AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೆಂಟ್, ನೀರು ಆಯ್ತು ಈಗ ಹಾಸ್ಪಿಟಲ್ ಬಿಲ್ ಸರದಿ: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರವೂ ದುಬಾರಿ

ಕನಿಷ್ಠ ವೇತನವನ್ನು ಶೇ.60ರಷ್ಟು ಹೆಚ್ಚಿಸಿದ ರಾಜ್ಯ ಸರ್ಕಾರದ ನಿರ್ಧಾರದಿಂದ ಖಾಸಗಿ ಆಸ್ಪತ್ರೆಗಳ ನಿರ್ವಹಣಾ ವೆಚ್ಚ ಗಣನೀಯವಾಗಿ ಹೆಚ್ಚಿದೆ. ನರ್ಸ್‌ಗಳು, ಸಿಬ್ಬಂದಿಯ ವೇತನ ಏರಿಕೆಯಿಂದಾಗಿ ಆರ್ಥಿಕ ಹೊರೆ ತಗುಲಿದೆ. ಈಗಾಗಲೇ ವಿದ್ಯುತ್, ನೀರಿನ ದರ ಹೆಚ್ಚಿರುವ ಹಿನ್ನೆಲೆಯಲ್ಲಿ, ಸರ್ಕಾರ ಕನಿಷ್ಠ ವೇತನ ಆದೇಶವನ್ನು ಮರುಪರಿಶೀಲಿಸದಿದ್ದರೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಿಕಿತ್ಸಾ ದರ ಹೆಚ್ಚಳ ಅನಿವಾರ್ಯ ಎಂದು ಖಾಸಗಿ ಆಸ್ಪತ್ರೆಗಳ ಒಕ್ಕೂಟ ಒತ್ತಾಯಿಸಿದೆ.

ಕರೆಂಟ್, ನೀರು ಆಯ್ತು ಈಗ ಹಾಸ್ಪಿಟಲ್ ಬಿಲ್ ಸರದಿ: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರವೂ ದುಬಾರಿ
ಪ್ರಾತಿನಿಧಿಕ ಚಿತ್ರImage Credit source: Getty images
ವಿನಯ್​ ಕಾಶಪ್ಪನವರ್​
| Edited By: |

Updated on: Jul 01, 2026 | 10:36 PM

Share

ಬೆಂಗಳೂರು, ಜುಲೈ 01: ಕರೆಂಟ್, ನೀರಿನ ದರ ಏರಿಕೆ ಮಧ್ಯೆ ಇದೀಗ ಖಾಸಗಿ ಆಸ್ಪತ್ರೆಗಳ (Private Hospitals) ಚಿಕಿತ್ಸಾ ದರವು ಏರಿಕೆಯಾಗುವ ಸಾಧ್ಯತೆ ಎದುರಾಗಿದೆ. ಸರ್ಕಾರ ಕನಿಷ್ಠ ಕಾರ್ಮಿಕ ವೇತನವನ್ನು ಶೇ.60ರಷ್ಟು ಹೆಚ್ಚಿಸಿದ ಹಿನ್ನೆಲೆ, ಆಸ್ಪತ್ರೆಗಳ ನಿರ್ವಹಣಾ ವೆಚ್ಚ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಅಂತ ಖಾಸಗಿ ಆಸ್ಪತ್ರೆಗಳ ಒಕ್ಕೂಟ ಚಿಕಿತ್ಸಾ ದರ ಏರಿಕೆಗೆ ಮುಂದಾಗಿದೆ.

ಕನಿಷ್ಠ ವೇತನ ಹೆಚ್ಚಳ: ಖಾಸಗಿ ಆಸ್ಪತ್ರೆಗಳಿಗೆ ಆರ್ಥಿಕ ಹೊರೆ 

ರಾಜಧಾನಿಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಲಕ್ಷಣಗಳು ಕಾಣಿಸುತ್ತಿವೆ. ಕನಿಷ್ಠ ವೇತನವನ್ನು ಸರ್ಕಾರ ಶೇ.60ರಷ್ಟು ಹೆಚ್ಚಿಸಿರುವ ರಾಜ್ಯ ಸರ್ಕಾರದ ನಿರ್ಧಾರ ಖಾಸಗಿ ಆಸ್ಪತ್ರೆಗಳ ಮೇಲೆ ಭಾರೀ ಆರ್ಥಿಕ ಹೊರೆ ತಂದಿದೆ ಎಂದು ಖಾಸಗಿ ಆಸ್ಪತ್ರೆಗಳ ಒಕ್ಕೂಟ ಆರೋಪಿಸಿದೆ.

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯ ವೈದ್ಯರ ಕಳ್ಳಾಟಕ್ಕೆ ಬ್ರೇಕ್: ಇನ್ಮುಂದೆ ಸಿಬ್ಬಂದಿ ಹಾಜರತಿಗೆ ವೇತನ ಲಿಂಕ್!

