ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ 425 ಕೋಟಿ ರೂಪಾಯಿ ದಾನ ನೀಡಿದ ದಂಪತಿಗಳು; ಮೆಚ್ಚುಗೆ ವ್ಯಕ್ತಪಡಿಸಿದ ಸಾರ್ವಜನಿಕರು

ಭಾರತೀಯ ವಿಜ್ಞಾನ ಮಂದಿರದಲ್ಲಿ (IISC) 800 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ 425 ಕೋಟಿ ರೂಪಾಯಿ ದಾನ ನೀಡಿದ್ದಾರೆ. ಸುಸ್ಮಿತಾ, ಸುಬ್ರತೊ ಬಾಗ್ಚಿ ಹಾಗೂ ರಾಧಾ, ಎನ್.ಎಸ್ ಪಾರ್ಥಸಾರಥಿ ದಂಪತಿಗಳು ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಆಸ್ಪತ್ರೆ ನಿರ್ಮಾಣ ಮಾಡಿದ್ದಾರೆ.

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ 425 ಕೋಟಿ ರೂಪಾಯಿ ದಾನ ನೀಡಿದ ದಂಪತಿಗಳು; ಮೆಚ್ಚುಗೆ ವ್ಯಕ್ತಪಡಿಸಿದ ಸಾರ್ವಜನಿಕರು
ಸುಸ್ಮಿತಾ, ಸುಬ್ರತೊ ಬಾಗ್ಚಿ ಹಾಗೂ ರಾಧಾ, ಎನ್.ಎಸ್ ಪಾರ್ಥಸಾರಥಿ
Follow us
TV9 Web
| Updated By: preethi shettigar

Updated on:Feb 15, 2022 | 11:35 AM

ಬೆಂಗಳೂರು:  ಬೇರೆಯವರ ಹಣವನ್ನು ದೋಚಿ ವಂಚನೆ ಮಾಡುವ ಈಗಿನ ಯುಗದಲ್ಲಿ ತಮ್ಮ ಸ್ವಂತ ಹಣದಲ್ಲಿ ಇತರರಿಗೆ ನೆರವಾಗಲು ನಾಲ್ಕು ಜನರ ಗುಂಪೊಂದು ಸಿದ್ಧವಾಗಿದೆ. ಭಾರತೀಯ ವಿಜ್ಞಾನ ಮಂದಿರದಲ್ಲಿ (IISC) 800 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ(Hospital) ನಿರ್ಮಾಣಕ್ಕೆ 425 ಕೋಟಿ ರೂಪಾಯಿ ದಾನ(Donation) ನೀಡಿದ್ದಾರೆ. ಸುಸ್ಮಿತಾ, ಸುಬ್ರತೊ ಬಾಗ್ಚಿ ಹಾಗೂ ರಾಧಾ, ಎನ್.ಎಸ್ ಪಾರ್ಥಸಾರಥಿ ದಂಪತಿಗಳು(Couples) ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಆಸ್ಪತ್ರೆ ನಿರ್ಮಾಣ ಮಾಡಿದ್ದಾರೆ.

ಸುಬ್ರತೊ ಬಾಗ್ಚಿ ಜನಿಸಿದ್ದು ಒಡಿಶಾದಲ್ಲಿ. ದೇಶದ ಪ್ರಖ್ಯಾತ ಉದ್ಯಮಿ ಹಾಗೂ ಪ್ರಸಿದ್ಧ ಐಟಿ ಕಂಪನಿ ಮೈಂಡ್‌ ಟ್ರೀ ಸಹ ಸಂಸ್ಥಾಪಕ. ತಂದೆ ಒಬ್ಬ ಸಾಮಾನ್ಯ ಸರ್ಕಾರಿ ನೌಕರ. ಸುಬ್ರತೊ ಸಹ ಪ್ರಾರಂಭದಲ್ಲಿ ಒಡಿಶಾ ಸರ್ಕಾರದ ಗುಮಾಸ್ತನಾಗಿದ್ದುಕೊಂಡು ನಂತರ ಖಾಸಗಿ ಕ್ಷೇತ್ರಕ್ಕೆ ಧುಮುಕಿದರು. ವಿಪ್ರೊ, ಲ್ಯೂಸೆಂಟ್‌ ಕಂಪನಿಗಳಲ್ಲಿ ದಶಕದ ಅನುಭವದ ನಂತರ, ಇದೀಗ ಐಐಎಸ್‌ಸಿಗೆ ದಾಣ ನೀಡಿರುವ ಎನ್‌ಎಸ್‌ ಪಾರ್ಥಸಾರಥಿ ಅವರೂ ಸೇರಿ 9 ಸ್ನೇಹಿತರ ಜತೆಗೆ ಮೈಂಡ್‌ ಟ್ರೀ ಸ್ಥಾಪಿಸಿದರು. ಪಾರ್ಥಸಾರಥಿ ಸಹ ವಿಪ್ರೊದಲ್ಲಿ ಬಾಗ್ಚಿ ಅವರ ಜತೆಗೆ ಕೆಲಸ ಮಾಡಿದ್ದರು.

