AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಭ್ರಷ್ಟಾಚಾರರಹಿತ, ಕಳಂಕರಹಿತ ರಾಜಕಾರಣ ಮಾಡುತ್ತಿದ್ದೇನೆ; ಉಗ್ರಪ್ಪ ಆರೋಪಕ್ಕೆ ತಿರುಗೇಟು ಕೊಟ್ಟ ಅಶ್ವತ್ಥ್ ನಾರಾಯಣ

ಒಬ್ಬನೇ ಒಬ್ಬ ಅಭ್ಯರ್ಥಿಗೆ ಸಹಾಯ, ಶಿಫಾರಸು ಮಾಡಲು ಆಗಲ್ಲ. ಆಪಾದನೆ ಮಾಡುವವರು ಯಾವುದನ್ನೂ ಸ್ಪಷ್ಟವಾಗಿ ಹೇಳಿಲ್ಲ. ಸುಮ್ಮನೆ ಆರೋಪಮಾಡಿ ಹೆಸರಿಗೆ ಮಸಿ ಬಳಿಯಬಾರದು. ಇಂತಹ ಕೀಳುಮಟ್ಟದ ಆರೋಪ ಮಾಡುವುದು ಸರಿಯಲ್ಲ -ಡಾ.ಅಶ್ವತ್ಥ್ ನಾರಾಯಣ

ನಾನು ಭ್ರಷ್ಟಾಚಾರರಹಿತ, ಕಳಂಕರಹಿತ ರಾಜಕಾರಣ ಮಾಡುತ್ತಿದ್ದೇನೆ; ಉಗ್ರಪ್ಪ ಆರೋಪಕ್ಕೆ ತಿರುಗೇಟು ಕೊಟ್ಟ ಅಶ್ವತ್ಥ್ ನಾರಾಯಣ
ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ
TV9 Web
| Updated By: ಆಯೇಷಾ ಬಾನು|

Updated on:May 02, 2022 | 3:12 PM

Share

ಬೆಂಗಳೂರು: ಪಿಎಸ್ಐ ಪರೀಕ್ಷಾ ಅಕ್ರಮದಲ್ಲಿ ಸಚಿವ ಡಾ.ಅಶ್ವತ್ಥ್ ನಾರಾಯಣ ಸಹೋದರ ಭಾಗಿಯಾಗಿರುವುದಾಗಿ ವಿ.ಎಸ್.ಉಗ್ರಪ್ಪ ಗಂಭೀರ ಆರೋಪ ಹಿನ್ನೆಲೆಯಲ್ಲಿ ವಿಕಾಸಸೌಧದಲ್ಲಿ ಐಟಿ-ಬಿಟಿ, ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಸುದ್ದಿಗೋಷ್ಠಿ ನಡೆಸಿ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಹಾಗೂ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಒಬ್ಬನೇ ಒಬ್ಬ ಅಭ್ಯರ್ಥಿಗೆ ಸಹಾಯ, ಶಿಫಾರಸು ಮಾಡಲು ಆಗಲ್ಲ. ಆಪಾದನೆ ಮಾಡುವವರು ಯಾವುದನ್ನೂ ಸ್ಪಷ್ಟವಾಗಿ ಹೇಳಿಲ್ಲ. ಸುಮ್ಮನೆ ಆರೋಪಮಾಡಿ ಹೆಸರಿಗೆ ಮಸಿ ಬಳಿಯಬಾರದು. ಇಂತಹ ಕೀಳುಮಟ್ಟದ ಆರೋಪ ಮಾಡುವುದು ಸರಿಯಲ್ಲ. ಇದು ಸಂಪೂರ್ಣ ದುರುದ್ದೇಶದಿಂದ ಮಾಡಿರುವ ಆರೋಪವಿದು. ರಾಜಕೀಯವಾಗಿ ದೊಡ್ಡ ಮಟ್ಟಕ್ಕೆ ಬೆಳೆಯುತ್ತಾನೆಂದು ಆರೋಪ ಮಾಡಿದ್ದಾರೆ. ಭ್ರಷ್ಟಾಚಾರ ರಹಿತವಾಗಿ ಬೆಳೆದುಬಿಟ್ಟರೆ ನಮಗೆ ಸ್ಥಾನಮಾನವಿರಲ್ಲ. ಇಂತಹ ಕೆಟ್ಟ ಆಲೋಚನೆಯಿಂದ ನನ್ನ ವಿರುದ್ಧ ಆರೋಪಿಸಿದ್ದಾರೆ. ನನ್ನ ವಿರುದ್ಧ ಆಧಾರರಹಿತವಾಗಿ ಆರೋಪವನ್ನು ಮಾಡಿದ್ದಾರೆ. ನಾನು ಭ್ರಷ್ಟಾಚಾರರಹಿತ, ಕಳಂಕರಹಿತ ರಾಜಕಾರಣ ಮಾಡುತ್ತಿದ್ದೇನೆ. ಭ್ರಷ್ಟಾಚಾರ ರಹಿತವಾಗಿ, ಪಾರದರ್ಶಕವಾಗಿ ನೇಮಕಾತಿ ನಡೆಯುತ್ತೆ. ಒಂದು ಹೇಳಿಕೆ ನೀಡಲು ಧೈರ್ಯ, ಸ್ಪಷ್ಟತೆ ಇಲ್ಲದೆ ಹೇಳಿಕೆ ನೀಡ್ತಾರೆ.

