AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ

ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ.

IPL 2023: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ
ಪ್ರಾತಿನಿಧಿಕ ಚಿತ್ರ Image Credit source: timesproperty.com
ಗಂಗಾಧರ​ ಬ. ಸಾಬೋಜಿ
|

Updated on:Mar 31, 2023 | 10:00 PM

Share

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ (IPL match) ಪಂದ್ಯಾವಳಿ ನಡೆಯಲಿದ್ದು, ಅಂದು ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ (Metro services) ಇರಲಿದೆ ಎಂದು ಮೆಟ್ರೋ ಸಂಸ್ಥೆ ತಿಳಿಸಿದೆ. ಐಪಿಎಲ್​ ಪಂದ್ಯ ನಡೆಯುವ ದಿನ ರಾತ್ರಿ 1ರವರೆಗೆ ಮೆಟ್ರೋ ವಿಸ್ತರಣೆ ಮಾಡಿ ಬಿಎಂಆರ್​ಸಿಎಲ್​ ಪ್ರಕಟಣೆ ಹೊರಡಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯಗಳು ನಡೆಯಲಿದ್ದು, ಈ ಹಿನ್ನೆಲೆ ಮೆಟ್ರೋ ರೈಲುಗಳಲ್ಲಿ ಭಾರೀ ಜನಸಂದಣಿ ಆಗುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ. ರಾತ್ರಿ ಮ್ಯಾಚ್ ಹಿನ್ನೆಲೆ ಬೈಯ್ಯಪ್ಪನಹಳ್ಳಿ, ಕೆಂಗೇರಿ ಮತ್ತು ನಾಗಸಂದ್ರ, ಸಿಲ್ಕ್ ಇನ್ಸ್ಟಿಟ್ಯೂಟ್​ಗಳಲ್ಲಿ ರೈಲು ಸೇವೆಗಳನ್ನು ರಾತ್ರಿ 1 ಗಂಟೆಯವರೆಗೆ ಮೆಟ್ರೋ ಸೇವೆ ವಿಸ್ತರಿಸಲಾಗುತ್ತಿದ್ದು, ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕೊನೆಯ ರೈಲು 1:30ಕ್ಕೆ ಹೊರಡಲಿದೆ ತಿಳಿಸಲಾಗಿದೆ.

ಒಟ್ಟು 70 ಲೀಗ್ ಪಂದ್ಯಗಳು

ಈ ಬಾರಿಯ ಐಪಿಎಲ್, ಅಹಮದಾಬಾದ್, ಮೊಹಾಲಿ, ಲಕ್ನೋ, ಹೈದರಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಕೋಲ್ಕತ್ತಾ, ಜೈಪುರ, ಮುಂಬೈ, ಗುವಾಹಟಿ ಮತ್ತು ಧರ್ಮಶಾಲಾ ಸೇರಿದಂತೆ ಒಟ್ಟು 12 ನಗರಗಳಲ್ಲಿ ನಡೆಯಲಿದೆ. ಟೂರ್ನಿಯ ಮೊದಲ ಹಾಗೂ ಅಂತಿಮ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಇದನ್ನೂ ಓದಿ: IPL 2023 Schedule: 16ನೇ ಆವೃತ್ತಿಯ ಐಪಿಎಲ್ ವೇಳಾಪಟ್ಟಿ ಪ್ರಕಟ; ಮೊದಲ ಪಂದ್ಯ ಯಾವಾಗ ಗೊತ್ತಾ?

ಮೇ 21ರಂದು ಕೊನೆಯ ಲೀಗ್ ಪಂದ್ಯ ನಡೆಯಲಿದ್ದು, 18 ಡಬಲ್ ಹೆಡರ್ ಸೇರಿದಂತೆ ಒಟ್ಟು 70 ಲೀಗ್ ಪಂದ್ಯಗಳು ನಡೆಯಲಿವೆ. ಪ್ರತಿ ತಂಡ ತಲಾ 7 ಪಂದ್ಯಗಳನ್ನು ತವರು ನೆಲದಲ್ಲಿ ಮತ್ತು 7 ಪಂದ್ಯಗಳನ್ನು ಬೇರೆ ನೆಲದಲ್ಲಿ ಆಡಲಿದೆ.

ಇದನ್ನೂ ಓದಿ: IPL 2023: ಮೊದಲ ಪಂದ್ಯದ ಮೊದಲ ವಿಕೆಟ್…ಹೊಸ ಮೈಲುಗಲ್ಲು ದಾಟಿದ ಮೊಹಮ್ಮದ್ ಶಮಿ

2 ಗುಂಪುಗಳಾಗಿ ವಿಂಗಡಣೆ

10 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದ್ದು ಎ ಗುಂಪಿನಲ್ಲಿ ಮುಂಬೈ ಇಂಡಿಯನ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸ್ಥಾನ ಪಡೆದಿದ್ದರೆ, ಬಿ ಗುಂಪಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಸ್ಥಾನ ಪಡೆದಿವೆ.

IPL 2023 ಲೈವ್​ ನೋಡಲು ಇಲ್ಲಿ ಕ್ಲಿಕ್ ಮಾಡಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:35 pm, Fri, 31 March 23