ಬೆಂಗಳೂರು: ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರ ತಂದೆ ಭೈರತಿ ಆಂಜಿನಪ್ಪ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಭೈರತಿ ಆಂಜಿನಪ್ಪ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಚಿವ ಭೈರತಿ ಬಸವರಾಜ್ ಗೆ ಸಾಂತ್ವನ ಹೇಳಿದ್ದಾರೆ.
ಸಂಜೆ 6 ಗಂಟೆಗೆ ಭೈರತಿ ಬಸವರಾಜ್ ಅವರ ಸ್ವಂತ ಊರು ಭೈರತಿಯಲ್ಲಿ ಭೈರತಿ ಆಂಜಿನಪ್ಪನವರ ಅಂತಿಮ ಸಂಸ್ಕಾರ ನೆರವೇರಲಿದೆ. ಭೈರತಿ ಆಂಜಿನಪ್ಪನವರು 5 ಗಂಡು ಮಕ್ಕಳು ಮತ್ತು ಮೂವರು ಹೆಣ್ಣು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