AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SCP ಅನುದಾನವನ್ನು ಸಮರ್ಪಕವಾಗಿ ಬಳಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವ ಡಾ.ಹೆಚ್​ಸಿ ಮಹದೇವಪ್ಪ

ಇಂದು(ಜೂ.24) ವಿಕಾಸ ಸೌಧದಲ್ಲಿ ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್​.ಸಿ ಮಹದೇವಪ್ಪನವರು ಸರ್ಕಾರದ ಎಲ್ಲಾ ಇಲಾಖೆಗಳ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿ, ಎಸ್​ಇಪಿ (SCP) ಯೋಜನೆಯಡಿಯಲ್ಲಿನ ಎಲ್ಲಾ ಇಲಾಖೆಗಳಲ್ಲಿ, ಪರಿಶಿಷ್ಟ ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಇರುವ ಅನುದಾನವನ್ನು ಸಮರ್ಪಕವಾಗಿ ಬಳಸಬೇಕೆಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು.

SCP ಅನುದಾನವನ್ನು ಸಮರ್ಪಕವಾಗಿ ಬಳಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವ ಡಾ.ಹೆಚ್​ಸಿ ಮಹದೇವಪ್ಪ
ಡಾ.ಹೆಚ್​.ಸಿ ಮಹದೇವಪ್ಪ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 24, 2023 | 11:37 AM

Share

ಬೆಂಗಳೂರು: ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್​.ಸಿ ಮಹದೇವಪ್ಪ(HC Mahadevappa)ನವರು ಇಂದು(ಜೂ.24) ವಿಕಾಸ ಸೌಧದಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿ, ಎಸ್​ಇಪಿ (SCP) ಯೋಜನೆಯಡಿಯಲ್ಲಿನ ಎಲ್ಲಾ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಇರುವ ಅನುದಾನವನ್ನು ಸಮರ್ಪಕವಾಗಿ ಬಳಸಬೇಕೆಂದು ಕಟ್ಟು ನಿಟ್ಟಿನ ಸೂಚನೆ ನೀಡಿದ್ದು, ಅದರಲ್ಲೂ ಪರಿಶಿಷ್ಟ ಜಾತಿಯ ಜನರ ಶಿಕ್ಷಣ, ಆರೋಗ್ಯ, ಆಹಾರ, ಕೌಶಲ್ಯ ತರಬೇತಿಯೊಂದಿಗೆ ಅವರ ಘನತೆಯುಕ್ತ ಬದುಕಿಗೆ ಪೂರಕವಾಗಿ ಆಡಳಿತವನ್ನು ನೀಡಬೇಕೆಂದು ತಿಳಿಸಿದರು.

SCP ಅನುದಾನದ ಸಮರ್ಪಕ ಬಳಕೆಗೆ ಸೂಚನೆ

ಪರಿಶಿಷ್ಟ ಜಾತಿ ವರ್ಗದ ಜನರ ಏಳಿಗೆಗಾಗಿ ಈ ಹಿಂದೆ ಜಾರಿಗೊಳಿಸಲಾಗಿದ್ದ ಎಸ್​ಇಪಿ ಕಾಯ್ದೆಯ ಹಣವನ್ನು ಬೇರೆ ಇಲಾಖೆಗಳಿಗೆ ವರ್ಗಾಯಿಸಿರುವುದು SCP ಕಾಯ್ದೆಯ ಆಶಯಕ್ಕೆ ವಿರುದ್ಧವಾಗಿದ್ದು, ಈ ಕಾಯ್ದೆಯ ನಿಯಮಾವಳಿಯಂತೆ SCP ಕಾಯ್ದೆಯ ಹಣವನ್ನು ಪರಿಶಿಷ್ಟ ಜಾತಿಯ ಜನರ ಏಳಿಗೆಗೆ ಮಾತ್ರವೇ ಬಳಸಬೇಕು ಎಂದು ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕಾಯ್ದೆಗಳನ್ನು ಮಾಡುವುದು ಜನರ ಅನುಕೂಲಕ್ಕಾಗಿಯೇ ಹೊರತು ಕಾಯ್ದೆಯನ್ನು ಉಲ್ಲಂಘಿಸಲು ಅಲ್ಲ. ಈ ಹಿನ್ನಲೆಯಲ್ಲಿ ಎಸ್​ಇಪಿ ಕಾಯ್ದೆಯಡಿ ನಿಗದಿ ಪಡಿಸಿರುವ ಅನುದಾನವನ್ನು ಎಲ್ಲಾ ಇಲಾಖೆಗಳು ಸಮರ್ಪಕವಾಗಿ ಬಳಸಿಕೊಂಡು ಜನರ ಬದುಕಿಗೆ ಸಹಾಯ ಮಾಡಬೇಕು. ಇದರ ಜೊತೆಗೆ ಎಲ್ಲಾ ಇಲಾಖೆಗಳು ಪರಸ್ಪರ ಸಹಕಾರದೊಂದಿಗೆ ಕೆಲಸ ಮಾಡುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ:ಬೆಂಗಳೂರು ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

ಅತ್ಯಂತ ಮುಖ್ಯವಾಗಿ ಯಾವುದೇ ಕಾರಣಕ್ಕೂ SCP ಕಾಯ್ದೆಯ ಹಣವನ್ನು ಬೇರೆಡೆಗೆ ವರ್ಗಾಯಿಸದೇ ಪರಿಶಿಷ್ಟ ಜಾತಿಯ ಜನರ ಏಳಿಗೆಗೆ ಬಳಸಬೇಕು ಮತ್ತು ಯೋಜನೆಯ ಅನುಕೂಲಗಳು ಮಧ್ಯವರ್ತಿಗಳನ್ನು ದಾಟಿ ನಿಜವಾದ ಫಲಾನುಭವಿಗಳಿಗೆ ದೊರಕಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ವೇಳೆ ಎಲ್ಲಾ ಇಲಾಖೆಗಳಲ್ಲಿ SCP ಉದ್ದೇಶಕ್ಕಾಗಿ ಇರುವ ಅನುದಾನದ ಬಳಕೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆಯನ್ನು ನಡೆಸಿದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