ಕರ್ನಾಟಕದಲ್ಲಿ ಕೊರೋನಾ ಉಪತಳಿ ಜೆಎನ್​.1 ಸೋಂಕು ದೃಢ, ನಾಳೆಯಿಂದ ನಿತ್ಯ 5 ಸಾವಿರ ಟೆಸ್ಟಿಂಗ್

| Updated By: ರಮೇಶ್ ಬಿ. ಜವಳಗೇರಾ

Updated on: Dec 26, 2023 | 2:59 PM

ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಿದಾಡುತ್ತಿದ್ದ ಕೊರೊನ ಉಪತಳಿ ಜೆಎನ್​.1 ಸೋಂಕು ಇದೀಗ ಕರ್ನಾಟಕಕ್ಕೂ ಲಗ್ಗೆ ಇಟ್ಟಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಖಚಿತಪಡಿಸಿದ್ದಾರೆ. ಇಂದು (ಡಿಸೆಂಬರ್ 26) ಮೊದಲ ಸಂಪುಟ ಉಪಸಮಿತಿ ಸಭೆ ನಡೆದಿದ್ದು, ಜೆಎನ್​.1 ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ.

ಕರ್ನಾಟಕದಲ್ಲಿ ಕೊರೋನಾ ಉಪತಳಿ ಜೆಎನ್​.1 ಸೋಂಕು ದೃಢ, ನಾಳೆಯಿಂದ ನಿತ್ಯ 5 ಸಾವಿರ ಟೆಸ್ಟಿಂಗ್
ದಿನೇಶ್ ಗುಂಡೂರಾವ್
Follow us on

ಬೆಂಗಳೂರು, (ಡಿಸೆಂಬರ್ 26): ಕೋವಿಡ್ ರೂಪಾಂತರಿ ಜೆಎನ್.1 ((COVID Subvariant JN1))ಉಪತಳಿ ಕರ್ನಾಟಕಕ್ಕೂ ಲಗ್ಗೆ ಇಟ್ಟಿದೆ. ಈ ಸಂಬಂಧ ಇಂದು(ಡಿಸೆಂಬರ್ 26) ರಾಜ್ಯ ಸಂಪುಟ ಉಪಸಮಿತಿ ಸಭೆ ನಡೆದಿದ್ದು, ಉಪತಳಿ ನಿಯಂತ್ರಣದ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ. ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪಸಮಿತಿಯ ಅಧ್ಯಕ್ಷ ದಿನೇಶ್ ಗುಂಡೂರಾವ್(Dinesh Gundu rao), ರಾಜ್ಯದಲ್ಲಿ ಜೆಎನ್.1 ಉಪತಳಿ ಹೆಚ್ಚಾಗುವ ಸಾಧ್ಯತೆಗಳಿವೆ. ನಿನ್ನೆಯ(ಡಿಸೆಂಬರ್ 25) 60 ಸ್ಯಾಂಪಲ್ಸ್ ನಲ್ಲಿ 34 JN.1 ಪ್ರಕರಣಗಳು ಪತ್ತೆಯಾಗಿವೆ. ಟೆಸ್ಟ್ ಹೆಚ್ಚಿಗೆ ಮಾಡಿದಷ್ಟು ಸ್ಪ್ರೆಡಿಂಗ್ ಗೊತ್ತಾಗುತ್ತೆ. ಹೀಗಾಗಿ ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಹಿಂದೆ ಆದ ತಪ್ಪು ಆಗಬಾರದು ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಇದು ಆಶ್ಚರ್ಯ ಪಡುವ ವಿಚಾರ ಅಲ್ಲ. ಇದು ಎಕ್ಸ್ ಪೆಕ್ಟ್ ಮಾಡಲಾಗಿತ್ತು. Variant of interest ಅಂತ WHO ತಿಳಿಸಿದೆ. ರಿಸ್ಕ್ ಫ್ಯಾಕ್ಟರಿ ಅಡೈಸರಿ ಬಂದಿಲ್ಲ. ಇದು ಸಮಾಧಾನಕರ ವಿಚಾರ. ಆದರೂ ಎಚ್ಚರಿಕೆ ಅಗತ್ಯ ಎಂದು ಹೇಳಿದರು.

