ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್​ಗೆ ಪಿತೃವಿಯೋಗ

ಸಿಎಂ ಬಸವರಾಜ ಬೊಮ್ಮಾಯಿ ಭೈರತಿ ಆಂಜಿನಪ್ಪ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಚಿವ ಭೈರತಿ ಬಸವರಾಜ್ ಗೆ ಸಾಂತ್ವನ ಹೇಳಿದ್ದಾರೆ.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್​ಗೆ ಪಿತೃವಿಯೋಗ
ಭೈರತಿ ಆಂಜಿನಪ್ಪ
Edited By:

Updated on: Aug 14, 2022 | 3:56 PM

ಬೆಂಗಳೂರು: ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್​ ಅವರ ತಂದೆ ಭೈರತಿ ಆಂಜಿನಪ್ಪ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಭೈರತಿ ಆಂಜಿನಪ್ಪ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಚಿವ ಭೈರತಿ ಬಸವರಾಜ್ ಗೆ ಸಾಂತ್ವನ ಹೇಳಿದ್ದಾರೆ.

ಸಂಜೆ 6 ಗಂಟೆಗೆ ಭೈರತಿ ಬಸವರಾಜ್​ ಅವರ ಸ್ವಂತ ಊರು ಭೈರತಿಯಲ್ಲಿ ಭೈರತಿ ಆಂಜಿನಪ್ಪನವರ ಅಂತಿಮ ಸಂಸ್ಕಾರ ನೆರವೇರಲಿದೆ. ಭೈರತಿ ಆಂಜಿನಪ್ಪನವರು 5 ಗಂಡು ಮಕ್ಕಳು ಮತ್ತು ಮೂವರು ಹೆಣ್ಣು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:53 pm, Sun, 14 August 22