ಮೆಜೆಸ್ಟಿಕ್‌ನಿಂದ ವೈಟ್ ಫಿಲ್ಡ್ ಕಡೆ ಪ್ರಯಾಣಿಸುವವರಿಗೆ ನಮ್ಮ ಮೆಟ್ರೋ (Metro) ಕಡೆಯಿಂದ ಗುಡ್ ನ್ಯೂಸ್ ನೀಡಿದೆ. ಬೆಳಗ್ಗಿನ ಪೀಕ್ ಆವರ್ಗಳಲ್ಲಿ ಪ್ರತಿ ಮೂರು ನಿಮಿಷಕ್ಕೆ ಮೆಟ್ರೋ ಸೇವೆ ಒದಗಿಸಲಾಗುತ್ತಿದೆ. ಸೋಮವಾರದಿಂದ ಬೆಳಿಗ್ಗೆ 8.45 ರಿಂದ 10.20 ರವರೆಗೆ ಮೆಜೆಸ್ಟಿಕ್ ಮತ್ತು ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆಯನ್ನು ಆರಂಭಿಸಲಿದೆ. ಈ ಮಾರ್ಗದಲ್ಲಿ 8.45 ರಿಂದ 10.20 ರವರೆಗೆ ಇನ್ಮುಂದೆ ಮೂರು ನಿಮಿಷಕ್ಕೊಮ್ಮೆ ಮೆಟ್ರೋ ರೈಲುಗಳು ಓಡಾಟ ನಡೆಸಲಿವೆ. ಬೆಳಿಗ್ಗೆ ಸಮಯದಲ್ಲಿ ಪ್ರಯಾಣಿಕರಿಗೆ ಆಗುತ್ತಿದ್ದ ತೊಂದರೆ ತಪ್ಪಿಸಲು ಹೆಚ್ಚುವರಿ ರೈಲು ಸೇವೆ ಒದಗಿಸಲು ನಮ್ಮ ಮೆಟ್ರೋ ಮುಂದಾಗಿದೆ.
ಬೈಯಪ್ಪನಹಳ್ಳಿಯಿಂದ ಕೆಆರ್ ಪುರಗೆ ಮೆಟ್ರೋ ಸಂಪರ್ಕವಾದ ಮೇಲೆ ಮೆಟ್ರೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಹೆಚ್ಚುವರಿ ಮೆಟ್ರೋ ಬಿಡಿ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತಗೆ ಸಾರ್ವಜನಿಕರು ಹಲವು ಬಾರಿ ಮನವಿ ಮಾಡಿದ್ದರು. ಹೀಗಾಗಿ ಸೋಮವಾರದಿಂದ ಬೆಳಗಿನ ದಟ್ಟಣೆಯ ಸಮಯದಲ್ಲಿ ಹೆಚ್ಚುವರಿ ಮೆಟ್ರೋ ಸೇವೆ ಒದಗಿಸಲಾಗುತ್ತಿದೆ.
ಇದನ್ನೂ ಓದಿ: Namma Metro: ಹೇಗಿದೆ ನೋಡಿ ಮೊದಲ ಚಾಲಕ ರಹಿತ ನಮ್ಮ ಮೆಟ್ರೋ ರೈಲು
ಈ ರೈಲು ಟ್ರಿನಿಟಿ, ಇಂದಿರಾನಗರ, ಬೆನ್ನಿಗಾನಹಳ್ಳಿ ಮತ್ತು ಕೆಆರ್ಪುರ ಕಡೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಆದರೆ ಶನಿವಾರ, ಭಾನುವಾರ ಮತ್ತು ರಜಾದಿನಗಳನ್ನು ಹೊರತುಪಡಿಸಿ ಇನ್ನುಳಿದ ದಿನಗಳಲ್ಲಿ ಈ ಸೇವೆ ಇರದಲಿದೆ.
ಜೊತೆಗೆ ರೈಲು, ಇಂಟರ್‌ಸಿಟಿ ಬಸ್‌ಗಳ ಪ್ರಯಾಣಿಕರ ಅನುಕೂಲಕ್ಕಾಗಿ ಬೆಳಿಗ್ಗೆ 5 ಗಂಟೆಯಿಂದ ರೈಲು ಸೇವೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಎಲ್ಲಾ ದಿಕ್ಕುಗಳಿಗೆ ಮೊದಲ ರೈಲಿನ ಸೇವೆ 5 ಗಂಟೆಗೆ ಆರಂಭವಾಗಲಿದ್ದು, ಭಾನುವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ, 5.00 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:12 pm, Fri, 23 February 24