ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​ನ್ಯೂಸ್: ನಿಮ್ಮ ಸೇವೆಗೆ ಬರಲಿದೆ ‘ಮೆಟ್ರೋಮಿತ್ರಾ’

ಬೆಂಗಳೂರಿನ ಮೆಟ್ರೋ ನಿಲ್ದಾಣಗಳ ಬಳಿ ಶೀಘ್ರವೇ ಮೀಟರ್‌ ಚಾಲಿತ ‘ಮೆಟ್ರೋಮಿತ್ರ’ ಆ್ಯಪ್‌ ಆಧಾರಿತ ಆಟೋರಿಕ್ಷಾ ಸೇವೆ ಶುರುವಾಗಲಿದೆ. ಇದರ ದರವೆಷ್ಟು? ಎನ್ನುವ ಮಾಹಿತಿ ಇಲ್ಲಿದೆ.

ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್​ನ್ಯೂಸ್: ನಿಮ್ಮ ಸೇವೆಗೆ ಬರಲಿದೆ ‘ಮೆಟ್ರೋಮಿತ್ರಾ’
ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)
Follow us
ರಮೇಶ್ ಬಿ. ಜವಳಗೇರಾ
|

Updated on: Jul 14, 2023 | 12:45 PM

ಬೆಂಗಳೂರು (ಜು.14): ಬೆಂಗಳೂರು ಮಹಾನಗರದ ಜನರ ಪ್ರಮುಖ ಸಂಚಾರಿ ಕೊಂಡಿಯಾಗಿರುವ ನಮ್ಮ ಮೆಟ್ರೋ (Namma Metro) ನಿಲ್ದಾಣಗಳ ಬಳಿ ಶೀಘ್ರವೇ ಮೀಟರ್‌ ಚಾಲಿತ ‘ಮೆಟ್ರೋಮಿತ್ರಾ’ (MetroMitra) ಆ್ಯಪ್‌ ಆಧಾರಿತ ಆಟೋರಿಕ್ಷಾ ಸೇವೆ ಆರಂಭವಾಗಲಿದೆ. ಈ ಬಗ್ಗೆ ಆಟೋ ರಿಕ್ಷಾ ಚಾಲಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ಅವರು ಮಾಹಿತಿ ನೀಡಿದ್ದಾರೆ. ಇದರಿಂದ ಬೆಂಗಳೂರಿಗರಿಗೆ ಮೆಟ್ರೋ ನಿಲ್ದಾಣಗಳ ಆರಂಭದಿಂದ ಕೊನೆವರೆಗೂ ಈ ‘ಮೆಟ್ರೋಮಿತ್ರ’ ಸೇವೆ ಲಭ್ಯವಾಗಲಿದೆ. ಅಲ್ಲದೇ ಮೆಟ್ರೋ ಇಳಿದ ತಕ್ಷಣ ಬೇರೋಂದು ಆಟೋಗೆ ಕಾಯುವುದು ಹಾಗೂ ಬುಕಿಂಗ್ ಮಾಡುತ್ತ ನಿಲ್ಲುವ ತಾಪತ್ರಯ ಇರುವುದಿಲ್ಲ.

ಮೆಟ್ರೋಮಿತ್ರಾ (Metro Mitra) ಎಂಬ ಆ್ಯಪ್‌ ಆಧಾರಿತ ಸೇವೆಗೆ ಪ್ರಾಯೋಗಿಕವಾಗಿ ಆ.15ರಂದು ಚಾಲನೆ ಸಿಗಲಿದ್ದು, ಓಪನ್-ಮೊಬಿಲಿಟಿ ನೆಟ್‌ವರ್ಕ್” ನಲ್ಲಿ ವಿನ್ಯಾಸಗೊಳಿಸಲಾದ ನಮ್ಮ ಯಾತ್ರಿಗಿಂತ ಭಿನ್ನವಾಗಿ, ಮೆಟ್ರೋ ಮಿತ್ರ ಡಿಜಿಟಲ್ ವಾಣಿಜ್ಯಕ್ಕಾಗಿ (ONDC) ಓಪನ್ ನೆಟ್‌ವರ್ಕ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇನ್ನು ಮೆಟ್ರೋ ಮಿತ್ರಕ್ಕೆ ಮೀಟರ್ ದರ ನಿಗದಿಪಡಿಸಲಾಗಿದೆ. ಮೊದಲ ಎರಡು ಕಿಲೋಮೀಟರ್‌ಗಳಿಗೆ 30 ರೂ. ಮತ್ತು ನಂತರದ ಪ್ರತಿ ಕಿಲೋಮೀಟರ್‌ಗೆ 15 ರೂ. ಜೊತೆಗೆ 10 ರೂ. ಇತರೆ ಚಾರ್ಜಸ್​ಗೆ ಎಂದು ದರ ನಿಗದಿಪಡಿಸಲಾಗಿದೆ.

ಗುರುವಾರ ಬಿ.ಪ್ಯಾಕ್‌ ಮತ್ತು ಡಬ್ಲ್ಯೂಆರ್‌ಐ ಇಂಡಿಯಾ ಸಂಸ್ಥೆಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಟೋ ರಿಕ್ಷಾ ಚಾಲಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ, ಆ.15 ರಂದು ಮೆಟ್ರೋಮಿತ್ರಾ ಎಂಬ ಆ್ಯಪ್‌ ಆಧಾರಿತ ಸೇವೆಯನ್ನು ಪ್ರಾಯೋಗಿಕವಾಗಿ ಚಾಲನೆ ನೀಡಲಾಗುವುದು. ಆಟೋ ಚಾಲಕರನ್ನು ಮತ್ತಷ್ಟು ವೃತ್ತಿಪರರಾಗಿ ರೂಪಿಸಲು ಸಂಸ್ಥೆಯಿಂದ ತರಬೇತಿ ನೀಡಲಾಗುತ್ತಿದೆ. ಇದರಡಿ ತಂತ್ರಜ್ಞಾನ ಆಧಾರಿತ ಸೇವೆ ಮತ್ತು ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ವೆಚ್ಚ ಸರಿದೂಗಿಸಲು ಮೀಟರ್‌ ದರ ಜತೆಗೆ ಹೆಚ್ಚುವರಿಯಾಗಿ 10 ರೂಪಾಯಿ ಶುಲ್ಕವನ್ನು ಪಡೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