ಸರ್ಕಾರ ಹೊರಡಿಸಿರುವ ಹೊಸ ಅಧಿಸೂಚನೆಯ ಪ್ರಕಾರ ಬೆಂಗಳೂರಿನಲ್ಲಿ ಕಾರ್ಮಿಕರಿಗೆ ತಿಂಗಳಿಗೆ ಕನಿಷ್ಟ 23,376 ರೂಪಾಯಿ ವೇತನ ನಿಗದಿಯಾಗಿದೆ. ಇದರಿಂದ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ನರ್ಸ್‌ಗಳು, ಸಪೋರ್ಟ್ ಸ್ಟಾಫ್, ಜೂನಿಯರ್ ಮೆಡಿಕಲ್ ಸಿಬ್ಬಂದಿ ಸೇರಿದಂತೆ ಬಹುತೇಕ ಉದ್ಯೋಗಿಗಳ ವೇತನದಲ್ಲಿ ಏರಿಕೆಯಾಗಲಿದ್ದು, ಆಸ್ಪತ್ರೆಗಳ ನಿರ್ವಹಣಾ ವೆಚ್ಚ ಗಣನೀಯವಾಗಿ ಹೆಚ್ಚಲಿದೆ ಅಂತ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳು ಆಕ್ರೋಶ ವ್ಯಕ್ತಪಡಿಸಿದೆ.

ಖಾಸಗಿ ಆಸ್ಪತ್ರೆಗಳ ಒಕ್ಕೂಟದ ಅಧ್ಯಕ್ಷ ಡಾ ಶೋಭಾ ಪ್ರಕಾಶ್​ ಹೇಳಿದ್ದಿಷ್ಟು

ಈಗಾಗಲೇ ವಿದ್ಯುತ್ ದರ, ನೀರಿನ ದರ ಸೇರಿದಂತೆ ವಿವಿಧ ಕಾರ್ಯಾಚರಣಾ ವೆಚ್ಚಗಳು ಹೆಚ್ಚಿರುವ ಪರಿಸ್ಥಿತಿಯಲ್ಲಿ, ಏಕಾಏಕಿ ಕನಿಷ್ಠ ವೇತನವನ್ನು ಶೇ.60ರಷ್ಟು ಹೆಚ್ಚಿಸಿರುವುದು ಮಧ್ಯಮ ಮತ್ತು ಸಣ್ಣ ಆಸ್ಪತ್ರೆಗಳ ನಿರ್ವಹಣೆ ಸವಾಲಾಗಿದೆ. ಹೀಗಾಗಿ ಸರ್ಕಾರ ಕನಿಷ್ಠ ವೇತನದ ಆದೇಶವನ್ನು ಮರುಪರಿಶೀಲಿಸಿ ತಿದ್ದುಪಡಿ ಮಾಡಬೇಕು. ಇಲ್ಲದಿದ್ದರೆ ಚಿಕಿತ್ಸಾ ದರ ಹೆಚ್ಚಿಸುವುದು ಆಸ್ಪತ್ರೆಗಳಲ್ಲಿ ಅನಿವಾರ್ಯವಾಗಲಿದೆ ಎಂದು ಖಾಸಗಿ ಆಸ್ಪತ್ರೆಗಳ ಒಕ್ಕೂಟದ ಅಧ್ಯಕ್ಷ ಡಾ ಶೋಭಾ ಪ್ರಕಾಶ್​ ಹೇಳಿದ್ದಾರೆ.

ಇದನ್ನೂ ಓದಿ: ಚಿಕಿತ್ಸೆ ಪಡೆದ್ರೂ ಮಕ್ಕಳಾಗಿಲ್ಲ: ರಾಯಚೂರು ಖಾಸಗಿ ಐವಿಎಫ್ ಮಾಫಿಯಾ ಬಯಲು

ಇನ್ನೊಂದೆಡೆ, ಆಸ್ಪತ್ರೆಗಳಷ್ಟೇ ಅಲ್ಲದೆ ವಿವಿಧ ಕೈಗಾರಿಕಾ ವಲಯ ಕೂಡ ಕನಿಷ್ಠ ವೇತನ ಹೆಚ್ಚಳದ ಆದೇಶವನ್ನು ಮರುಪರಿಶೀಲಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದು, ಹೋಟೆಲ್ ಉದ್ಯಮವು ಇದರ ವಿರುದ್ಧ ಕೋರ್ಟ್ ಮೊರೆ ಕೂಡ ಹೋಗಿದೆ. ಒಟ್ಟಿನಲ್ಲಿ ಕಾರ್ಮಿಕರ ಕನಿಷ್ಠ ವೇತನ ಏರಿಕೆಗೆ ಎಲ್ಲ ವಲಯಗಳಿಂದ ವ್ಯಾಪಕರ ವಿರೋಧ ಶುರುವಾಗಿದ್ದು, ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