ಪ್ರತಿಮಾ ಹತ್ಯೆ ಪ್ರಕರಣ: ಕೆಲಸದಿಂದ ತೆಗೆಯಬೇಡಿ ಎಂದು ಕಾಲು ಹಿಡಿದುಕೊಳ್ಳಲು ಬಂದವನೇ ಗಣಿ ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರಾಣ ತೆಗೆದ

Pratima Murder Case: ಬೆಂಗಳೂರಿನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಮಹತ್ವದ ತಿರುವು ಸಿಕ್ಕಿದೆ. ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಳೇ ಡ್ರೈವರ್ ಕಿರಣ್ ಎಂಬಾತ ಪ್ರತಿಮಾ ಅವರನ್ನು ಕೊಲೆ ಮಾಡಿದ್ದಾನೆ ಎಂಬುದು ಬಹಿರಂಗವಾಗಿದೆ. ಹಾಗಾದ್ರೆ, ಕಿರಣ್​ ಪ್ರತಿಮಾರನ್ನ ಕೊಲೆ ಮಾಡಿದ್ಯಾಕೆ? ಅದು ಹೇಗೆ ಕೊಲೆ ಮಾಡಿದ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಪ್ರತಿಮಾ ಹತ್ಯೆ ಪ್ರಕರಣ: ಕೆಲಸದಿಂದ ತೆಗೆಯಬೇಡಿ ಎಂದು ಕಾಲು ಹಿಡಿದುಕೊಳ್ಳಲು ಬಂದವನೇ ಗಣಿ ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರಾಣ ತೆಗೆದ
ಪ್ರತಿಮಾ, ಕಿರಣ್ (ಕೊಲೆ ಆರೋಪಿ)
Follow us
Prajwal Kumar NY
| Updated By: Digi Tech Desk

Updated on:Nov 06, 2023 | 12:07 PM

ಬೆಂಗಳೂರು, (ನವೆಂಬರ್ 06): ಬೆಂಗಳೂರಿನಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣಕ್ಕೆ(officer Pratima Murder Case) ಸಂಬಂಧಿಸಿದಂತೆ  ಆರೋಪಿ ಸಿಕ್ಕಿಬಿದ್ದಿದ್ದಾನೆ. ಪ್ರತಿಮಾ ಅವರ ಮಾಜಿ ಕಾರು ಚಾಲಕ (Driver) ಕಿರಣ್ ಎನ್ನುವಾತನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಕೆಲ ಸ್ಫೋಟಕ ಅಂಶಗಳು ಬೆಳಕಿಗೆ ಬಂದಿವೆ. ಹೌದು…ಕೆಲಸದಿಂದ ತೆಗೆಯಬೇಡಿ ಎಂದು ಮನೆಗೆ ಬಂದು ಕಾಲು ಹಿಡಿದಿದ್ದ ಕಿರಣ್​, ಬಳಿಕ ಪ್ರತಿಮಾರನ್ನು ಭೀಕರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಎನ್ನುವ ಅಂಶ ಬಹಿರಂಗವಾಗಿದೆ.

ಕಾಲು ಹಿಡಿಯಲು ಬಂದು ಪ್ರಾಣ ತೆಗೆದ

ಕೆಲಸದಿಂದ ತೆಗೆದಿದ್ದಕ್ಕೆ ಕೋಪಗೊಂಡಿದ್ದ ಕಿರಣ್​, ಶನಿವಾರ (ಪ್ರತಿಮಾ ಕೊಲೆಯಾದ ದಿನ ನ.6) ಪ್ರತಿಮಾ ಅವರ ಮನೆಗೆ ತೆರಳಿದ್ದ ಕಿರಣ್, ತಪ್ಪಾಗಿದೆ ಕೆಲಸದಿಂದ ತೆಗೆಯಬೇಡಿ ಎಂದು ಕೇಳಿಕೊಂಡಿದ್ದಾನೆ. ಅಲ್ಲದೇ ಪ್ರತಿಮಾರ ಕಾಲಿಗೆ ಬಿದ್ದು ಪರಿ ಪರಿಯಾಗಿ ಬೇಡಿಕೊಂಡಿದ್ದಾನೆ. ಆದರೂ ಸಹ ಪ್ರತಿಮಾ ಒಪ್ಪಿರಲಿಲ್ಲ. ಇದರಿಂದ ಮತ್ತಷ್ಟು ಕಿರಣ್​ನ ಕೋಪ ಮತ್ತಷ್ಟು ನೆತ್ತಿಗೇರಿದ್ದು, ವೈರ್ ಮಾದರಿಯ ವಸ್ತುದಿಂದ ಪ್ರತಿಮಾ ಕುತ್ತಿಗೆಗೆ ಬಿಗಿದಿದ್ದಾನೆ. ಬಳಿಕ ಪ್ರತಿಮಾ ನೆಲಕ್ಕೆ ಬಿದ್ದ ಮೇಲೆ ಚಾಕುವಿನಿಂದ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಈ ಕೃತ್ಯ ಎಸಗಿದ ನಂತರ ಚಾಮರಾಜನಗರದತ್ತ ಪರಾರಿಯಾದ್ದ. ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಕಿರಣ್​ನ ಫೋನ್ ಸಿಗ್ನಲ್ ಆಧರಿಸಿ ಕೊನೆಗೆ ಮಹದೇಶ್ವರಬೆಟ್ಟದಲ್ಲಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಕೇಸ್‌: ಓರ್ವ ಪೊಲೀಸ್ ವಶಕ್ಕೆ

