ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಡೋಲೋ-650 (Dolo 650) ತಯಾರಿಕಾ ಸಂಸ್ಥೆಯಾದ ಮೈಕ್ರೋ ಲ್ಯಾಬ್ಸ್ ಲಿಮಿಟೆಡ್ (Micro Labs Ltd) ಮೇಲೆ ಐಟಿ ದಾಳಿ ನಡೆದಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಚೇರಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಇಂದು ಬೆಳಗ್ಗೆ 7.45ರ ಸುಮಾರಿಗೆ 20ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಮೈಕ್ರೋ ಲ್ಯಾಬ್ಸ್ ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿದೆ.
ಏಕಕಾಲಕ್ಕೆ 40 ಕಡೆಗಳಲ್ಲಿ 200 ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ. ಆದಾಯ ತೆರಿಗೆ ವಂಚನೆ ಆರೋಪದಲ್ಲಿ ದಾಖಲೆಗಳ ಪರಿಶೀಲನೆ ನಡೆದಿದೆ. ಮೈಕ್ರೋ ಲ್ಯಾಬ್ಸ್ ಸಿಎಂಡಿ ದಿಲೀಪ್ ಸುರಾನ, ಮೈಕ್ರೋ ಲ್ಯಾಬ್ಸ್ ನಿರ್ದೇಶಕ ಆನಂದ್ ಸುರಾನ ಮನೆ ಮೇಲೆ ದಾಳಿ ನಡೆಸಲಾಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಕೆಜಿಎಫ್ ಬಾಬು ನಿವಾಸದ ಮೇಲೆ ಐಟಿ ದಾಳಿ! ಘೋಷಿತ ಆಸ್ತಿಯೇ 1,741 ಕೋಟಿ ರೂ.
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರೋ ಕಚೇರಿ ಮೇಲೆ ದಾಳಿ ನಡೆದಿದ್ದು, ಬೆಂಗಳೂರು ಸೇರಿ ದೇಶಾದ್ಯಂತ ಏಕಕಾಲದಲ್ಲಿ IT ಕಾರ್ಯಾಚರಣೆ ನಡೆಸಲಾಗುತ್ತಿದೆ. ಮೈಕ್ರೋ ಲ್ಯಾಬ್ಸ್ ಕಂಪನಿ ಫ್ಯಾಕ್ಟರಿ, ಕಚೇರಿ ಮೇಲೆ ಐಟಿ ದಾಳಿ ನಡೆಸಲಾಗಿದೆ. ಕಚೇರಿ ಹಾಗೂ ಸಿಬ್ಬಂದಿ ಮನೆಯ ಮೇಲೆ ಕೂಡ ಐಟಿ ಕಾರ್ಯಾಚರಣೆ ನಡೆಯುತ್ತಿದೆ. ಬೆಂಗಳೂರು ಮಾತ್ರವಲ್ಲದೆ ದೆಹಲಿ, ಸಿಕ್ಕಿಂ, ಪಂಜಾಬ್, ಗೋವಾ, ತಮಿಳುನಾಡು ಸೇರಿ ಏಕಕಾಲಕ್ಕೆ 40 ಕಡೆಗಳಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
Published On - 11:33 am, Wed, 6 July 22