ಬೆಂಗಳೂರು: ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿ ಹಿನ್ನೆಲೆ ಮಾರ್ಚ್ 26ರಂದು ನಮ್ಮ ಮೆಟ್ರೋ(Namma Metro) ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ಎಂ.ಜಿ.ರಸ್ತೆಯಿಂದ ಬೈಯಪ್ಪನಹಳ್ಳಿವರೆಗೂ ಮಾ.26ರಂದು ರಾತ್ರಿ 9.30ರಿಂದ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗುವುದು ಎಂದು ಬಿಎಂಆರ್ಸಿಎಲ್(BMRCL) ಮಾಹಿತಿ ನೀಡಿದೆ.
ಎಂ.ಜಿ.ರಸ್ತೆ, ಕೆಂಗೇರಿ ನಡುವೆ ನಮ್ಮ ಮೆಟ್ರೋ ಸಂಚರಿಸಲಿದೆ. ಕೆಂಗೇರಿ-ಬೈಯಪ್ಪನಹಳ್ಳಿ ಕಡೆಗೆ 9 ಗಂಟೆಗೆ ಕೊನೇ ರೈಲು ಹೊರಡುತ್ತೆ. ಭಾನುವಾರದಿಂದ ನೇರಳೆ ಮಾರ್ಗದಲ್ಲಿ ಬೆಳಗ್ಗೆ 7ರಿಂದ ಆರಂಭವಾಗಲಿದೆ. ಹಸಿರು ಮಾರ್ಗದ ಸೇವೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಕುರಿತು ಬಿಎಂಆರ್ಸಿಎಲ್ನಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಮಾರ್ಚ್ 26ರ ಶನಿವಾರ ರಾತ್ರಿ 9.30 ಗಂಟೆಯಿಂದ, ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ನೇರಳೆ ಮಾರ್ಗದ ಎಂಜಿ ರಸ್ತೆ, ಮೆಟ್ರೋ ನಿಲ್ದಾಣದಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು ಮಾರ್ಚ್ 26ರ ಶನಿವಾರದಿಂದ ಭಾನುವಾರ ಬೆಳಿಗ್ಗೆ 7 ಗಂಟೆಯವರೆಗೆ ಸ್ಥಗಿತಗೊಳ್ಳಲಿದೆ. ಭಾನುವರ ಬೆಳಿಗ್ಗೆ 7 ಗಂಟೆಯ ನಂತ್ರ, ಎಂದಿನಂತೆ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಸೇವೆ ಎಂದಿನಂತೆ ಪುನಾರಂರಭಿಸಲಾಗುತ್ತಿದೆ ಎಂದು ತಿಳಿಸಿದೆ.
Published On - 5:47 pm, Fri, 25 March 22