ಇದನ್ನೂ ಓದಿ: Covid New Variant: JN.1 ತಳಿಗೆ ಲಸಿಕೆ ಪರಿಣಾಮಕಾರಿಯಾಗಿದೆಯೇ ಎಂಬುದನ್ನು ಪತ್ತೆಹಚ್ಚಲಿದೆ ಎನ್‌ಐವಿ

ಸಿಎಂ ಎಚ್ಚರಿಕೆಯಿಂದ ಇರಿ ಎಂದು ಸಲಹೆ ನೀಡಿದ್ದಾರೆ. ICU ಪರಿಶೀಲನೆ ನಡೆಸಲಿದ್ದೇವೆ. ಆಕ್ಸಿಜನ್ ಸಪ್ಲೈ , LMO ರಾಜ್ಯದಲ್ಲಿ ಸಜ್ಜುಗೊಳಿಸಲು ತಿಳಿಸಲಾಗಿದೆ. ಆಕ್ಸಿಜನ್ ಕೊರತೆಯಾಗದಂತೆ ಎಚ್ಚರವಹಿಸಲು ಸೂಚಿಸಲಾಗಿದೆ. 436 ಪಾಸಿಟಿವ್ ಪ್ರಕರಣಗಳ ಪೈಕಿ 400 ಜನ ಹೋಂ ಐಸೋಲೇಷನ್ ನಲ್ಲಿದ್ದಾರೆ. 7 ಜನ ಐಸಿಯು ನಲ್ಲಿದ್ದಾರೆ. ಖುದ್ದು ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ಟ್ರ್ಯಾಕಿಂಗ್ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

4 ಆಕ್ಸಿಜನ್ ಕಂಟೈನರ್ ಖರೀದಿ ಮಾಡಲಿದ್ದೇವೆ. ಆಸ್ಪತ್ರೆ ಮತ್ತು ಮನೆಯಲ್ಲಿ ಇರುವವರಿಗೆ ಈ ಆಕ್ಸಿಜನ್ ಕಂಟೈನರ್ ಉಪಯೋಗವಾಗಲಿದೆ. ಮೊದಲ ಹಾಗೂ ಎರಡನೇ ಡೋಸ್ ಪಡೆದಿದ್ದಾರೆ. ಅವರಿಗೆಲ್ಲ ಮುನ್ನೆಚ್ಚರಿಕೆಗಾಗಿ ಲಸಿಕೆ ನೀಡಲಾಗುತ್ತೆ. ಕೇಂದ್ರ ಸರ್ಕಾರದಿಂದ 30 ಸಾವಿರ ಮುನ್ನೆಚ್ಚರಿಕೆ ವ್ಯಾಕ್ಸಿನ್ ಕೇಳಿದ್ದು, ಉಪ ಸಮಿತಿಯಲ್ಲಿ ಖರೀದಿಗೆ ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು.

ಕೋ ಮಾರ್ಬಿಟ್, ಹೆಲ್ತ್ ವರ್ಕಸ್ ಸೇರಿ ಹಲವರಿಗೆ precautionary ವ್ಯಾಕ್ಸಿನ್ ಕೊಡಲಾಗುತ್ತದೆ. ಸುವೆಜ್ ಸರ್ವಲೆನ್ಸ್ ಮೂಲಕ ಕೂಡಾ ಕೊವಿಡ್ ಟ್ಯ್ರಾಕ್ ಮಾಡಲಾಗುತ್ತೆ. ಆರೋಗ್ಯ ಸಿಬ್ಬಂದಿಗೆ ಪ್ಲೂ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 30 ಸಾವಿರ ಕೋರ್ಬಿ ವ್ಯಾಕ್ಸ್ ಖರೀದಿಸಲಿದ್ದೇವೆ ಎಂದು ವಿವರಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Tue, 26 December 23