ಕಿರಣ್​ನನ್ನು ಕೆಲಸದಿಂದ ತೆಗೆದಿದ್ಯಾಕೆ?

ಮೊಬೈಲ್ ಲೋಕೆಷನ್ ಆಧರಿಸಿ ಕೊಲೆ ಆರೋಪಿ ಕಿರಣ್​ನ್ನು ಸುಬ್ರಮಣ್ಯ ಪುರ ಪೊಲೀಸರು, ಮಹದೇಶ್ವರಬೆಟ್ಟದಲ್ಲಿ ಹಿಡಿದು ಸದ್ಯ ಆತನನ್ನು ಬೆಂಗಳೂರಿಗೆ ಕರೆ ತಂದಿದ್ದಾರೆ. ಕಳೆದ ಐದು ವರ್ಷಗಳಿಂದ ಕಿರಣ್ ಕಾಂಟ್ರಾಕ್ಟ್ ಬೇಸಸ್ ಮೇಲೆ ಬೆಂಗಳೂರಿನ ಗಣಿ-ಭೂವಿಜ್ಞಾನ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ.ಆದ್ರೆ, ಹಲವು ವರ್ಷಗಳಿಂದ ಇಲಾಖೆಯ ಕಾರು ಚಾಲಕನಾಗಿದ್ದ ಕಿರಣ್​ ನನ್ನು ಪ್ರತಿಮಾ ಅವರೇ ಕೆಲಸದಿಂದ ತೆಗೆದು ಹಾಕಿದ್ದರು. ಯಾಕಂದರೆ ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ರೇಡ್​ ಹೋಗುವ ಮಾಹಿತಿಯನ್ನು ಲೀಕ್ ಮಾಡುತ್ತಿದ್ದ. ಈ ಕಾರಣಕ್ಕೆ ಪ್ರತಿಮಾ ಅವರು ಕಿರಣ್​ಗೆ ಎಚ್ಚರಿಕೆ ನೀಡಿದ್ದರು. ಹಾಗೇ ಕೆಲ ದಿನಗಳ ಹಿಂದೆ ಒಂದು ಅಕ್ಸಿಡೆಂಟ್ ಮಾಡಿದ್ದ. ಈ ಕಾರಣಕ್ಕೆ ಪ್ರತಿಮಾ ಅವರು ಕಾರು ಚಾಲಕ ಕಿರಣ್​ನನ್ನು 10 ದಿನಗಳ ಹಿಂದೆ ಅಷ್ಟೇ ಕೆಲಸದಿಂದ ತೆಗೆದು ಹಾಕಿದ್ದರು. ಈ ಕೋಪದಿಂದಲೇ ಕಿರಣ್​ ಪ್ರತಿಮಾರನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಪೊಲೀಸ್ ಆಯುಕ್ತ ಬಿ ದಯಾನಂದ ಹೇಳಿದ್ದೇನು

ಬೆಂಗಳೂರು, (ನವೆಂಬರ್ 06): ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣ ತನಿಖೆ ದಕ್ಷಿಣ ವಿಭಾಗದ ಡಿಸಿಪಿ ನೇತೃತ್ವದಲ್ಲಿ ನಡೆಯುತ್ತಿದ್ದು, ಈಗ ಓರ್ವ ಆರೋಪಿ ಕಿರಣ್​ ಎನ್ನುವಾತನ್ನು ವಶಕ್ಕೆ ಪಡೆಯಲಾಗಿದೆ. ಮಹದೇಶ್ವರಬೆಟ್ಟದಲ್ಲಿ ಕಿರಣ್​ನನ್ನು ವಶಕ್ಕೆ ಪಡೆಯಲಾಗಿದೆ.ಈ ಕಿರಣ್ ನಾಲ್ಕು ವರ್ಷದಿಂದ ಪ್ರತಿಮಾ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆದ್ರೆ, 10 ದಿನದ ಹಿಂದೆ ಕಿರಣ್​​ನನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ಸದ್ಯಕ್ಕೆ ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಮಾಹಿತಿ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:43 am, Mon, 6 November 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್