HDK ಹಸಿ ಸುಳ್ಳು ಹೇಳುವುದರ ಮೂಲಕ ಹತಾಶ ಸ್ಥಿತಿಗೆ ತಲುಪಿದ್ದಾರೆ, ಅವರು ನನ್ನ ಮೇಲೆ ಮಾಡಿದ ಆರೋಪ ಸಾಬೀತುಪಡಿಸಬೇಕು -ಆರಗ ಜ್ಞಾನೇಂದ್ರ

‘ಆರಗ ಮನೆಯಲ್ಲಿ ಹಣ ಎಣಿಸುತ್ತಿರುವ ಫೋಟೋ ವೈರಲ್ ಆಗಿದೆ’ ಎಂಬ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.

HDK ಹಸಿ ಸುಳ್ಳು ಹೇಳುವುದರ ಮೂಲಕ ಹತಾಶ ಸ್ಥಿತಿಗೆ ತಲುಪಿದ್ದಾರೆ, ಅವರು ನನ್ನ ಮೇಲೆ ಮಾಡಿದ ಆರೋಪ ಸಾಬೀತುಪಡಿಸಬೇಕು -ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us
TV9 Web
| Updated By: ಆಯೇಷಾ ಬಾನು

Updated on:Jan 09, 2023 | 10:21 AM

ಬೆಂಗಳೂರು: ‘ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಮನೆಯಲ್ಲಿ ಹಣ ಎಣಿಸುತ್ತಿರುವ ಫೋಟೋ ವೈರಲ್ ಆಗಿದೆ’ ಎಂಬ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಹೇಳಿಕೆಗೆ ಮಾಧ್ಯಮ ಪ್ರಕಟಣೆ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ. ಸ್ಯಾಂಟ್ರೋ ರವಿ(Santro Ravi) ನನ್ನ ನಿವಾಸದಲ್ಲಿ ಹಣ ಎಣಿಸಿದ್ದಾರೆಂಬುದು ಸುಳ್ಳು. HDK ಹಸಿ ಸುಳ್ಳು ಹೇಳುವುದರ ಮೂಲಕ ಹತಾಶ ಸ್ಥಿತಿಗೆ ತಲುಪಿದ್ದಾರೆ. ಕುಮಾರಸ್ವಾಮಿ ನನ್ನ ಮೇಲೆ ಮಾಡಿದ ಆರೋಪ ಸಾಬೀತುಪಡಿಸಬೇಕು ಎಂದು ತಿರುಗೇಟು ಕೊಟ್ಟಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ. ಕುಮಾರಸ್ವಾಮಿಯವರು, ಅತ್ಯಂತ ಬೇಜವಾಬ್ದಾರಿಯಿಂದ ಸ್ಯಾಂಟ್ರೋ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದ ಎಂಬ ಹಸಿ ಸುಳ್ಳನ್ನು ಹೇಳುವುದರ ಮೂಲಕ ಎಷ್ಟರ ಮಟ್ಟಿಗೆ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆ ಎಂದು ವೇದ್ಯವಾಗುತ್ತದೆ. ಕುಮಾರಸ್ವಾಮಿಯವರು ನನ್ನ ಮೇಲೆ ಮಾಡಿದ ಆಪಾದನೆಯನ್ನು ಸಾಬೀತು ಪಡಿಸಬೇಕು. ಸಾಂಟ್ರೋ ರವಿಯ ಹಿನ್ನೆಲೆಯ ಬಗ್ಗೆ ತನಿಖೆ ನಡೆಸಿ ವಿಚಾರಣೆ ಮಾಡಿ ಎಂದು ಪೊಲೀಸರಿಗೆ ತಿಳಿಸಿದ್ದೇನೆ. ನನ್ನ ಮನೆಯಲ್ಲಿ ಆತ ಹಣದ ಗಂಟನ್ನು ಬಿಚ್ಚಿದ್ದಾನೆ ಎಂದು ಕುಮಾರಸ್ವಾಮಿ ಸತ್ಯಕ್ಕೆ ಅಪಚಾರವಾಗುವಂತಹ ಆಪಾದನೆ ಮಾಡಿದ್ದಾರೆ. ನನ್ನನ್ನು ಯಾವ ಕಾರಣದಿಂದ ತೇಜೋವಧೆ ಮಾಡುತ್ತಿದ್ದಾರೆ, ಎಂದು ತಿಳಿದಿಲ್ಲ. ಇದರಿಂದ ಅವರಿಗೆ ಯಾವ ರೀತಿ ಲಾಭವಾಗುತ್ತದೆ ಗೊತ್ತಿಲ್ಲ. ಗೃಹ ಸಚಿವನಾದ ನನ್ನನ್ನು ಸಮಾಜದ ಕಟ್ಟಕಡೆಯ ಜನರೂ ಒಳಗೊಂಡಂತೆ ದಿನನಿತ್ಯ ನೂರಾರು ಮಂದಿ ಭೇಟಿ ಮಾಡುತ್ತಾರೆ. ಪ್ರತಿಯೊಬ್ಬರ ಹಿನ್ನೆಲೆಯನ್ನೂ ಸೋಸಿ ನೋಡಲಾಗುವುದಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ: Santro Ravi: ಸ್ಯಾಂಟ್ರೋ ರವಿ ಸ್ಟೋರಿಯಲ್ಲಿ ಬಿಗ್ ಟ್ವಿಸ್ಟ್, ಬೆಂಗಳೂರು ಟು ಮೈಸೂರ್ ಕಹಾನಿ ಇಲ್ಲಿದೆ

