Micro Labs: ಡೋಲೋ 650 ಖ್ಯಾತಿಯ ಮೈಕ್ರೋ ಲ್ಯಾಬ್ಸ್​ ಮೇಲೆ ಬೆಂಗಳೂರು ಸೇರಿ 40 ಕಡೆ ಐಟಿ ದಾಳಿ

ಮೈಕ್ರೋ ಲ್ಯಾಬ್ಸ್ ಸಿಎಂಡಿ ದಿಲೀಪ್ ಸುರಾನ, ಮೈಕ್ರೋ ಲ್ಯಾಬ್ಸ್ ನಿರ್ದೇಶಕ ಆನಂದ್ ಸುರಾನ ಮನೆ ಮೇಲೆ ದಾಳಿ ನಡೆಸಲಾಗಿದೆ.

Micro Labs: ಡೋಲೋ 650 ಖ್ಯಾತಿಯ ಮೈಕ್ರೋ ಲ್ಯಾಬ್ಸ್​ ಮೇಲೆ ಬೆಂಗಳೂರು ಸೇರಿ 40 ಕಡೆ ಐಟಿ ದಾಳಿ
ಮೈಕ್ರೋ ಲ್ಯಾಬ್ಸ್​
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 06, 2022 | 11:35 AM

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಡೋಲೋ-650 (Dolo 650) ತಯಾರಿಕಾ ಸಂಸ್ಥೆಯಾದ ಮೈಕ್ರೋ ಲ್ಯಾಬ್ಸ್ ಲಿಮಿಟೆಡ್ (Micro Labs Ltd) ಮೇಲೆ ಐಟಿ ದಾಳಿ ನಡೆದಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಚೇರಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಇಂದು ಬೆಳಗ್ಗೆ 7.45ರ ಸುಮಾರಿಗೆ 20ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಮೈಕ್ರೋ ಲ್ಯಾಬ್ಸ್ ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿದೆ.

ಏಕಕಾಲಕ್ಕೆ 40 ಕಡೆಗಳಲ್ಲಿ 200 ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ. ಆದಾಯ ತೆರಿಗೆ ವಂಚನೆ ಆರೋಪದಲ್ಲಿ ದಾಖಲೆಗಳ ಪರಿಶೀಲನೆ ನಡೆದಿದೆ. ಮೈಕ್ರೋ ಲ್ಯಾಬ್ಸ್ ಸಿಎಂಡಿ ದಿಲೀಪ್ ಸುರಾನ, ಮೈಕ್ರೋ ಲ್ಯಾಬ್ಸ್ ನಿರ್ದೇಶಕ ಆನಂದ್ ಸುರಾನ ಮನೆ ಮೇಲೆ ದಾಳಿ ನಡೆಸಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ! ಘೋಷಿತ ಆಸ್ತಿಯೇ 1,741 ಕೋಟಿ ರೂ.

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರೋ ಕಚೇರಿ ಮೇಲೆ ದಾಳಿ ನಡೆದಿದ್ದು, ಬೆಂಗಳೂರು ಸೇರಿ ದೇಶಾದ್ಯಂತ ಏಕಕಾಲದಲ್ಲಿ IT ಕಾರ್ಯಾಚರಣೆ ನಡೆಸಲಾಗುತ್ತಿದೆ. ಮೈಕ್ರೋ ಲ್ಯಾಬ್ಸ್ ಕಂಪನಿ ಫ್ಯಾಕ್ಟರಿ, ಕಚೇರಿ ಮೇಲೆ ಐಟಿ ದಾಳಿ ನಡೆಸಲಾಗಿದೆ. ಕಚೇರಿ ಹಾಗೂ ಸಿಬ್ಬಂದಿ ಮನೆಯ ಮೇಲೆ ಕೂಡ ಐಟಿ ಕಾರ್ಯಾಚರಣೆ ನಡೆಯುತ್ತಿದೆ. ಬೆಂಗಳೂರು ಮಾತ್ರವಲ್ಲದೆ ದೆಹಲಿ, ಸಿಕ್ಕಿಂ, ಪಂಜಾಬ್, ಗೋವಾ, ತಮಿಳುನಾಡು ಸೇರಿ ಏಕಕಾಲಕ್ಕೆ 40 ಕಡೆಗಳಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

Published On - 11:33 am, Wed, 6 July 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