ಯಾವ ವ್ಯಕ್ತಿ ಕರೆ ಮಾಡಿದ್ದರು ಎಂದು ಡಿ.ಕೆ.ಶಿವಕುಮಾರ್ ಹೇಳಲಿ. ಅಶ್ವತ್ಥ್ ನಾರಾಯಣ ಸಿಎಂ ಆಗುತ್ತಾರೆ ಹೆಸರು ಹೇಳಬೇಡ ಅಂದಿದ್ರು. ಬಿಜೆಪಿಯ ಯಾವ ನಾಯಕರು ಕರೆ ಮಾಡಿದ್ದರು ಎಂದು ಸ್ಪಷ್ಟಪಡಿಸಲಿ. ಡಿ.ಕೆ.ಶಿವಕುಮಾರ್ ಹೇಳಿಕೆಯಲ್ಲೇ ಭಯವಿರುವುದು ಗೊತ್ತಾಗುತ್ತದೆ. ನನ್ನ ರಾಜಕೀಯ ಬೆಳವಣಿಗೆಯಿಂದ ಡಿಕೆಶಿಗೆ ಎಷ್ಟು ಭಯವಾಗುತ್ತಿದೆ. ನಾನು ಸಿಎಂ ಆಗಿಬಿಡುತ್ತೇನೆ ಎಂದು ಡಿಕೆಶಿಗೆ ಭೀತಿ ಕಾಡುತ್ತಿದೆ ಎಂದು ಡಿಕೆ ಶಿವಕುಮಾರ್ ವಿರುದ್ಧ ಗುಡುಗಿದ್ದಾರೆ.

ನನ್ನ ವಿರುದ್ಧ ಡಿ.ಕೆ.ಶಿವಕುಮಾರ್​ ಆರೋಪದಲ್ಲಿ ಷಡ್ಯಂತ್ರವಿದೆ. ಇಂದಿನಿಂದ ಡಿ.ಕೆ.ಶಿವಕುಮಾರ್​​ ಬಂಡವಾಳ ಬಿಚ್ಚಿಡುತ್ತೇನೆ. ತಪ್ಪು ಮಾಡಿದವರಿಗೆ ಕ್ಷಮೆಯಿಲ್ಲ, ಖಂಡಿತ ಶಿಕ್ಷೆಯಾಗಬೇಕು. ಆರೋಪ ಮಾಡಿದವರು ಏನಾದ್ರೂ ದಾಖಲೆ ನೀಡಿದ್ದಾರಾ? ನನ್ನ ವಿರುದ್ಧದ ಆರೋಪ ಹುನ್ನಾರ, ಷಡ್ಯಂತ್ರ, ಮ್ಯಾಚ್​ಫಿಕ್ಸಿಂಗ್​. ಎಲ್ಲೆಲ್ಲಿ ಮ್ಯಾಚ್ ಫಿಕ್ಸ್ ಮಾಡಿದ್ದಾರೆ ಎಂದು ಡಿಕೆಶಿ ಕೇಳಬೇಕು. ನಮ್ಮ ಕುಟುಂಬದಲ್ಲಿ ಇಂತಹ ಪದ್ಧತಿ, ಅಧಿಕಾರ ದುರ್ಬಳಕೆಯಿಲ್ಲ. ಈ ಮೊದಲು ಡಿಕೆಶಿ ವಿರುದ್ಧ ವಿ.ಎಸ್.ಉಗ್ರಪ್ಪ ಆರೋಪ ಮಾಡಿದ್ದರು. ಕೆಪಿಸಿಸಿ ಕಚೇರಿಯಲ್ಲೇ ಕುಳಿತು ಡಿಕೆಶಿ ಕಡುಭ್ರಷ್ಟ ಎಂದು ಹೇಳಿದ್ದರು. ಇಂತಹ ವ್ಯಕ್ತಿ ನನ್ನ ವಿರುದ್ಧ ಆರೋಪ ಮಾಡಿರುವುದು ಎಷ್ಟು ಸರಿ. ಇಂತಹ ನೂರು ಆರೋಪ ಮಾಡಿದರೂ ಏನೇನೂ ಆಗುವುದಿಲ್ಲ. ನೂರು ಜನ್ಮವೆತ್ತಿ ಬಂದರೂ ನನ್ನ ಹೆಸರಿಗೆ ಮಸಿ ಬಳಿಯಲಾಗಲ್ಲ. ಉಗ್ರಪ್ಪ, ಡಿಕೆಶಿ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಮಿಸ್ಟರ್ ಮೋದಿ ಎಲ್ಲಿದ್ಯಪ್ಪಾ, ಕರ್ನಾಟಕದ ಬ್ರಹ್ಮಾಂಡ ಭ್ರಷ್ಟಾಚಾರ ಗಮನಕ್ಕೆ ಬಂದಿಲ್ಲವೇ: ಉಗ್ರಪ್ಪ ಪ್ರಶ್ನೆ

Published On - 2:24 pm, Mon, 2 May 22

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