ಐಐಎಸ್‌ಸಿ ಇತಿಹಾಸದಲ್ಲೆ ದೊಡ್ಡ ದಾನ ಇದು. ಸುಸ್ಮಿತಾ-ಸುಬ್ರತೊ ಬಾಗ್ಚಿ ಮತ್ತು ರಾಧಾ-ಎನ್.ಎಸ್. ಪಾರ್ಥಸಾರಥಿ ದಂಪತಿಗಳು ಒಟ್ಟಾಗಿ 425 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ. ಐಐಎಸ್‌ಸಿ ಸ್ಥಾಪನೆಯಾದ ನಂತರ ಇದೊಂದೇ ದೊಡ್ಡ ಮೊತ್ತದ ಖಾಸಗಿ ದೇಣಿಗೆ. ದೇಣಿಗೆ ನೀಡಿದವರ ಹೆಸರಿನಲ್ಲೆ, ನೂತನ ಆಸ್ಪತ್ರೆ ನಿರ್ಮಾಣ ಆಗಲಿದ್ದು, “ಬಾಗ್ಚಿ – ಪಾರ್ಥಸಾರಥಿ ಆಸ್ಪತ್ರೆ” ಎಂದು ನಾಮಕರಣ ಮಾಡಲಾಗುತ್ತದೆ. ಜೂನ್ ತಿಂಗಳಲ್ಲಿ ಆಸ್ಪತ್ರೆ ಕಾಮಗಾರಿ ಆರಂಭವಾಗಲಿದ್ದು, 2024ಕ್ಕೆ ಪೂರ್ಣಗೊಳ್ಳಲಿದೆ.

ಆಸ್ಪತ್ರೆ ವಿಶೇಷತೆ:

ಬಾಗ್ಚಿ-ಪಾರ್ಥಸಾರಥಿ ಆಸ್ಪತ್ರೆಯು ರೋಗಪರೀಕ್ಷೆ, ಚಿಕಿತ್ಸೆ ಮತ್ತು ಸಂಶೋಧನೆಗೆ ಸುಧಾರಿತ ಸೌಲಭ್ಯಗಳನ್ನು ಒಳಗೊಂಡಿರಲಿದೆ. ಹೃದ್ರೋಗ, ಕ್ಯಾನ್ಸರ್ ಚಿಕಿತ್ಸೆ, ನರವಿಜ್ಞಾನ, ಎಂಡೋಕ್ರಿನಾಲಜಿ, ಗ್ಯಾಸ್ಟ್ರೋಎಂಟರಾಲಜಿ, ನೆಪ್ರಾಲಜಿ, ಯುರಾಲಜಿ, ಚರ್ಮರೋಗ ಮತ್ತು ಪ್ಲಾಸ್ಟಿಕ್ ಸರ್ಜರಿ, ಅಂಗಾಂಗ ಕಸಿ, ರೊಬೋಟಿಕ್ ಶಸಚಿಕಿತ್ಸೆ, ನೇತ್ರವಿಜ್ಞಾನ ಸೇರಿ ಹಲವು ವಿಷಯ ವಿಭಾಗಗಳನ್ನು ಹೊಂದಿರಲಿದೆ.

ಎಂಡಿ, ಎಂಎಸ್ ಮತ್ತು ಡಿಎಂ, ಎಂಸಿಎಚ್ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಅವರ ತರಗತಿ ಮತ್ತು ಪ್ರಯೋಗಾಲಯ ತರಬೇತಿಯೊಂದಿಗೆ ಆಸ್ಪತ್ರೆಯ ಸೂಕ್ತ ವಿಭಾಗಗಳ ತರಬೇತಿಯನ್ನು ನೀಡಲಾಗುತ್ತದೆ. ಸಮಗ್ರ ವಿದ್ಯುನ್ಮಾನ ವೈದ್ಯಕೀಯ ದಾಖಲೆ ವ್ಯವಸ್ಥೆ ಮತ್ತು ಹ್ಯಾಪ್ಟಿಕ್ಸ್ ಇಂಟೇಸ್‌ಗಳು, ಸಮಗ್ರ ಟೆಲಿಮೆಡಿಸಿನ್ ವ್ಯವಸ್ಥೆಯೊಂದಿಗೆ ಡಿಜಿಟಲ್ ತಂತ್ರಜ್ಞಾನ ಮತ್ತು ಪರಿಹಾರಗಳನ್ನು ಒಳಗೊಂಡಿರಲಿದೆ.

ಇದನ್ನೂ ಓದಿ:

ಪಾಕಿಸ್ತಾನದಲ್ಲಿ 3 ಹೆಣ್ಣುಮಕ್ಕಳ ತಾಯಿಯ ತಲೆಗೆ ಮೊಳೆ ಹೊಡೆದ ಚಿಕಿತ್ಸಕ; ಇಕ್ಕಳದಿಂದ ತೆಗೆಯಲು ಯತ್ನಿಸಿ ಆಸ್ಪತ್ರೆ ಸೇರಿದ ಗರ್ಭಿಣಿ

ಮತ್ತೆ ಮಾನವೀಯ ಕಾರ್ಯಗಳ ಮೂಲಕ ಸುದ್ದಿಯಾದ ಸೋನು; ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ಸಾಗಿಸಿದ ವಿಡಿಯೋ ವೈರಲ್ 

Published On - 11:33 am, Tue, 15 February 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್