ಸ್ಯಾಂಟ್ರೋ ರವಿ ಕಂತೆ-ಕಂತೆ ಹಣ ಲೆಕ್ಕ ಹಾಕಿರುವುದು ಗೃಹ ಸಚಿವರ ಮನೆಯಲ್ಲಿ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಬೀದರ್: ಸ್ಯಾಂಟ್ರೋ ರವಿ(Santro Ravi) ಜೊತೆಗೆ ಸಚಿವರು, ಬಿಜೆಪಿ (BJP) ನಾಯಕರು ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳ ವೈರಲ್ ಆಗುತ್ತಿವೆ. ಅದರಲ್ಲೂ ಮುಖ್ಯವಾಗಿ ಕಂತೆ-ಕಂತೆ ನೋಟುಗಳ ಜೊತೆ ಸ್ಯಾಂಟ್ರೋ ರವಿ ಫೋಟೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಆರಗ ಮನೆಯಲ್ಲಿ ಹಣದ ಲೆಕ್ಕ ಹಾಕುತ್ತಿರುವ ಫೋಟೋ ಎಂದು ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ(HD Kumaraswamy) ಬೀದರ್​ನಲ್ಲಿ ಹೊಸ ಬಾಂಬ್ ಸಿಡಿಸಿದ್ದರು.

ಬೀದರ್​ ಜಿಲ್ಲೆ ಬಸವಕಲ್ಯಾಣದಲ್ಲಿ ಜನವರಿ 08ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್​.ಡಿ.ಕುಮಾರಸ್ವಾಮಿ, ಗೃಹ ಸಚಿವರ ಮನೆಯಲ್ಲಿ ಹಣದ ಲೆಕ್ಕ ಹಾಕಿರುವ ಫೋಟೋ ವೈರಲ್ ಆಗಿದೆ. ಆರಗ ಮನೆಯಲ್ಲಿ ಲೆಕ್ಕ ಹಾಕಿದ ಹಣದ ಫೋಟೋ ತೆಗೆದವರು ಯಾರು? ಎಸಿಪಿ ವರ್ಗಾವಣೆ ಮಾಡಿಸಲು 15 ಲಕ್ಷ ಹಣ ಎಣಿಸುತ್ತಿರುವುದಂತೆ. ಇದು ಗೃಹಸಚಿವರ ನಿವಾಸದಲ್ಲೇ ನಡೆದಿದೆ, ಈ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:15 am, Mon, 9 January 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್